ಕೋವಿಡ್‌ ಲಸಿಕೆಗೆ ಅರ್ಹರ ನಿಖರ ಮಾಹಿತಿ ಸಂಗ್ರಹಿಸಿ

Team Udayavani, Nov 6, 2020, 5:40 PM IST

ಕೋವಿಡ್‌ ಲಸಿಕೆಗೆ ಅರ್ಹರ ನಿಖರ ಮಾಹಿತಿ ಸಂಗ್ರಹಿಸಿ

ರಾಮನಗರ: ವಿಶ್ವ ಆರೋಗ್ಯ ಸಂಸ್ಥೆ ಒಪ್ಪಿಗೆ ನೀಡಿದರೆ 2021ರ ಆರಂಭದಲ್ಲೇ ಕೋವಿಡ್‌ 19 ಸೋಂಕಿಗೆ ಲಸಿಕೆ ಲಭ್ಯವಾಗುವ‌  ಸಾಧ್ಯತೆ ಇರುವು‌ರಿಂದ ‌ ಮೊದಲ ಹಂತ‌ದಲ್ಲಿ ಕೋವಿಡ್ ಗೆ ನೀಡಬೇಕಿದ್ದು, ಅರ್ಹರ ನಿಖರ ಮಾಹಿತಿ ಸಂಗ್ರಹಿಸುವಂತೆ ಜಿಲ್ಲಾಧಿಧಿಕಾರಿ ಎಂ.ಎಸ್‌.ಅರ್ಚನಾ ಆರೋಗ್ಯ ಇಲಾಖೆಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಸರ್ಕಾರಿ ಕಚೇರಿ ಸಂಕಿರ್ಣದಲ್ಲಿ ನಡೆದ ಕೋವಿಡ್‌ 19 ಲಸಿಕೆ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದರು. ಮೊದಲ ಹಂತದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್‌ ಇಲಾಖೆ ವ್ಯಾಪ್ತಿಗೆ ಬರುವ ವೈದ್ಯಾಧಿಕಾರಿ, ಆರೋಗ್ಯ ಸಿಬ್ಬಂದಿ, ಖಾಸಗಿ ಆಸ್ಪತ್ರೆ / ಕ್ಲಿನಿಕ್‌ ವೈದ್ಯರು, ಆರೋಗ್ಯ ಸಿಬ್ಬಂದಿ, ಮೆಡಿಕಲ್ ಕಾಲೇಜು ಹಾಗೂ ಪ್ಯಾರಾ ಮೆಡಿಕಲ್ ಕಾಲೇಜಿನ ವೈದ್ಯರು, ಆರೋಗ್ಯ ಸಿಬ್ಬಂದಿ, ವಿದ್ಯಾರ್ಥಿಗಳು, ಆಶಾ ಕಾರ್ಯ ಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಬೇಕಾಗಿದೆ. ಹೀಗಾಗಿ ಅವರ ವಿವರವನ್ನು ಸರ್ಕಾರ  ತಿಳಿಸಿರುವನಮೂನೆಯಲ್ಲಿ ಸಿದ್ಧಪಡಿಸಿ ಸಲ್ಲಿಸಿ ಎಂದು ಸಲಹೆ ನೀಡಿದರು.

ಸರ್ಕಾರದ ವ್ಯಾಪ್ತಿಯ ಅಧಿಕಾರಿಗಳು, ಸಿಬ್ಬಂದಿ ಮಾಹಿತಿ ಇಲಾಖೆಯಲ್ಲೇ ಲಭ್ಯವಿದೆ. ತಾಲೂಕು ವೈದ್ಯಾಧಿಕಾರಿಗಳು ತಮ್ಮ ತಾಲೂಕಿನಲ್ಲಿ ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳ ವೈದ್ಯರ ಸಭೆ ನಡೆಸಿ ಮಾಹಿತಿಯನ್ನು ಶೀಘ್ರ ಪಡೆದುಕೊಳ್ಳಲು ಕ್ರಮ ವಹಿಸಿ ಎಂದರು.

ಕೋಲ್ಡ್‌ ಸ್ಟೋರೇಜ್‌ ವ್ಯವಸ್ಥೆ ಮಾಡಿ: ಜಿಪಂ ಸಿಇಒ ಇಕ್ರಂ ಮಾತನಾಡಿ, ಮೊದಲ ಹಂತದಲ್ಲಿ ಜಿಲ್ಲೆಯ ಜನಸಂಖ್ಯೆಯ ಶೇ.3 ಜನರಿಗೆ ಲಸಿಕೆ ನೀಡಲು ಸರ್ಕಾರ ‌ ಹಾಗೊಮ್ಮೆ ಸೂಚಿಸಿದರೆ ಜಿಲ್ಲೆಯಲ್ಲಿ ಅಂದಾಜು 36000 ಜನರಿಗೆ ಲಸಿಕೆ ನೀಡಬೇಕಾಗಿದೆ. ಇದಕ್ಕೆ ತಕ್ಕ ಸಿದ್ಧತೆ ಮಾಡಿಕೊಳ್ಳಬೇಕು. ಲಸಿಕೆ ಸಂಗ್ರಹಿಸಲು ಬೇಕಿರುವ‌ ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಈಗಲೇ ಆರಂಭ‌ವಾಗಲಿ ಎಂದರು.

ವಿಶ್ವ ಆರೋಗ್ಯ ಸಂಸ್ಥೆ ಒಪ್ಪಿಗೆ ಬೇಕು: ವಿಶ್ವ ಆರೋಗ್ಯ ಸಂಸ್ಥೆಯ ಎಸ್‌ಎಂಒ ಡಾ.ನಾಗರಾಜು ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆ ಕೋವಿಡ್‌ ಸೋಂಕು ಲಸಿಕೆ ಗುಣಮಟ್ಟ ಪರೀಕ್ಷಿಸಿ ಒಪ್ಪಿಗೆ ನೀಡಬೇಕು. ಬಹುಶಃ 2021ರ ಮೊದಲ ತ್ತೈ ಮಾಸಿಕದಲ್ಲಿ ಜನಸೇವೆಗೆ ಲಭ್ಯವಾಗುವ ನಿರೀಕ್ಷೆ ಇದೆ. ಲಸಿಕೆಯನ್ನು ಎಲ್ಲಾ ದೇಶಗಳಿಗೆ ಸಮಾನವಾಗಿ ನೀಡಬೇಕಿರುವ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಶೇ.3 ಜನಸಂಖ್ಯೆಗೆ ಲಸಿಕೆ ನೀಡಲು ಯೋಜಿಸಲಾಗುತ್ತಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ .ನಿರಂಜನ್‌, ಸರ್ಕಾರೇತರ ಸಂಸ್ಥೆಗಳಾದ ರೋಟರಿ, ಲಯನ್ಸ್‌, ರೆಡ್‌ ಕ್ರಾಸ್‌ ಇತರ ಸಂಘ ಸಂಸ್ಥೆಗಳು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.

ಆರೋಗ್ಯ ಇಲಾಖೆ ಆರ್‌ಸಿಎಚ್‌ ಅಧಿಕಾರಿ ಡಾ.ಪದ್ಮಾ, ಡಿಟಿಒ ಡಾ.ಕುಮಾರ್‌, ಡಿಎಂಒ ಡಾ.ಪ್ರಸನ್ನಕುಮಾರ್‌, ಡಿಎಲ್ಒ ಡಾ.ಮಂಜುನಾಥ್‌, ಜಿಲ್ಲಾ ಶಸ್ತಚಿಕಿತ್ಸಕ ಡಾ.ಶಶಿಧರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸಿ.ವಿ.ರಾಮನ್‌, ತಾಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.