ಉದ್ಯೋಗ ಚೀಟಿ ಬಳಸಿ ಗ್ರಾಮದಲ್ಲೇ ಉದ್ಯೋಗ ಪಡೆಯಿರಿ


Team Udayavani, Apr 9, 2022, 2:46 PM IST

Untitled-1

ಚನ್ನಪಟ್ಟಣ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ದುಡಿಯೋಣ ಬಾ ಅಭಿಯಾನದ ಮುಖ್ಯ ಉದ್ದೇಶ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನತೆಗೆ ತಮ್ಮ ಗ್ರಾಮ ವ್ಯಾಪ್ತಿಯಲ್ಲೆ ಉದ್ಯೋಗ ನೀಡಿ ಸ್ವಾವಲಂಬಿಗಳನ್ನಾಗಿ ಮಾಡುವುದು ಎಂದು ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರು ತಿಳಿಸಿದರು.

ತಾಲೂಕಿನ ವಂದರಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ದುಡಿಯೋಣ ಬಾ ಅಭಿಯಾನದ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮತನಾಡಿದರು. ಗ್ರಾಮದ ಜನರಿಗೆ ಉದ್ಯೋಗದ ಮಾಹಿತಿ ನೀಡುವ ಕೆಲಸ ಎಲ್ಲಾ ಗ್ರಾಮ ಪಂಚಾಯತಿ ಗಳ ವ್ಯಾಪ್ತಿಯಲ್ಲಿ ಜರುಗಬೇಕು ಎಂದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಹಯೋಗದ ಯೋಜನೆಯಾಗಿದ್ದು, ವಂದಾರಗುಪ್ಪೆ ಗ್ರಾಮೀಣ ಪ್ರದೇಶದ ಜನರು ಮಾತ್ರವಲ್ಲದೇ ರಾಮನಗರ ಜಿಲ್ಲಾದ್ಯಾಂತ ಗ್ರಾಮೀಣ ಪ್ರದೇಶದ ಜನರು ಯೋಜನೆಯ ಫಲಾನುಭವಿಗಳಾಗಿ ಉತ್ತಮ ರೀತಿಯಲ್ಲಿ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಗ್ರಾಮೀಣ ಪ್ರದೇಶದ ಜನರು ಗ್ರಾಮ ಪಂಚಾ ಯಿತಿಗಳಿಂದ ಜಾಬ್‌ ಕಾರ್ಡ್‌ ಅನ್ನು ಪಡೆದು ತಮ್ಮ ಗ್ರಾಮ ವ್ಯಾಪ್ತಿಯಲ್ಲೆ ಉದ್ಯೋಗ ಪಡೆದು ನಿರು ದ್ಯೋಗ ಮುಕ್ತರಾಗಬೇಕು ಎಂಬುವ ಉದ್ದೇಶವನ್ನು ದುಡಿಯೋಣ ಬಾ ಅಭಿಯಾನ ಒಳಗೊಂಡಿದೆ ಎಂದರು.

2022 ಏ. 1ರಿಂದ ನರೇಗಾ ಕೆಲಸಕ್ಕೆ ದಿನದ ಕೂಲಿ 289 ರೂ. ನಿಂದ 309 ರೂ. ಗೆ ಹೆಚ್ಚಳವಾಗಿದೆ. ಕೂಲಿಕಾರರು ತರುವ ಸಲಕರಣೆಗಳಿಗೆ 10 ರೂ ಹೆಚ್ಚು ವರಿ ವೆಚ್ಚವನ್ನು ಬರಿಸಲಾಗುತ್ತಿದೆ. ಇದರ ಪೂರ್ಣ ಉಪಯೋಗವನ್ನು ಗ್ರಾಮೀಣ ಜನರಿಗೆ ತಿಳಿಸುವ ಪ್ರಚಾರದ ಕೆಲಸ ಎಲ್ಲಾ ಗ್ರಾಮ ಪಂಚಾ ಯಿತಿ ವ್ಯಾಪ್ತಿಯಲ್ಲಿ ಜರುಗಿ ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ದೊರಕುವಂತಾದರೆ ಜಿಲ್ಲಾ ಪಂಚಾ ಯತಿ ಅಭಿವೃದ್ಧಿ ಪಥದತ್ತ ಸಾಗುತ್ತದೆ ಎಂದರು.

ವಂದರಗುಪ್ಪೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್‌ ಅವರು ಮಾತನಾಡಿ, ಗ್ರಾಮೀಣ ಭಾಗದ ರೈತರು ತಮ್ಮ ಜಮೀನಿನಲ್ಲಿ ಒಕ್ಕಣೆ ಕೆಲಸ ಮುಗಿಸಿ ಮುಂದಿನ ಬಿತ್ತನೆ ಕಾರ್ಯದವರೆಗೆ ಗ್ರಾಮೀಣ ಪ್ರದೇಶದ ಜನರು ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದು ಸಾಮಾನ್ಯವಾಗಿದ್ದು, ಇದನ್ನು ತಪ್ಪಿಸಲು ನಿಟ್ಟಿನಲ್ಲಿ ದುಡಿಯೋಣ ಬಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಉತ್ತಮವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಂದಾರಗುಪ್ಪೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಕುಮಾರ್‌, ಸೆಕ್ರೆಟರಿ ರಾಜೇಶ್‌, ರಾಮನಗರ ಜಿಲ್ಲಾ ಪಂಚಾಯಿತಿ ಡಿ.ಐ.ಇ.ಸಿ. ಅರುಣ್‌ ಕುಮಾರ್‌ ಸಿ.ಜಿ., ತಾಲೂಕು ಐ.ಇ.ಸಿ. ಸಂಯೋಜಕಿ ಭವ್ಯ ಶ್ರೀ, ಡಿ.ಇ.ಒ.ಗಳು, ಗ್ರಾಮ ಕಾಯಕ ಮಿತ್ರ, ಗ್ರಾಮ ಪಂಚಾಯಿತಿ ಸಿಬಂದಿ ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.