ರೋಗಕ್ಕೆ ಮಾಲಿನ್ಯ, ಆಹಾರ ಪದ್ಧತಿ ಕಾರಣ

ಯಾಂತ್ರಿಕ ಯುಗದಲ್ಲಿ ಆರೋಗ್ಯದತ್ತ ಕಾಳಜಿ ಕಡಿಮೆ • ಗ್ರಾಮೀಣ ಜನರಿಗೆ ಆರೋಗ್ಯ ಶಿಬಿರ ಸಹಕಾರಿ

Team Udayavani, Jul 26, 2019, 12:01 PM IST

rn-tdy-1

ರಾಮನಗರದ ಮೆಳೇಹಳ್ಳಿ ಗ್ರಾಮದಲ್ಲಿ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯ ನಡೆಸಿದರು.

ರಾಮನಗರ: ಬದಲಾದ ಆಹಾರ ಪದ್ಧತಿ ಹಾಗೂ ಪರಿಸರ ಮಾಲಿನ್ಯದಿಂದ ಅನೇಕ ರೀತಿಯ ಕಾಯಿಲೆಗಳು ಜನಸಾಮಾನ್ಯರನ್ನು ಕಾಡುತ್ತಿವೆ ಎಂದು ಕ್ರೈಸ್ಟ್‌ ಅಕಾಡೆಮಿ ಇನ್‌ಸ್ಟಿಟ್ಯೂಟ್ ಫಾರ್‌ ಅಡ್ವಾನ್ಸ್‌ ಸ್ಟಡೀಸ್‌ ನಿರ್ದೇಶಕ ಫಾದರ್‌ ಆಂಟೋನಿ ಅಭಿಪ್ರಾಯಪಟ್ಟರು.

ತಾಲೂಕಿನ ಮೆಳೇಹಳ್ಳಿ ಗ್ರಾಮದ ಕೊಲ್ಲಾಪುರದೇವಿ ದೇವಸ್ಥಾನದ ಬಳಿ ಕ್ರೈಸ್ಟ್‌ ಅಕಾಡೆಮಿ ಇನ್‌ಸ್ಟಿಟ್ಯೂಟ್ ಫಾರ್‌ ಅಡ್ವಾನ್ಸ್‌ ಸ್ಟಡೀಸ್‌, ನಾರಾಯನ ನೇತ್ರಾಲಯ ಮತ್ತು ದಿ ಆಕ್ಸ್‌ಫ‌ರ್ಡ್‌ ಮೆಡಿಕಲ್ ಆಸ್ಪತ್ರೆ, ನಾರಾಯಣ ಹೃದಯಾಲಯ ಹಾಗೂ ಮೆಳೇಹಳ್ಳಿ ಗ್ರಾಮಾಭಿವೃದ್ಧಿ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಡಿ ನಡೆದ ಬೃಹತ್‌ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿ, ಇಂದಿನ ಯಾಂತ್ರಿಕ ಯುಗದಲ್ಲಿ ಮಾನವ ಯಂತ್ರದಂತೆ ದುಡಿಯುತ್ತಿದ್ದಾನೆ. ತನ್ನ ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ವಹಿಸುವುದು ಕಡಿಮೆಯಾಗುತ್ತಿದೆ. ಸಣ್ಣ ಪುಟ್ಟ ಆರೋಗ್ಯದ ಸಮಸ್ಯೆ ಬಗ್ಗೆ ನಿರ್ಲಕ್ಷ್ಯತನ ತೋರುವುದರಿಂದ ಮುಂದಿನ ದಿನಗಳಲ್ಲಿ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಯೊಬ್ಬರಿಗೂ ಖಾಯಿಲೆ ಸಹಜ: ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಸಮಸ್ಯೆ ಅಥವಾ ಖಾಯಿಲೆ ಇರುವುದು ಸಹಜ. ನುರಿತ ವೈದ್ಯರಿಂದ ಸಲಹೆ ಪಡೆಯುವ ಮೂಲಕ ಪ್ರಾಥಮಿಕ ಹಂತದಲ್ಲಿಯೇ ಖಾಯಿಲೆಯನ್ನು ನಿಯಂತ್ರಿಸಿಕೊಳ್ಳಬೇಕು. ಆದರೆ, ಅರಿವಿನ ಕೊರತೆ ಹಾಗೂ ವೈದ್ಯಕೀಯ ವೆಚ್ಚವನ್ನು ಭರಸಲಾಗದೆ ಸಾಮಾನ್ಯ ವರ್ಗದ ಜನತೆ ಮಾರಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ ಎಂದು ವಿಷಾದಿಸಿದರು.

ಆರಂಭಿಕ ಹಂತದಲ್ಲೇ ಚಿಕಿತ್ಸೆ ಪಡೆಯಿರಿ: ಸಮಾಜ ಎಷ್ಟೇ ಮುಂದುವರೆದಿದ್ದರೂ ಹಳ್ಳಿಗಾಡಿನ ಜನರು ಆರೋಗ್ಯಕ್ಕೆ ಹೆಚ್ಚು ಆದ್ಯತೆ ಕೊಡದೇ ಹಲವು ಗಂಭೀರ ಕಾಯಿಲೆಗಳಿಗೆ ತುತ್ತಾಗುವ ಸಂದರ್ಭವೇ ಹೆಚ್ಚಾಗಿ ಕಂಡು ಬರುತ್ತಿವೆ. ಗ್ರಾಮೀಣ ಭಾಗದ ಜನತೆ ಹಾಗೂ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗುತ್ತಿದೆ. ಶಿಬಿರಗಳಲ್ಲಿ ತಜ್ಞ ವೈದ್ಯರು ಸಹ ಭಾಗವಹಿಸುವುದರಿಂದ ಪ್ರಾಥಮಿಕ ಹಂತದಲ್ಲಿಯೇ ಕಾಯಿಲೆಗಳನ್ನು ಗುರುತಿಸಲು ಸಾಧ್ಯವಾಗುತ್ತದೆ. ಹೀಗೆ ಆರಂಭಿಕ ಹಂತದಲ್ಲೇ ಚಿಕಿತ್ಸೆ ಆರಂಭವಾದರೆ ನಿಯಂತ್ರಣ ಸಾಧ್ಯವಿದೆ. ಗ್ರಾಮೀಣ ಭಾಗದ ಜನತೆ ಇಂತಹ ಉಚಿತ ಆರೋಗ್ಯ ಶಿಬಿರಗಳ ನೆರವಿನಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಭವಿಷ್ಯದಲ್ಲಿ ಮಾನಸಿಕ ಯಾತನೆಯನ್ನು ತಪ್ಪಿಸಿಕೊಳ್ಳಬೇಕು ಎಂದು ಹೇಳಿದರು.

ಆರೋಗ್ಯ ಕಾಪಾಡಿಕೊಳ್ಳುವುದು ಕರ್ತವ್ಯ: ಲಕ್ಷ್ಮೀಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಮೇಶ್‌ ಮಾತನಾಡಿ, ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಆರೋಗ್ಯ ಕಾಪಾಡಿಕೊಳ್ಳುವುದು ಪ್ರಥಮ ಕರ್ತವ್ಯವಾಗಿದೆ. ಆರೋಗ್ಯವಿದ್ದಲ್ಲಿ ಮಾತ್ರ ಮನುಷ್ಯ ಕಟ್ಟಿಕೊಂಡಿರುವ ಕನಸ್ಸನ್ನು ನನಸಾಗಿಸಲು ಸಾಧ್ಯವಾಗುತ್ತದೆ ಎಂದರು.

ರಕ್ತದೊತ್ತಡ, ಸಕ್ಕರೆ ಕಾಯಿಲೆ ಇರುವವರು ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳುವುದರ ಮೂಲಕ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಬಹಳಷ್ಟು ಮಂದಿಗೆ ತಮಗೆ ಬಿಪಿ, ಮಧುಮೇಹ ಇರುವುದು ಗೊತ್ತೇ ಇರುವುದಿಲ್ಲ. ಇಂತಹವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಸಹಕಾರಿಯಾಗಲಿವೆ ಎಂದು ತಿಳಿಸಿದರು.

ಮೆಳೇಹಳ್ಳಿ ಗ್ರಾಮಾಭಿವೃದ್ಧಿ ಸೇವಾ ಟ್ರಸ್ಟ್‌ ಅಧ್ಯಕ್ಷ ಗುರುತಿಮ್ಮಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಮರಿಸ್ವಾಮಿ, ಸಿದ್ದರಾಮಯ್ಯ, ಮುಖ್ಯ ಶಿಕ್ಷಕ ಶಂಕರಲಿಂಗಯ್ಯ, ಶಿಬಿರದ ಸಂಯೋಜಕ ನವೀನ್‌ ಪಾದ್ರಳ್ಳಿ, ಸ್ಥಳೀಯ ಪ್ರಮುಖರಾದ ಪ್ರವೀಣ್‌ಗೌಡ ಮುಂತಾದವರು ಹಾಜರಿದ್ದರು.

ಕಳೆದ ಮೂರು ದಿನಗಳಿಂದ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಗ್ರಾಮ ಸ್ವಚ್ಛತೆಗೆ ಶ್ರಮದಾನ ನಡೆಸಿದರು.

ಆರೋಗ್ಯ ಶಿಬಿರದಲ್ಲಿ 500ಕ್ಕೂ ಹೆಚ್ಚು ಮಂದಿ ಭಾಗಿ:

ಶಿಬಿರದಲ್ಲಿ ನೇತ್ರ ತಪಾಸಣೆ, ಹಲ್ಲಿನ ಸಾಮಾನ್ಯ ಕಾಯಿಲೆಗಳು, ಬಿಪಿ, ಮಧುಮೇಹ, ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆ, ಕ್ಯಾನ್ಸರ್‌ ಕಾಯಿಲೆ ಹಾಗೂ ಇತರೆ ಕಾಯಿಲೆಗಳ ತಪಾಸಣೆ ನಡೆಸಲಾಯಿತು. ಅಗತ್ಯವಿದ್ದವರಿಗೆ ಇಸಿಜಿ ವ್ಯವಸ್ಥೆ ಇತ್ತು. ಲಕ್ಷ್ಮೀಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುಣಸೇದೊಡ್ಡಿ, ಯರೇಹಳ್ಳಿ, ತಿಮ್ಮಸಂದ್ರ, ಅಂಕನಹಳ್ಳಿ ಸೇರಿದಂತೆ ಮುಂತಾದ ಗ್ರಾಮಗಳ ಜನರು ಆರೋಗ್ಯ ತಪಾಸಣೆಗೆ ಒಳಗಾದರು. 500ಕ್ಕೂ ಹೆಚ್ಚು ಜನರು ಶಿಬಿರ ಉಪಯೋಗ ಪಡೆದುಕೊಂಡರು.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.