ಕೋವಿಡ್‌ 19: ಕಠಿಣ ಪರಿಸ್ಥಿತಿಗೆ ಸಜ್ಜಾಗಿ

Team Udayavani, Jul 1, 2020, 7:14 AM IST

stiti

ರಾಮನಗರ: ಕೋವಿಡ್‌-19 ಸೋಂಕಿನ ಎಂತಹದ್ದೇ ಪರಿಸ್ಥಿತಿ ಎದುರಾದರೂ, ಅದನ್ನು ನಿಭಾಯಿಸಲು ಸಿದ್ಧರಾಗಿರಿ ಎಂದು ಜಿಲ್ಲಾಡಳಿತಕ್ಕೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಜಿ.ಜಗದೀಶ್‌ ಸೂಚನೆ ನೀಡಿದರು. ನಗರದ ಸರ್ಕಾರಿ  ಕಚೇರಿಗಳ ಸಂಕೀರ್ಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಮುಂಬರುವ ದಿನಗಳಲ್ಲಿ ಪರಿಸ್ಥಿತಿಯನ್ನು ಎದುರಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದರು.

ಆಕ್ಸಿನೇಟರ್‌ ಬಳಸಿ: ಕೋವಿಡ್‌-19 ಸೋಂಕಿರುವ ರೋಗಿಗಳಲ್ಲಿ ಹಠಾತ್‌ ಆಮ್ಲಜನಕದ ಪ್ರಮಾಣದಲ್ಲಿ ಕುಸಿತವಾಗಿ ಜೀವಕ್ಕೆ ಹೆಚ್ಚಿನ ಅಪಾಯ ತಂದೊಡ್ಡುತ್ತದೆ. ಹೀಗಾಗಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರಿಗೂ  ದಿನದಲ್ಲಿ 3 ಬಾರಿಯಾದರೂ ಆಕ್ಸಿನೇಟರ್‌ ಬಳಸಿಕೊಂಡು, ಅದರ ದೇಹದ ಆಮ್ಲಜನಕದ ಪ್ರಮಾಣ ಅಳೆಯಬೇಕು. ಅದಕ್ಕನುಗುಣವಾಗಿ ಚಿಕಿತ್ಸೆಗೆ ಕ್ರಮಕೈಗೊಳ್ಳುವಂತೆ ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಐದು ಸಾವು ಸಂಭವಿಸಿರುವುದು ವಿಷಾದನೀಯ. ಮುಂದಿನ ದಿನಗಳಲ್ಲಿ ಸಾವು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ವೈದ್ಯರು ಮತ್ತು ವೈದ್ಯಕಿಯ ಸಿಬ್ಬಂದಿಗೆ ತಾಕೀತು ಮಾಡಿದರು.

ಖಾಸಗಿ ನರ್ಸಿಂಗ್‌ ಹೋಂ ಜೊತೆ ಮಾತನಾಡಲು ಸಲಹೆ: ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲೆಯ 15 ರಿಂದ 20 ಹಾಸಿಗೆಗಳ ನರ್ಸಿಂಗ್‌ ಹೋಂ ಇಲ್ಲವೆ ಆಸ್ಪತ್ರೆಗಳನ್ನು ಕೋವಿಡ್‌-19 ಸೋಂಕು  ಅಲ್ಲದ ರೋಗಿಗಳ ಚಿಕಿತ್ಸೆಗೆ ಗೊತ್ತು ಮಾಡಿಕೊಳ್ಳಬೇಕು. ಆಸ್ಪತ್ರೆಯಲ್ಲಿ ದಾಖಲಾಗಬೇಕಾದ ಇನ್ನಿತರ ರೋಗಿಗಳಿಗೆ ಇಲ್ಲಿ ಚಿಕಿತ್ಸೆಗೆ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲ ತಾಲೂಕುಗಳಲ್ಲಿ ಕ್ರಮ ವಹಿಸಲು ಸೂಚನೆ: ಪ್ರತಿ ತಾಲೂಕಿನಲ್ಲೂ ಕೋವಿಡ್‌-19 ಪರಿಸ್ಥಿತಿ ನಿಭಾಯಿಸಲು ಸಜ್ಜುಗೊಳಿಸಬೇಕು. ತಾಲೂಕುಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಕೋವಿಡ್‌-19ಗೆ ಚಿಕಿತ್ಸೆ ನೀಡಲು ಸಿದ್ಧಪಡಿಸಬೇಕು. ಅವಶ್ಯವಿದ್ದರೆ ಪಕ್ಷದಲ್ಲಿ ವಸತಿ ನಿಲಯಗಳು ಮತ್ತು ಕಲ್ಯಾಣ ಮಂಟಪಗಳನ್ನು ತಾತ್ಕಾಲಿಕವಾಗಿ ಆಸ್ಪತ್ರೆಗಳನ್ನಾಗಿ ಮಾರ್ಪಾಡಿಸಿಕೊಂಡು ಕೋವಿಡ್‌-19 ರೋಗಿಗಳನ್ನು ಉಪಚರಿಸುವ ವ್ಯವಸ್ಥೆ ಮಾಡಿಕೊಳ್ಳುವಂತೆ  ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿಗಳು ಸಲಹೆ ನೀಡಿದರು.

ಡೀಸಿ ಎಂ.ಎಸ್‌.ಅರ್ಚನಾ, ಜಿಪಂ ಸಿಇಒ ಇಕ್ರಂ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನೂಪ್‌ ಎ. ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್‌ ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ  ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.