ವಿದ್ಯುತ್‌ ಸ್ಪರ್ಶದಿಂದ ರೈತ, ಹಸು ಸಾವು

Team Udayavani, Aug 14, 2019, 4:22 PM IST

ಬಗಿನಗೆರೆಯಲ್ಲಿ ಮೃತಪಟ್ಟ ರೈತ ರಾಜಣ್ಣ ಅವರ ಪತ್ನಿ ಸಾವಿತ್ರಿ ಹಾಗೂ ಗ್ರಾಮಸ್ಥರ ಆಕ್ರಂದನ.

ರಾಮನಗರ: ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ, ಸೌಲಭ್ಯ ದೊರೆಯುತ್ತಿದೆ. ಪೋಷಕರು ಈ ಶಾಲೆಗಳ ಬಗ್ಗೆ ಇರುವ ಕೀಳರಿಮೆಯನ್ನು ಬಿಡಬೇಕು ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಎಂ.ಎನ್‌.ನಾಗರಾಜ್‌ ಸಲಹೆ ನೀಡಿದರು.

ತಾಲೂಕಿನ ಕೈಲಾಂಚ ಹೋಬಳಿ ಕೃಷ್ಣಾಪುರ ದೊಡ್ಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ನಮ್ಮೂರ ಶಾಲೆ-ನಮ್ಮ ಶಕ್ತಿ ಎಂಬ ಧ್ಯೕಯ ವಾಕ್ಯದಡಿ ಶಾಂತಲಾ ಚಾರಿಟಬಲ್ ಟ್ರಸ್ಟ್‌ ಅಧಿಕೃತವಾಗಿ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಖಾಸಗಿ ಸಂಸ್ಥೆಗಳು ವ್ಯಾಪಾರಿ ಸಂಸ್ಥೆಗಳಂತೆ ವರ್ತಿಸುತ್ತಿವೆ. ಪೋಷಕರ ಅರಿವಿಗೆ ಬಾರದಂತೆ ರಕ್ತ ಹೀರಿಬಿಡುತ್ತಿವೆ. ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಹಿಂದೆ ಬಿದ್ದಿಲ್ಲ. ಮೇಲಾಗಿ ಸರ್ಕಾರ ಈ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನೇಕ ದಾನಿಗಳು ಸೌಲಭ್ಯಗಳನ್ನು ನೀಡುತ್ತಿದ್ದಾರೆ. ಪೋಷಕರು ಯಾವ ಆತಂಕವೂ ಇಲ್ಲದೆ, ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸಬೇಕು ಎಂದು ತಿಳಿಸಿದರು.

ಮಾತೃಭಾಷಾ ಶಿಕ್ಷಣದಿಂದ ಸೃಜನಾತ್ಮಕ ಬೆಳವಣಿಗೆ: ಹಿರಿಯ ಗಾಂಧಿವಾದಿ, ಶಿಕ್ಷಣ ತಜ್ಞ ಎಲ್.ನರಸಿಂಹಯ್ಯ ಮಾತನಾಡಿ, ಇಂದಿನ ದಿನಗಳಲ್ಲಿ ಅಕ್ಷರ ಕಲಿತವರು ಅನಕ್ಷರಸ್ಥರಿಗಿಂತ ಕಡೆಯದಾಗಿ ನಡೆದುಕೊಳ್ಳುತ್ತಿದ್ದಾರೆ. ಸಾಮಾಜಿಕ ಕಳಕಳಿಯನ್ನು ಮರೆಯುತ್ತಿದ್ದಾರೆ. ಶಿಕ್ಷಣ ಪಡೆದವರು ಸಮಾಜಮುಖೀಗಳಾಗಿ ಚಿಂತಿಸಿ, ಕಾರ್ಯನಿರ್ವಹಿಸಬೇಕು ಎಂದರು.

ಮಾತೃಭಾಷೆಯಲ್ಲಿಯೇ ಶಿಕ್ಷಣ ನೀಡಿ: ಇತ್ತೀಚಿನ ವರ್ಷಗಳಲ್ಲಿ ಅನೇಕ ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚಿ ಹೋಗಿವೆ. ಸರ್ಕಾರಿ ಶಾಲೆಗಳು ಮುಚ್ಚಲು ಪೋಷಕರೇ ಕಾರಣ. ಯಾವುದೋ ಭ್ರಮೆಗೆ ಒಳಗಾಗಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. 1ರಿಂದ 10ನೇ ತರಗತಿವರೆಗೂ ಮಕ್ಕಳಿಗೆ ಮಾತೃಭಾಷೆಯಲ್ಲಿಯೇ ಶಿಕ್ಷಣ ನೀಡಬೇಕು. ಮಾತೃ ಭಾಷೆಯಲ್ಲಿ ಶಿಕ್ಷಣ ಪಡೆದರೆ ಮಕ್ಕಳು ಸೃಜನಾತ್ಮಕ ಶಕ್ತಿ ಬೆಳೆಯಲು ಸಹಕಾರಿಯಾಗುತ್ತದೆ. ಶಾಂತಲಾ ಚಾರಿಟಬಲ್ ಟ್ರಸ್ಟ್‌ ಸರ್ಕಾರಿ ಶಾಲೆಯನ್ನು ದತ್ತು ತೆಗೆದಕೊಂಡ ಅಭಿವೃದ್ಧಿಪಡಿಸುವ ಮೂಲಕ ಇತರೆ ಸಂಘ-ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ತಿಳಿಸಿದರು.

ಕ್ಷೀಣಿಸುತ್ತಿದೆ ಸೇವಾ ಮನೋಭಾವ: ತಾಲೂಕು ಪಂಚಾಯ್ತಿ ಅಧ್ಯಕ್ಷ ಗಾಣಕಲ್ ನಟರಾಜ್‌ ಮಾತನಾಡಿ, ಪ್ರಸ್ತುತ ಅನೇಕರಲ್ಲಿ ಸೇವಾ ಮನೋಭಾವ ಕಡಿಮೆಯಾಗುತ್ತಿದೆ. ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಮಾಜಮುಖೀ ಕೆಲಸಗಳನ್ನು ಮಾಡಲು ಮುಂದಾದಾಗ ಸರ್ಕಾರಿ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸಬೇಕು ಎಂದು ಹೇಳಿದರು.

ಪ್ಲಾಸ್ಟಿಕ್‌ನಿಂದ ಪರಿಸರಕ್ಕೆ ತೊಂದರೆ: ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸಬಾರದು. ಪ್ಲಾಸ್ಟಿಕ್‌ ವಸ್ತುಗಳಿಂದ ಪರಿಸರದಲ್ಲಾಗುತ್ತಿರುವ ತೊಂದರೆಯ ಬಗ್ಗೆ ಶಿಕ್ಷಕರು ಮತ್ತು ಪೋಷಕರು ಮಕ್ಕಳಿಗೆ ವಿವರವಾಗಿ ತಿಳಿಸಿ ಕೊಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಾದ ಬಿ.ಆರ್‌. ಜ್ಞಾನವಿ ರಾಜ್‌, ಆರ್‌.ನಿತ್ಯಶ್ರೀ ಭರತ ನಾಟ್ಯ ಪ್ರದರ್ಶನ ಮಾಡಿದರು. ಗಾಯಕರಾದ ಹೊನ್ನಿಗಾನಹಳ್ಳಿ ಸಿದ್ದರಾಜು, ರಘು ಮತ್ತು ತಂಡದವರು ಗೀತ ಗಾಯನ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.

ಶಿಕ್ಷಣ ತಜ್ಞ ಎಲ್. ನರಸಿಂಹಯ್ಯ ಸಂಸ್ಕೃತಿ ರಂಗ ಮಂದಿರವನ್ನು ಉದ್ಘಾಟಿಸಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್.ಕೆ. ನಾಗರಾಜು, ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಜಿ.ಎಸ್‌. ಸಂಪತ್‌ ಕುಮಾರ್‌, ಶಿಕ್ಷಣ ಸಂಯೋಜಕ ಗೋವಿಂದ ಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸಿಂ.ಲಿಂ. ನಾಗರಾಜ್‌, ರೈತಪರ ಹೋರಾಟಗಾರ್ತಿ ಅನಸೂಯಮ್ಮ, ಬರಹಗಾರ ತ್ಯಾಗರಾಜ, ಶಾಂತಲಾ ಚಾರಿಟಬಲ್ ಟ್ರಸ್ಟಿನ ಅಧ್ಯಕ್ಷ ಶಿವಾಜಿ ರಾವ್‌, ನಾಗೇಂದ್ರ ರಾವ್‌, ದತ್ತು ಶಾಲೆಯ ಸಂಯೋಜಕಿ ಚಿತ್ರಾ ರಾವ್‌, ಶಾಲೆಯ ಮುಖ್ಯಶಿಕ್ಷಕಿ ನಾಗರತ್ನಮ್ಮ, ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಗೋಪಾಲ್, ಲಂಚ ಮುಕ್ತ ಕರ್ನಾಟಕ ವೇದಿಕೆಯ ಸಂಚಾಲಕ ಅರುಣ್‌ ಕುಮಾರ್‌ ಮುಂತಾದವರು ಉಪಸ್ಥಿತರಿದ್ದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ