ಕನಕಪುರಕ್ಕೆ ಮೆಡಿಕಲ್‌ ಕಾಲೇಜು ಮುಖ್ಯಮಂತ್ರಿಗೆ ಡಿಕೆಶಿ ಪತ್ರ

Team Udayavani, Dec 7, 2019, 9:11 PM IST

ರಾಮನಗರ/ಬೆಂಗಳೂರು: ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ಹಿಂದಕ್ಕೆ ಪಡೆದಿರುವ ಬಿಜೆಪಿ ಸರಕಾರದ ಕ್ರಮಕ್ಕೆ ಕನಕಪುರ ಶಾಸಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಲೇಜು ಮಂಜೂರು ಮಾಡದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಮುಖ್ಯಮಂತ್ರಿಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಡಿ.ಕೆ.ಶಿವಕುಮಾರ್‌, ಚಿಕ್ಕಬಳ್ಳಾಪುರಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿರುವುದಕ್ಕೆ ತಮ್ಮ ಆಕ್ಷೇಪವೇನಿಲ್ಲ. ಆದರೆ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದು ಮಾಡಿರುವುದರ ಬಗ್ಗೆ ತಮ್ಮ ಆಕ್ಷೇಪವಿದೆ. ದ್ವೇಷ ರಾಜಕಾರಣವೇ ಮುಖ್ಯಮಂತ್ರಿಗಳ ಉದ್ದೇಶವಾದರೆ, ತಾವು ತಮ್ಮದೇ ರೀತಿಯಲ್ಲಿ ಹೋರಾಟ ಮಾಡಬೇಕಾಗುತ್ತದೆ. ಇದಕ್ಕೆ ಅವಕಾಶ ಕೊಡಬೇಡಿ ಎಂದು ತಾಕೀತು ಮಾಡಿದ್ದಾರೆ.

ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರ 2018-19ರ ಆಯವ್ಯಯದಲ್ಲಿ ನಂಜುಂಡಪ್ಪ ವರದಿಯಲ್ಲಿ ಅತಿ ಹಿಂದುಳಿದ ತಾಲೂಕು ಎಂದು ಗುರುತಿಸಿಕೊಂಡಿರುವ ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಘೋಷಣೆ ಮಾಡಿತ್ತು. ಆಯವ್ಯಯ ಸಭೆಯ ಚರ್ಚೆಗಳಲ್ಲಿ ಆಗ ವಿಪಕ್ಷ ನಾಯಕರಾಗಿದ್ದ ಯಡಿಯೂರಪ್ಪ ಸಹ ವೈದ್ಯಕೀಯ ಕಾಲೇಜಿಗೆ ಒಪ್ಪಿಗೆ ಸೂಚಿಸಿದ್ದರು. ಇದಕ್ಕಾಗಿ ಈಗಾಗಲೇ 25 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಭೂಮಿ ಹಸ್ತಾಂತರಕ್ಕೆ ಕೆಎಚ್‌ಬಿ ಕೂಡ ಅಗತ್ಯ ಕ್ರಮ ಕೈಗೊಂಡಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಮಾಗಡಿಯಲ್ಲಿ ಯಡಿಯೂರಪ್ಪ ಈ ಹಿಂದೆ ನೀಡಿರುವ ಹೇಳಿಕೆಯನ್ನು ತಮ್ಮ ಪತ್ರದಲ್ಲಿ ಉಲ್ಲೇಖೀಸಿರುವ ಡಿಕೆಶಿ, ಭೂಮಿ ಪೂಜೆಗೆ ದಿನಾಂಕ ನಿಗದಿಪಡಿಸುವಂತೆ ಕೋರಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ