ವಿದ್ಯುತ್‌ ಕಂಬ ತಯಾರಿಕೆ ಘಟಕದಿಂದ ರೈತರ ಬೆಳೆ ನಾಶ

ಬೆಳೆ ಬೆಳೆಯಲಾಗದೆ ರೈತರು ಕಂಗಾಲು | ಅಧಿಕಾರಿಗಳು ರೈತರಿಗೆ ನ್ಯಾಯ ಕಲ್ಪಿಸಿಲ್ಲ

Team Udayavani, Jul 10, 2019, 1:31 PM IST

rn-tdy-2..

ನಾರಸಂದ್ರದ ವಿದ್ಯುತ್‌ ಕಂಬ ತಯಾರಿಕಾ ಘಟಕ ಸ್ಥಗಿತಗೊಳಿಸಲು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸಂಚಾಲಕ ದೊಡ್ಡಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಮಾಗಡಿ: ತಾಲೂಕಿನ ನಾರಸಂದ್ರ ಗ್ರಾಪಂನಲ್ಲಿ ಖಾಸಗಿ ಕಂಪನಿಯೊಂದು ಅಕ್ರಮ ವಿದ್ಯುತ್‌ ಕಂಬ ತಯಾರಿಕೆ ಘಟಕ ಸ್ಥಾಪನೆಯಿಂದ ರೈತರ ಬೆಳೆ ನಾಶವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪಾರದರ್ಶಕವಾಗಿ ತನಿಖೆ ನಡೆಸಬೇಕು. ರೈತರಿಗೆ ಆಗುವ ಅನ್ಯಾಯವನ್ನು ಸರಿಪಡಿಸಿ, ನ್ಯಾಯ ದೊರಕಿಸಿಕೊಡಬೇಕು ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ದೊಡ್ಡಯ್ಯ ಹಾಗೂ ರೈತರು ಅಕ್ರಮ ಘಟಕ ಮುಚ್ಚುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ನಾರಸಂದ್ರದ ರೈತರ ತೋಟ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಗಡಿ ತಾಲೂಕಿನ ನಾರಸಂದ್ರ ಸರ್ವೇ ನಂ.200/2ರಲ್ಲಿ ಭೂ ಮಾಲೀಕರಾದ ಪ್ರತಿಭಾ ಶರತ್‌ಗೌಡ ಭೂ ಪರಿವರ್ತನೆ ಮಾಡದೇ 2016ರಿಂದ ಅಕ್ರಮವಾಗಿ ವಿದ್ಯುತ್‌ ಕಂಬ ತಯಾರಿಕಾ ಘಟಕ ಸ್ಥಾಪಿಸಿದ್ದಾರೆ. ವಿದ್ಯುತ್‌ ಕಂಬ ತಯಾರಿಸುವ ಘಟಕದಿಂದ ಹೊರ ಸೂಸುವ ಸೀಮೆಂಟ್, ಜಲ್ಲಿ ಧೂಳು ರೈತರ ಬೆಳೆಗಳ ಮೇಲೆ ಬೀಳುತ್ತಿದೆ. ರೈತರು ಬೆಳೆದ ರೇಷ್ಮೆ, ಅಡಿಕೆ, ಬಾಳೆ, ತೆಂಗು, ಸೀಬೆ, ಮಾವು ನಾಶವಾಗುತ್ತಿದೆ ಎಂದು ಆರೋಪಿಸಿದರು.

ರೈತರಿಗೆ ಅನ್ಯಾಯ: ವ್ಯವಸಾಯವನ್ನೇ ಬದುಕು ಮಾಡಿಕೊಂಡಿರುವ ರೈತರು, ಬೆಳೆ ಬೆಳೆಯಲಾಗದೆ ಬೆಳೆ ನಷ್ಟದಿಂದ ಕಂಗಾಲಾಗಿದ್ದಾರೆ. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸಹ ಯಾವೊಬ್ಬ ಅಧಿಕಾರಿಗಳು ರೈತರ ಭೂಮಿಗೆ ಭೇಟಿ ನೀಡಿಲ್ಲ. ರೈತರಿಗೆ ಬೆಳೆ ನಷ್ಟದ ಪರಿಹಾರವನ್ನು ಕೊಡಿಸಬೇಕು. ಅಕ್ರಮವಾಗಿ ತೆರೆದಿರುವ ವಿದ್ಯುತ್‌ ಕಂಬ ತಯಾರಿಕಾ ಘಟಕ ಮತ್ತು ರೈತರ ಭೂಮಿ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಮನವಿ ಮಾಡಿದರೂ ಪ್ರಯೋಜನವಿಲ್ಲ: ಪ್ರಗತಿಪರ ರೈತ ಎಂ. ಶ್ರೀನಿವಾಸಮೂರ್ತಿ ಮಾತನಾಡಿ, ಸುಮಾರು 30 ವರ್ಷಗಳಿಂದಲೂ ನಾವು ರೇಷ್ಮೆ ಬೆಳೆ ಬೆಳೆಯುತ್ತಿದ್ದೇವೆ. ತಮ್ಮ ಜಮೀನನ ಪಕ್ಕದಲ್ಲೇ ಅಕ್ರಮವಾಗಿ ವಿದ್ಯುತ್‌ ಕಂಬ ತಯಾರಿಕಾ ಘಟಕ ಸ್ಥಾಪನೆ ಮಾಡಿದ್ದಾರೆ. ಘಟಕದಿಂದ ಹೊರಬರುವ ಸೀಮೆಂಟ್ ಮತ್ತು ಜಲ್ಲಿ ಧೂಳಿನಿಂದ ನಮ್ಮ ಬೆಳೆ ನಷ್ಟವಾಗುತ್ತಿದೆ. ರೇಷ್ಮೆ ಹುಳುಗಳು ಧೂಳಿನಿಂದ ಕೂಡಿರುವ ರೇಷ್ಮೆ ಎಲೆ ತಿಂದು ಹುಳುಗಳು ಸಾಯುತ್ತಿವೆ. ಇದರಿಂದ ತಮಗೆ ರೇಷ್ಮೆ ಬೆಳೆ ನಷ್ಟವಾಗಿದೆ. ವರ್ಷಕ್ಕೆ 6 ಬೆಳೆಗಳನ್ನು ತೆಗೆಯುತ್ತಿದ್ದೇವು ಲಕ್ಷಾಂತರ ನಷ್ಟವಾಗಿದೆ. ಧೂಳು ತಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರೂ ಪ್ರಯೋಜನವಿಲ್ಲ. ನಮ್ಮನ್ನೇ ಒಕ್ಕಲೆಬ್ಬಿಸುವ ಹುನ್ನಾರ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕು. ಅಕ್ರಮವಾಗಿ ವಿದ್ಯುತ್‌ ಕಂಬ ತಯಾರಿಸುವ ಘಟಕವನ್ನು ಸ್ಥಗಿತಗೊಳಿಸಬೇಕು. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.

ಯಾವುದೇ ಭೂ ಪರಿವರ್ತನೆ ಮಾಡಿಲ್ಲ: ನಾರಸಂದ್ರ ಗ್ರಾಪಂ ಪಿಡಿಒ ನಂದಕುಮಾರ್‌ ಮಾತನಾಡಿ, ನಾರಸಂದ್ರ ಗ್ರಾಮದ ಸರ್ವೇ ನಂ.200/2ರ ಜಮೀನಿಗೆ ಸಂಬಂಧಿಸಿದಂತೆ ಯಾವುದೇ ಭೂ ಪರಿವರ್ತನೆ ಮಾಡದೇ ವಿದ್ಯುತ್‌ ಕಂಬ ತಯಾರಿಕ ಘಟಕ ಸ್ಥಾಪನೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಖಾತೆದಾರರಾದ ಪ್ರತಿಭಾ ಶರತ್‌ಗೌಡಗೆ ನೋಟಿಸ್‌ ಜಾರಿ ಮಾಡಿದ್ದೇವೆ. ಪಂಚಾಯ್ತಿಯಿಂದ 2016ರಲ್ಲೇ ಎನ್‌ಒಸಿ ಮತ್ತು ಪರವಾನಗಿ ಪಡೆದಿದ್ದಾರೆ. ಪ್ರತಿವರ್ಷ ಗ್ರಾಪಂಗೆ 65 ಸಾವಿರ ರೂ. ತೆರಿಗೆ ಕಟ್ಟಿದ್ದಾರೆ. ಪ್ರಸ್ತುತ ವರ್ಷದಲ್ಲಿ 75 ಸಾವಿರ ರೂ. ಪಂಚಾಯ್ತಿ ಪಡೆಯಲಾಗಿದೆ ಎಂದರು.

ಘಟಕದಿಂದ ತೋಟದ ಬೆಳೆ ನಷ್ಟ: ಘಟಕದ ಪಕ್ಕದ ತೋಟದ ರೈತ ಎಂ.ಶ್ರೀನಿವಾಸಮೂರ್ತಿ ಅವರು ಘಟಕದಿಂದ ತೋಟದ ಬೆಳೆ ನಷ್ಟವಾಗುತ್ತಿದೆ. ಘಟಕ ರದ್ದುಪಡಿಸುವಂತೆ ಅರ್ಜಿ ಕೊಟ್ಟಿದ್ದಾರೆ. ಘಟಕಕ್ಕೆ ಪೂರೈಕೆಯಾಗುವ ಸೀಮೆಂಟ್, ಜಲ್ಲಿ ಲಾರಿಗಳ ಸಂಚಾರದಿಂದ ರಸ್ತೆ ಹಾಳುತ್ತಿದೆ. ರೈತರ ಬೆಳೆ ಸಹ ನಷ್ಟವಾಗುತ್ತಿರುವ ಕುರಿತು ಸಾಮಾನ್ಯ ಸಭೆಯಲ್ಲಿ ಪ್ರಸ್ತಾವನೆಯಿಟ್ಟು ಘಟಕ ರದ್ದುಪಡಿಸುವ ಕುರಿತು ಚರ್ಚಿಸಲಾಗುವುದು. ಅನಂತರ ಸಂಬಂಧಪಟ್ಟ ಮೂಲಕ ಮೇಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ರೈತರಾದ ದರ್ಶನ್‌ಗೌಡ, ಮಂಜುನಾಥ್‌, ಲೋಕೇಶ್‌, ಗೋವಿಂದರಾಜು, ಯಲ್ಲಮ್ಮ, ದೇವಿರಮ್ಮ ಹಾಜರಿದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.