ಲಸಿಕೆ: ಜಿಲ್ಲಾಸ್ಪತ್ರೆಯಲ್ಲಿ ಎಲ್ಲಾ ಸ್ಲಾಟ್‌ ಭರ್ತಿ

ಸ್ಥಳೀಯರಿಗೆ ಸಿಗದ ಲಸಿಕೆ,  ಬೆಂಗಳೂರು ನಾಗರಿಕರದ್ದೇ  ಕಾರು ಬಾರು! › ಜಿಲ್ಲೆಯಲ್ಲಿಲ್ಲ ಕೊವ್ಯಾಕ್ಸಿನ್‌

Team Udayavani, May 13, 2021, 3:38 PM IST

1205rmnp1_1205bg_2 (1)

ಸೂರ್ಯಪ್ರಕಾಶ್ಬಿ.ವಿ

ರಾಮನಗರ: ರಾಮನಗರ ಜಿಲ್ಲೆ ಬೆಂಗಳೂರು ನಗರದ ಮಗ್ಗಲಲ್ಲಿರುವುದೇ ಶಾಪವಾಗಿ ಪರಿಣಮಿ ಸಿದೆ! ಬೆಂಗಳೂರುನಗರ ತ್ಯಾಜ್ಯದಿಂದ ಜಿಲ್ಲೆಯ ಗಡಿ ಭಾಗಗಳು ಕಲುಷಿತಗೊಂಡಿವೆ. ಇದೀಗ ಬೆಂಗ ಳೂರು ನಗರ ವಾಸಿಗಳಿಂದಾಗಿ ಜಿಲ್ಲೆಯ ಜನರು ಕೋವಿಡ್‌ ಲಸಿಕೆ ಮತ್ತು ಚಿಕಿತ್ಸೆ ಯಿಂದಲೂ ವಂಚಿತರಾಗಿದ್ದಾರೆ. ಜಿಲ್ಲಾ ಕೇಂದ್ರ ರಾಮನಗರದ ಜಿಲ್ಲಾಸ್ಪತ್ರೆ, ರಾಯರ ದೊಡ್ಡಿ ಮತ್ತು ಮಹೆ ಬೂಬನಗರ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಜಿಲ್ಲೆಯ ತಾಲೂಕು ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್‌ ಲಸಿಕಾ ಕೇಂದ್ರಗಳು ಸ್ಥಾಪನೆಯಾಗಿವೆ. ಆದರೆ ನಗರ, ಪಟ್ಟಣ ಕೇಂದ್ರಗಳಲ್ಲಿ ದಿನ ನಿತ್ಯ ಬೆಂಗಳೂರು ನಗರದವರ ಕಾರುಬಾರು ಅಧಿಕ!

ಕೋವಿಡ್‌ ಲಸಿಕೆಯನ್ನು ನಾಗರಿಕರು ಯಾವ ಊರಿನಲ್ಲಾದರು ಪಡೆಯಬಹುದು ಎಂಬ ನಿಯಮ ಸರ್ಕಾರ ಜಾರಿ ಮಾಡಿದೆ. ಈ ನಿಯಮವೇ ಈಗ ಜಿಲ್ಲೆಯ ಜನರಿಗೆ ಕುತ್ತಾಗಿ ಪರಿಣಮಿಸಿದೆ. ರಾಮ ನಗರ, ಬಿಡದಿ, ಮಾಗಡಿ, ಕನಕಪುರಗಳಲ್ಲಿ ಬೆಂಗಳೂರು ನಗರದವರೇ ಹೆಚ್ಚಾಗಿ ಕೋವಿಡ್‌ ಲಸಿಕೆ ಪಡೆ ಯುತ್ತಿದ್ದಾರೆ. 18 ರಿಂದ ಮೇಲ್ಪಟ್ಟವರಿಗೆ ಲಸಿಕೆ ಪಡೆಯಲು ಸರ್ಕಾರ ಅವಕಾಶ ಕೊಟ್ಟ ನಂತರ ಈ ಪರಿಸ್ಥಿತಿ ಉದ್ಭವಿಸಿದೆ. ಲಸಿಕೆ ಪಡೆಯಲು ಆನ್‌ಲೈನ್‌ ಮೂಲಕ ಹೆಸರು ನೋಂದಾಯಿಸಿಕೊ ಳ್ಳಬೇಕಾಗಿದೆ. ಬೆಂಗಳೂರಿನಲ್ಲಿ ಲಸಿಕೆ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಅಲ್ಲಿನ ನಾಗರಿಕರು ಹತ್ತಿರದ ರಾಮನಗರ ಜಿಲ್ಲೆಯ ಲಸಿಕಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲೆಯ ಬಹುತೇಕ ನಾಗರಿಕರಿಗೆ ಆನ್‌ ಲೈನ್‌ ಮೂಲಕ ನೋಂದಾಯಿಸಿಕೊಳ್ಳುವ ತಂತ್ರಜ್ಞಾನದ ಅರಿವಿಲ್ಲ. ಈ ಅರಿ ವಿನ ಕೊರತೆಯ ಲಾಭವನ್ನು ಸಾಫ್ಟ್ವೇರ್‌ ನಗರ ಬೆಂಗಳೂರು ನಗರದ ನಾಗರಿಕರೇ ಕಬಳಿಸಿಕೊ ಳ್ಳುತ್ತಿದ್ದಾರೆ. ಇರುವ ಎಲ್ಲಾ ಸ್ಲಾಟ್‌ಗಳು ತುಂಬಿ ಹೋಗಿವೆ. ಕೋವಿಡ್‌ ಕರ್ಫ್ಯೂ ಜಾರಿಯಲ್ಲಿದೆ, ಆದರೂ ವಾಹನ ಸಂಚಾರಕ್ಕೆ ಅವಕಾಶವಿರುವುದರಿಂದ ರಾಜ್ಯ ರಾಜಧಾನಿಯ ನಾಗರಿಕರು ಜಿಲ್ಲೆಯ ನಗರಗಳಿಗೆ ದಾಂಗುಡಿ ಇಡುತ್ತಿದ್ದಾರೆ.

ಸ್ಥಳೀಯರಿಗೆ ಗೇಟ್‌ ಪಾಸ್‌!: ಇತ್ತ ಆನ್‌ಲೈನ್‌ ಮೂಲಕ ನೋಂದಾಯಿಸಿಕೊಳ್ಳಬೇಕು ಎಂಬ ಅರಿ ವಿರದ ಸ್ಥಳೀಯ ನಾಗರಿಕರು ತಮ್ಮ ಆಧಾರ್‌ ಕಾರ್ಡು ಹಿಡಿದು ಜಿಲ್ಲಾಸ್ಪತ್ರೆಯ ಆವರಣದಲ್ಲಿ ರುವ ಲಸಿಕಾ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯ ವೇಳೆಗೆ ಆಗಮಿಸಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಹೀಗೆ ಸಾಲಿನಲ್ಲಿ ನಿಂತವರಿಗೆ ಇಲ್ಲಿನ ಸಿಬ್ಬಂದಿ ಟೋಕನ್‌ ಸಹ ಕೊಡುತಿದ್ದಾ ರೆ. ಗಂಟೆ ಗಟ್ಟಲೆ ಕಾದ ನಂತರ ಲಸಿಕಾ ಕೇಂದ್ರ ದೊಳಗೆ ಹೋದಾಗ, ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡು ಬನ್ನಿ ಎಂದು ಸಾಗಾಕುತ್ತಿರುವುದು ಸಾಮಾನ್ಯವಾಗಿದೆ. ಟೋಕನ್‌ ಕೊಡುವ ಮುನ್ನ ಹೆಸರು ನೋಂದಾ ಯಿಸಿಕೊಂಡಿದ್ದೀರ ಎಂದು ಒಂದು ಪ್ರಶ್ನೆಯನ್ನು ಕೇಳುತ್ತಿಲ್ಲ. ಆನ್‌ಲೈನ್‌ನಲ್ಲಿ ನೋಂದಾಯಿಸಿ ಕೊಂಡಿದ್ದರೆ ಮಾತ್ರ ಲಸಿಕೆ ಎಂದು ಕನ್ನಡದಲ್ಲಿ ಇಲ್ಲೊಂದು ಬೋರ್ಡು ಇಲ್ಲ. ಇರುವ ಒಂದೆ ರೆಡು ಸೂಚನೆಗಳು ಇಂಗ್ಲಿಷಿನಲ್ಲಿವೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.