ಸಮರ್ಪಣಾ ಮನೋಭಾವದಿಂದ ದೇಣಿಗೆ ನೀಡಿ
Team Udayavani, Feb 8, 2021, 4:41 PM IST
ಕುದೂರು: ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಾಡಿನ ಪ್ರತಿಯೊಬ್ಬ ನಾಗರಿಕರು ಸಮರ್ಪಣಾ ಮನೋಭಾವದಿಂದ ದೇಣಿಗೆ ನೀಡಬೇಕು ಎಂದು ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಪಟ್ಟಣದಲ್ಲಿ ರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ ಚಾಲನೆ ನೀಡಿ ಮಾತನಾಡಿ, ರಾಮ ಮಂದಿರ ಹಿಂದೂಗಳ ಪವಿತ್ರ ಶ್ರದ್ಧಾಕೇಂದ್ರವಾಗಲಿದೆ. ನಾವಿರುವ ದಿನಗಳಲ್ಲೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ನೋಡುವ ಭಾಗ್ಯ ಸಿಕ್ಕಿದೆ. ಇದು ನಮ್ಮ ಪುಣ್ಯ. ಪ್ರತಿಯೊಬ್ಬರು ಬೇಧ ಭಾವವಿಲ್ಲದೇ ಕೈಲಾದ ದೇಣಿಗೆ ನೀಡುತ್ತಿದ್ದು, ಇದೊಂದು ಬೃಹತ್ ಅಭಿಯಾನವಾಗಿದೆ. ಶ್ರೀರಾಮನ ತತ್ವಾದರ್ಶದಡಿ ದೇಶ ನಿರ್ಮಾಣವಾಗಲಿದೆ ಎಂದರು.
ಜಿಲ್ಲಾ ಪ್ರಮುಖ ಗುರುಪ್ರಸಾದ್ ಮಾತನಾಡಿ, ಹಿಂದೂಗಳ ಕನಸಾಗಿದ್ದ ರಾಮ ಮಂದಿರ ನಿರ್ಮಾಣಕ್ಕೆ ಎಲ್ಲರೂ ದೇಣಿಗೆ ನೀಡಿ ಶ್ರೀರಾಮನ ಕೃಪೆಗೆ ಪಾತ್ರರಾಗಬೇಕು ಎಂದು ಹೇಳಿದರು.
ಇದನ್ನೂ ಓದಿ :“ರಾಗ ಭೈರವಿ’ ಪ್ರೀಮಿಯರ್ ಶೋ ಪ್ರದರ್ಶನ
ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಜಿ. ರಂಗಧಾಮಯ್ಯ ಮಾತನಾಡಿ, ಶ್ರೀರಾಮ ಮಂದಿರ ರಾಷ್ಟ್ರೀಯ ಶ್ರದ್ಧಾ ಕೇಂದ್ರವಾಗಿ ಮೂಡಿಬರಲಿದೆ. ವಿವಿಧ ಕಂಪನಿ ಹಾಗೂ ಭಕ್ತರಿಂದ ಸಂಗ್ರಹವಾದ 19 ಲಕ್ಷಕ್ಕೂ ಹೆಚ್ಚು ರೂ.ಗಳ ಚೆಕ್ ಅನ್ನು ಡಿಸಿಎಂ ಗೆ ಹಸ್ತಾಂತರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು, ತಾಲೂಕು ಬಜೆಪಿ ಅಧ್ಯಕ್ಷ ಬಿ.ಎಂ.ಧನಂಜಯ, ತಹಶೀಲ್ದಾರ್ ಬಿ.ಜಿ.ಶ್ರೀನಿವಾಸ್, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಡಾ.ಎಚ್. ಎಂ.ಕೃಷ್ಣಮೂರ್ತಿ, ಪ್ರಸಾದ್ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ನಿನಗೆ ಬೇರೆ ಹೆಸರು ಬೇಕೇ.. ಸ್ತ್ರೀ ಎಂದರೆ ಅಷ್ಟೇ ಸಾಕೆ..!
Live; ರಾಜ್ಯ ಬಜೆಟ್ ಮಂಡಿಸಿದ ಬಿಎಸ್ ವೈ; ಬಜೆಟ್ ಮಂಡನೆ ವಿರೋಧಿಸಿ ಕಾಂಗ್ರೆಸ್ ಸಭಾತ್ಯಾಗ
ಮೀಸಲಿಗಾಗಿ ಪಂಚಮಸಾಲಿ ಹೋರಾಟ : ಸ್ವಾಮೀಜಿ ಮನವೊಲಿಕೆಗೆ ತೆರೆಮರೆ ಯತ್ನ?
ಕೊಡಗಿನಲ್ಲಿ ವ್ಯಾಘ್ರ ಅಟ್ಟಹಾಸ: 8 ವರ್ಷದ ಬಾಲಕನನ್ನು ಕೊಂದು ಹಾಕಿದ ಹುಲಿ
ಸುದ್ದಿ ಸುತ್ತಾಟ : ಹನಿಟ್ರ್ಯಾಪ್ ಮಾಯಾಜಾಲದ ಹಿಂದೆ – ಮುಂದೆ