Wild animals ದಾಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹೆಚ್ ಡಿಕೆ ಆಗ್ರಹ
ಚನ್ನಪಟ್ಟಣದ ರೈತ ವೀರಭದ್ರಯ್ಯ ನಿಧನಕ್ಕೆ ಮಾಜಿ ಸಿಎಂ ಕಂಬನಿ
Team Udayavani, Jun 3, 2023, 4:50 PM IST
ರಾಮನಗರ/ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಚನ್ನಪಟ್ಟಣದ ವಿರೂಪಸಂದ್ರ ಗ್ರಾಮದಲ್ಲಿ ಮಾವಿನ ತೋಟ ಕಾಯುತ್ತಿದ್ದ ವೀರಭದ್ರಯ್ಯ ಅವರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿ, ಕಾಡಂಚಿನಲ್ಲಿ ರೈತರು ಆತಂಕ, ಭಯದಿಂದ ಬದುಕುವಂತಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು. ವೈಜ್ಞಾನಿಕವಾಗಿ ಬೇಲಿ ನಿರ್ಮಾಣ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.
ಅನೆ ದಾಳಿಯಿಂದ ರೈತ ವೀರಭದ್ರಯ್ಯ ಅವರು ಅಸುನೀಗಿದ ವಾರ್ತೆ ಕೇಳಿ ಬಹಳ ದುಃಖ ಉಂಟಾಯಿತು. ಮೃತ ರೈತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಆ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಅರಣ್ಯ ಸಂರಕ್ಷಣೆ ಜತೆಗೆ ಕಾಡಿನ ಅಕ್ಕಪಕ್ಕ ಬೇಸಾಯ ಮಾಡುವ ರೈತರ ಹಿತವೂ ಮುಖ್ಯ. ರೈತಾಪಿ ಜನರ ಜೀವ ಅಮೂಲ್ಯ. ಈ ಕಾರಣಕ್ಕಾಗಿ ಅರಣ್ಯ ವಲಯದಲ್ಲಿ ವೈಜ್ಞಾನಿಕ ಬೇಲಿ ನಿರ್ಮಾಣ ಮಾಡಬೇಕು ಎಂದು ನಾನು ಅನೇಕ ಸಲ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದೇನೆ. ಈ ಬಗ್ಗೆ ಇನ್ನಷ್ಟು ವಿಳಂಬ ಮಾಡಬಾರದು ಎಂದು ಒತ್ತಾಯ ಮಾಡಿದ್ದಾರೆ.
ಚನ್ನಪಟ್ಟಣ ಮಾತ್ರವಲ್ಲದೆ, ರಾಮನಗರ ಜಿಲ್ಲೆಯ ನಾನಾ ಭಾಗಗಳಲ್ಲಿ ಜನರ ಮೇಲೆ ಕಾಡುಪ್ರಾಣಿಗಳು ದಾಳಿ ನಡೆಸುವ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎನ್ನುವುದು ನನ್ನ ಆಗ್ರಹ ಎಂದು ಅವರು ತಿಳಿಸಿದ್ದಾರೆ.
ಸಚಿವರು ಈಗಾಗಲೇ ತಿಳಿಸಿರುವಂತೆ, ಕೂಡಲೇ ನೊಂದ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ಹಸ್ತಾಂತರ ಮಾಡಬೇಕು ಹಾಗೂ ಕಾಡಂಚಿನಲ್ಲಿ ಎಲ್ಲಾ ಸುರಕ್ಷಿತ ಕ್ರಮಗಳನ್ನು ವಹಿಸಿ ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಶಾಶ್ವತವಾಗಿ ತಡೆಯುವ ಎಲ್ಲಾ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS;ಶತಮಾನ ಸಂಭ್ರಮಕ್ಕೆ ‘ಪಂಚಪರಿವರ್ತನ’: 3 ಹಂತದಲ್ಲಿ 5 ತತ್ತ್ವಗಳ ಪಾಲನೆ
Muzrai; ಅರ್ಚಕರಿಗೆ 5 ಲಕ್ಷ ರೂ. ಜೀವ ವಿಮೆಗೆ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಭರವಸೆ
Channapatna by-election; ಸ್ಪರ್ಧೆ ಖಚಿತ ಎಂದ ಸಿಪಿ ಯೋಗೇಶ್ವರ್
PRR:ಭೂ ಪರಿಹಾರ ಬದಲಿಗೆ ಟಿಡಿಆರ್ ನೀಡಲು ಸಂಪುಟ ಸಭೆ ತೀರ್ಮಾನ
G.Parameshwara; ಬೊಂಬೆ ಹೇಳುತೈತೆ ಹಾಡಿಗೆ ಗೃಹ ಸಚಿವರ ಹೆಜ್ಜೆ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Martin Movie Review: ಆ್ಯಕ್ಷನ್ ಅಬ್ಬರದಲ್ಲಿ ಮಾರ್ಟಿನ್ ಮಿಂಚು
Baba Siddique Case: ಲಾರೆನ್ಸ್ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್ ಗಳ ಬಂಧನ
Udupi: ನಕಲಿ ದಾಖಲೆಗಳ ಪೂರೈಕೆಯ ಫ್ಯಾಕ್ಟರಿ ಕರಾವಳಿಯಲ್ಲಿ?
Bangla Illegal immigrants: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪೊಲೀಸರ ಕಟ್ಟೆಚ್ಚರ
Women’s T20 World Cup: ಭಾರತಕ್ಕಿಂದು ಆಸೀಸ್‌ವಿರುದ್ಧ ನಿರ್ಣಾಯಕ ಪಂದ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.