
ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ನಕಲಿ ಆರ್ ಟಿಸಿಯಿಂದ ಭೂಮಿ ಮಾರಾಟ: ಆರು ಮಂದಿ ಬಂಧನ
Team Udayavani, Sep 16, 2022, 9:25 AM IST

ರಾಮನಗರ: ಸರ್ಕಾರಿ ಸರ್ವರ್ ಹ್ಯಾಕ್ ಮಾಡುವ ಮೂಲಕ ಆರ್.ಟಿ.ಸಿ ಮಾಡಿಸಿ ಅಸಲಿ ದಾಖಲೆ ಎಂಬಂತೆ ಭೂಮಿ ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮರೀಗೌಡ, ನರಸಿಂಹಮೂರ್ತಿ, ರಾಘವಮೂರ್ತಿ, ಅರುಣ್, ನಂದೀಶ್, ಶಿವರಾಜು ಅವರನ್ನು ಬಂಧಿಸಲಾಗಿದೆ. ಇವರೆಲ್ಲರೂ ರಿಯಲ್ ಎಸ್ಟೆಟ್ ಏಜೆಂಟ್, ಸೈಬರ್ ಮಾಲೀಕ, ಬ್ರೋಕರ್ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಹಾರ್ಡ್ ವೇರ್ ಎಂಜಿನಿಯರ್ ಆಗಿದ್ದಾರೆ. ಓರ್ವ ಜಮೀನು ಖರೀದಿದಾರ ಸೇರಿದಂತೆ ಏಳು ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮತ್ತಷ್ಟು ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ. ರಾಮನಗರದ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ವಿವರ
ಸರ್ಕಾರಿ ಭೂಮಿಯನ್ನು ಈಗಾಗಲೇ ಮಾರಾಟ ಮಾಡಿದ್ದಾರೆ. ಸರ್ಕಾರಿ ಸರ್ವರ್ ನಲ್ಲಿರುವ ತಂತ್ರಾಂಶಗಳ ಲೋಪಗಳೇ ಇವರಿಗೆ ವರದಾನವಾಗಿದೆ. ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ದಾಖಲೆ ಸೃಷ್ಟಿಸಿರುವುದು ಈಗ ಬೆಳಕಿಗೆ ಬಂದಿದೆ. ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಮಾಡಲಾಗದ ಕೆಲಸ ಇವರು ಮಾಡಿ ಫಲಾನುಭವಿಗಳಿಗೆ ಆರ್‌ಟಿಸಿ ಕೊಡುತ್ತಿದ್ದರು.
ಇದನ್ನೂ ಓದಿ:ಉಡುಪಿ: ಮಕ್ಕಳ ಕಳ್ಳತನ; ಸಂಶಯಾಸ್ಪದ ವ್ಯಕ್ತಿಗಳ ಮಾಹಿತಿ ನೀಡಲು ಎಸ್‌ಪಿ ಸೂಚನೆ
ಕನಕಪುರ ತಾಲೂಕಿನ ಬನ್ನಿಕುಪ್ಪೆ, ತುಗಣಿ, ರಾಂಪುರಗಳಲ್ಲಿ ಆರು ಎಕರೆ ಮಾರಾಟ ಮಾಡಿರುವುದು ತಿಳಿದು ಬಂದಿದೆ. ಈ ಮೂಲಕ ಸರ್ಕಾರಕ್ಕೆ ಸುಮಾರು ಆರು ಕೋಟಿಯಷ್ಟು ಹಣ ವಂಚನೆ ಮಾಡಿದ್ದಾರೆ.
ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ಭೂದಾಖಲೆಯನ್ನು ತಂತ್ರಾಂಶದಲ್ಲಿ ಅಪ್ ಲೋಡ್ ಮಾಡುತ್ತಿದ್ದರು. ಈಗಾಗಲೇ ಇವರು ಏಳು ಆರ್.ಟಿ.ಸಿ ಸೃಷ್ಟಿಸಿ ಆರು ಮಂದಿಗೆ ಭೂಮಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
