ಇ-ಗ್ರಂಥಾಲಯಕ್ಕೆ ಉಚಿತ ನೋಂದಣಿ ಅಭಿಯಾನ

Team Udayavani, Nov 7, 2020, 1:12 PM IST

rn-tdy-1

ಚನ್ನಪಟ್ಟಣ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ನಿಮಿತ್ತ ಇ-ಗ್ರಂಥಾಲಯಕ್ಕೆ ಉಚಿತ ನೋಂದಣಿ ಆಭಿಯಾನ ಆರಂಭಗೊಂಡಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳ ಬೇಕು ಎಂದು ಜಿಲ್ಲಾ ಗ್ರಂಥಾಲಯ ಕೇಂದ್ರದ ಮುಖ್ಯ ಗ್ರಂಥಾಲಯ ಅಧಿಕಾರಿ ಕೆ.ಎಸ್‌. ಮಮತಾ ತಿಳಿಸಿದರು.

ಪಟ್ಟಣದ ಡಿ.ಎ.ಆರ್‌. ಪೊಲೀಸ್‌ ಮೈದಾನದಲ್ಲಿ ಚನ್ನಪಟ್ಟಣ ಶಾಖಾ ಗ್ರಂಥಾಲಯ ಹಾಗೂ ಡಿ.ಎ.ಆರ್‌ ಪೊಲೀಸ್‌ ಸೇವಾ ಕೇಂದ್ರ ಗ್ರಂಥಾಲಯದಸಹಯೋಗದೊಂದಿಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ , ಪೊಲೀಸ್‌ ತರಬೇತಿ ಸಿಬ್ಬಂದಿಗೆಏರ್ಪಡಿಸಿದ್ದವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಯುವ ಜನರಲ್ಲಿ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಮನೋಭಾವ ಹುಟ್ಟು ಹಾಕುವ ಆಶಯವನ್ನು ಗ್ರಂಥಾಲಯ ಇಲಾಖೆ ಹೊಂದಿದೆ. ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದಡಾ.ಸತೀಶ್‌ ಕುಮಾರ ಎಸ್‌. ಹೊಸಮನಿ,ಕೊರೊನಾ ವೇಳೆ ಡಿಜಿಟಲ್‌ ಗ್ರಂಥಾಲಯ ಅನುಷ್ಠಾನಕ್ಕೆ ಉಚಿತ ನೋಂದಣಿಮಾಡಲುಆದೇಶ ನೀಡಿದ್ದರಿಂದ, ರಾಮನಗರ ಜಿಲ್ಲೆಯಲ್ಲಿ 32,582 ಮಂದಿ ಸದಸ್ಯತ್ವ ಪಡೆದುಕೊಂಡಿದ್ದಾರೆ. ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನದಲ್ಲಿರುವುದು ಸಂತಸದ ಸಂಗತಿ. ಸಾರ್ವಜನಿಕರು ಸಾಹಿತ್ಯದ ಅಭಿರುಚಿ ಬೆಳೆಸಿಕೊಂಡಲ್ಲಿ, ಸಮಾಜದ ವಿಕಾಸ ಸಾಧ್ಯ ಎಂದರು.

ಮನೋವಿಕಾಸ: ಡಿ.ಎ.ಆರ್‌. ಪೊಲೀಸ್‌ ನಿರೀಕ್ಷಕ ಎ. ರವಿ ಮಾತನಾಡಿ,ಯುವ ಜನರ ಮನೋವಿಕಾಸಕ್ಕೆ ಗ್ರಂಥಾಲಯಗಳು ಸಹಕಾರಿ. ಸಾಹಿತ್ಯದ ಓದಿನಿಂದ ವ್ಯಕ್ತಿ ಪರಿಪೂರ್ಣನಾಗುತ್ತಾನೆ ಎಂದರು.

ಚನ್ನಪಟ್ಟಣ ಶಾಖಾ ಗ್ರಂಥಾಲಯದ ಸಹಾಯಕರಾದ ಸಿ. ಮಂಗಳ ಗೌರಮ್ಮ ಮಾತನಾಡಿ, ಗ್ರಂಥಾಲಯಗಳಲ್ಲಿ ಅತ್ಯುತ್ತಮ ಪುಸ್ತಕಗಳು ಲಭ್ಯವಿದೆ. ಸ್ಪರ್ಧಾತ್ಮಕ ಪರೀಕ್ಷೆ, ಸಂಶೋಧನೆ, ಜ್ಞಾನ,-ವಿಜ್ಞಾನಕ್ಕೆ ನೆರವಾಗುವ ಅನೇಕಾನೇಕ ಕೃತಿಗಳ ಭಂಡಾರವನ್ನು ಓದುಗರು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಪೊಲೀಸ್‌ ತರಬೇತಿ ಸಿಬ್ಬಂದಿಯ 50 ಸ್ಪರ್ಧಿಗಳು ಪ್ರಬಂಧ,ಆಶುಭಾಷಣ ಮತ್ತು ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಹಿರಿಯ ಗಾಯಕಿ ಶಾರದಾ ನಾಗೇಶ್‌, ಲಕ್ಷ್ಮಣ್‌ ಮತ್ತು ಮಹೇಶ್‌ ಮೌರ್ಯ ತೀರ್ಪುಗಾರರಾಗಿದ್ದರು. ಸೇವಾಕೇಂದ್ರದ ಜಯ ಲಿಂಗಯ್ಯ, ಡಿ.ಎ.ಆರ್‌. ಪೊಲೀಸ್‌ ಸಿಬ್ಬಂದಿ ವರ್ಗ ಹಾಜರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.