ನೆರೆ ಪರಿಹಾರ ವಿಳಂಬ: ನಾಳೆ ಸಿಎಂ ಮನೆಗೆ ಮುತ್ತಿಗೆ

Team Udayavani, Nov 6, 2019, 3:48 PM IST

rn-tdy-1

ರಾಮನಗರ: ನೆರೆ ಮತ್ತು ಬರಗಾಲದಿಂದ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ಒದಗಿಸುವಲ್ಲಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ವಿಫ‌ಲವಾಗಿದೆ. ಇದೇ ನ.7ರಂದು ರೈತರು ವಿಧಾನಸೌಧ ಮತ್ತು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಲಕ್ಷ್ಮಸ್ವಾಮಿ ತಿಳಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಮುಖ್ಯಮಂತ್ರಿಗಳು ಎಲ್ಲಾ ಸಮಸ್ಯೆ ಸರಿಪಡಿಸುವುದಾಗಿ 15 ದಿನಗಳ ಕಾಲಾವಕಾಶ ಪಡೆದಿದ್ದರು. ಆದರೆ ವರು ತಮ್ಮ ಮಾತಿನಂತೆ ನಡೆದುಕೊಂಡಿಲ್ಲ. ಹೀಗಾಗಿ ಇದೇ 7ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದರು. ಅಂದು ಬೆಳಗ್ಗೆ 11 ಗಂಟೆಗೆ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿಯಿಂದ ಮುಖ್ಯಮಂತ್ರಿಗಳ ಮನೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು.

ಕೇಂದ್ರದಿಂದ ಹಣ ಬಂದಿದೆ ಎಂದು ಹೇಳಿ ರೈತರನ್ನು ಮರೆತ್ತಿದ್ದಾರೆ.  ರಾಜ್ಯದಲ್ಲಿ ನೆರೆ ಪ್ರವಾಹದಿಂದ 4,394 ಗ್ರಾಮಗಳು ಮುಳುಗಡೆಯಾಗಿ 2.5 ಲಕ್ಷಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ನೆಲಸಮವಾಗಿವೆ. ಪ್ರವಾಹದಿಂದ 15 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. ಭೂ ಕುಸಿತದಿಂದ ರೈತರ ಭೂಮಿಯೇ ಇಲ್ಲವಾಗಿದೆ. ಲಕ್ಷಾಂತರ ಎಕರೆ ಕೃಷಿ ಭೂಮಿಯ ಮೇಲ್ಪದರವು ನೀರಿನಲ್ಲಿ ಕೊಚ್ಚಿ ಹೋಗಿದೆ ಎಂದರು.

ಖಾಸಗಿ ಫೈನಾನ್ಸ್ಗಳ ದರ್ಪ : ಭೂಮಿ ಹದಮಾಡಲು ಸುಮಾರು ವರ್ಷಗಳು ಬೇಕು. ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿಲ್ಲ, ಇನ್ನೊಂದೆಡೆ ಗಂಜಿ ಕೇಂದ್ರಗಳನ್ನು ಮುಚ್ಚಲಾಗಿದೆ. ಸರ್ವಸ್ವವನ್ನೂ ಕಳೆದುಕೊಂಡು ಬೀದಿಗೆ ಬಂದಿರುವ ಸಂತ್ರಸ್ತರಿಂದ ಸಾಲ ವಸೂಲಿಗೆ ಕೆಲವು ಖಾಸಗಿ ಬ್ಯಾಂಕುಗಳು ಮತ್ತು ಮಿನಿ ಫೈನಾನ್ಸ್‌ ಕಂಪನಿಗಳು ಸಿವಿಲ… ಮತ್ತು ಕ್ರಿಮಿನಲ… ಕೇಸುಗಳನ್ನು ಹಾಕಿ ನೋಟಿಸು ಜಾರಿ ಮಾಡುತ್ತಿವೆ. ಪ್ರವಾಹ ಹಾಗೂ ಬರಗಾಲದಿಂದ ತತ್ತರಿಸಿದ ರೈತರ ಸಾಲ ಮುಕ್ತ ಎಂದು ಹೇಳದೆ ಇರುವುದು ಒಂದು ವಿಪರ್ಯಾಸವಾಗಿದೆ ಎಂದರು.

ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಗುಣಮಟ್ಟದ ಮನೆ ನಿರ್ಮಾಣ, ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡ ವ್ಯಕ್ತಿಯ ಕುಟುಂಬಕ್ಕೆ 25 ಲಕ್ಷ, ನಷ್ಟವಾದ ಬೆಳೆಗಳಿಗೆ ಅನುಗುಣವಾಗಿ ಡಾ. ಸ್ವಾಮಿನಾಥನ್‌ ವರದಿಯಂತೆ ನಷ್ಟ ಪರಿಹಾರ ತುಂಬಿಕೊಂಡಬೇಕು. ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡಿ ಹೊಸದಾಗಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.

ಹಾಳಾಗಿರುವ ಭೂಮಿಗೆ ಪರ್ಯಾಯ ಭೂಮಿ ನೀಡಬೇಕು. ಮಹಿಳಾ ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡಬೇಕು. ರಾಜ್ಯ ಬರಗಾಲಕ್ಕೆ ನಿರಂತರವಾಗಿ ಗುರಿಯಾಗುತ್ತಿದ್ದು, ಬರಗಾಲ ಪರಿಹಾರವಾಗಿ ಒಂದು ಎಕರೆಗೆ 25 ಸಾವಿರ ರೂ ನೀಡಬೇಕು ಎಂದರು. ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎ.ಎಲ್. ಬೈರೇಗೌಡ, ಪದಾಧಿಕಾರಿಗಳಾದ ಕೃಷ್ಣಸ್ವಾಮಿ, ನಾಗಮ್ಮ, ಸೀಬೆಕಟ್ಟೆ ಕೃಷ್ಣಪ್ಪ, ಅನಂತರಾಮ… ಪ್ರಸಾದ್‌, ರಮೇಶ್‌, ಗಂಗಾಧರಯ್ಯ, ರಾಜುಗೌಡ ಇದ್ದರು

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.