ಜೆಡಿಎಸ್ನಲ್ಲಿ ಇರಲ್ಲ, ಪಕ್ಷ ಸೇರ್ಪಡೆ ನಿರ್ಧರಿಸಿಲ್ಲ: ಪುಟ್ಟಣ್ಣ
Team Udayavani, Apr 2, 2017, 11:11 AM IST
ರಾಮನಗರ: ಜೆಡಿಎಸ್ ತೊರೆಯುವುದು ನಿಶ್ಚಿತ. ಆದರೆ ಯಾವ ಪಕ್ಷಕ್ಕೆ ಸೇರಬೇಕು ಎಂಬುದನ್ನು ನಿರ್ಧರಿಸಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದ್ದಾರೆ. ಅಂಗವಿಕಲರ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶಿಕ್ಷಕ ಬಂಧುಗಳು ಹಾಗೂ ತಮ್ಮ ಹಿತೈಷಿಗಳೊಂದಿಗೆ ಚರ್ಚಿಸಿ ಮುಂದಿನ ರಾಜಕೀಯ ನಡೆ ನಿರ್ಧರಿಸುವುದಾಗಿ ಹೇಳಿದರು.
ಮತ್ತೆ ಜೆಡಿಎಸ್ನಲ್ಲೇ ಉಳಿಯುವ ಮನಸ್ಸಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಜೆಡಿಎಸ್ ನಾಯಕರೇ ಬೇಡ ಎಂದ ಮೇಲೆ ಉಳಿದುಕೊಳ್ಳುವ ಮಾತೆಲ್ಲಿ’ ಎಂದು ಹೇಳಿದರು. ಬೇರೆ ಪಕ್ಷ ಸೇರುವ ನಿರ್ಧಾರ ಯಾವಾಗ ತೆಗೆದುಕೊಳ್ಳುವಿರಿ ಎಂಬ ಪ್ರಶ್ನೆಗೆ, “ಚುನಾವಣೆಗೆ ಇನ್ನೂ ಒಂದು ವರ್ಷ ಸಮಯವಿದೆ. ಈ ಅವಧಿಯಲ್ಲಿ ರಾಜಕೀಯದಲ್ಲಿ ಏನೇನು ಆಗುತ್ತೋ’ ಎಂದು ಜಾರಿಕೊಂಡರು. ಅತಿಥಿ ಶಿಕ್ಷಕರ ಸಮಸ್ಯೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಈ ಸರ್ಕಾರದಿಂದ ಯಾವ ಸಮಸ್ಯೆಯೂ ಬಗೆ ಹರಿಯಲ್ಲ. ವಿದ್ಯಾವಂತರ ವೋಟು ತಮಗೆ ಸಿಗದೆಂಬ ಭಾವನೆಯಿಂದ ಎಲ್ಲವನ್ನೂ ಚುನಾವಣೆಯ ದೃಷ್ಟಿಕೋನದಲ್ಲೇ ನೋಡಲಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ