ಹೆಚ್ಚಿನ ಪರಿಹಾರಕ್ಕೆ ಎಚ್‌ಡಿಕೆ ಒತ್ತಾಯ


Team Udayavani, May 20, 2020, 7:05 AM IST

kumaranna

ಚನ್ನಪಟ್ಟಣ: ಬಿರುಗಾಳಿ ಮಳೆಗೆ ಹಾನಿಗೀಡಾಗಿರುವ ಬೆಳೆಗಳಿಗೆ ಪ್ರಕೃತಿ ವಿಕೋಪ ನಿಧಿಯಿಂದ ನೀಡುವ ಪರಿಹಾರದ ಜತೆಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ವೈಯಕ್ತಿಕವಾಗಿ ಹಾನಿ ಯಾಗಿರುವ ಪ್ರತಿ ಎಕರೆಗೆ 10 ಸಾವಿರ ರೂ. ಪರಿಹಾರ ನೀಡುತ್ತೇನೆ ಎಂದು ಮಾಜಿ ಮುಖ್ಯ ಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ತಾಲೂಕಿನ ಗೋವಿಂದಹಳ್ಳಿ ಗ್ರಾಮದಲ್ಲಿ ಬಿರುಗಾಳಿಯಿಂದ ನೆಲಕಚ್ಚಿರುವ ಬಾಳೆ ತೋಟಕ್ಕೆ ಭೇಟಿ ನೀಡಿ  ಮಾತನಾಡಿದರು. ಪ್ರಕೃತಿ ವಿಕೋಪ ನಿಧಿಯಲ್ಲಿ ಹಾನಿಗೀಡಾದ ಪ್ರತಿ ಹೆಕ್ಟೇರ್‌ಗೆ 18 ಸಾವಿರ ರೂ. ನೀಡುವ ನಿಯಮವಿದೆ. ಆದರೆ ಪಾರಿಹಾರ ಸಾಲುವು ದಿಲ್ಲ. ಒಂದು ಎಕರೆಯಲ್ಲಿ ಬಾಳೆ ಬೆಳೆಯಲು ಕನಿಷ್ಠ 80 ರಿಂದ 1 ಲಕ್ಷ ರೂ.  ಅಗತ್ಯವಿದೆ.

ಹೂ ವಿನ ಬೆಳೆಗಾರರಿಗೆ 25 ಸಾವಿರ ರೂ. ಪರಿಹಾರ ಘೋಷಣೆ ಮಾಡಿರುವಂತೆ ಇದಕ್ಕೂ ನೀಡಲು ಸರ್ಕಾರ ಮುಂದಾಗಬೇಕು ಎಂದರು. ಸುಮಾರು 150 ಎಕರೆ ಪ್ರದೇಶದಲ್ಲಿ ಬೆಳೆದ ಬಾಳೆ ನಾಶವಾಗಿದೆ, 2 ಸಾವಿರ ತೆಂಗು ನೆಲ  ಕಚ್ಚಿದೆ, ಸಾಕಷ್ಟು ಮನೆಗಳಿಗೆ ಹಾನಿಯಾಗಿವೆ. ಪ್ರತಿ ಎಕರೆಗೆ ಸುಮಾರು 8ರಿಂದ 10 ಲಕ್ಷ ರೂ. ಆದಾಯ ನಷ್ಟವಾಗಿದೆ.

ಹಿಂದಿನ ಸರ್ಕಾರದಲ್ಲಿ ತೆಂಗು ಬೆಳೆಗೆ ಎಕರೆಗೆ 20 ಸಾವಿರ ರೂ. ಪರಿ ಹಾರ ಕೊಡಲಾಗಿತ್ತು. ಅದೇ ರೀತಿ ಮುಂದು  ವರಿಸಬೇಕು ಎಂದು ಆಗ್ರಹಪಡಿಸಿದರು. ಸಂಸದ ಡಿ.ಕೆ.ಸುರೇಶ್‌ ಮಾತನಾಡಿ, ಎಸ್‌ ಡಿಆರ್‌ಎಫ್‌ನಿಂದ 18 ಸಾವಿರ ರೂ. ಪರಿಹಾರ ನೀಡುವ ನಿಯಮವಿದ್ದು, ಅದನ್ನು ಹೆಚ್ಚಿಸುವಂತೆ ಈಗಾಗಲೇ ಮನವಿ ಮಾಡ ಲಾಗಿದೆ.

ಸರ್ಕಾರಕ್ಕೆ  ತರ ಬಗ್ಗೆ ಕಾಳಜಿ ಯಿದ್ದರೆ, ಪರಿಶೀಲಿಸಿ ಪರಿಹಾರ ಮಂಜೂರು ಮಾಡಬೇಕು ಎಂದರು. ಮುದಗೆರೆ, ಬೆಳಕೆರೆ, ಕೋಲೂರು, ಸೀಬನಹಳ್ಳಿ ಸೇರಿದಂತೆ ಹಾನಿಗೀಡಾಗಿರುವ ಗ್ರಾಮಗಳಿಗೆ ಉಭಯ ನಾಯಕರು ಭೇಟಿ ನೀಡಿ ರೈತರಿಂದ ಮನವಿ ಆಲಿಸಿದರು. ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.

ಜಿಪಂ ಅಧ್ಯಕ್ಷ ಬಸಪ್ಪ, ಸದಸ್ಯ ಎಸ್‌. ಗಂಗಾಧರ್‌, ಪ್ರಸನ್ನ, ಸಿ.ಪಿ.ರಾಜೇಶ್‌, ತಾಪಂ ಅಧ್ಯಕ್ಷ ರಾಜಣ್ಣ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎ.ಸಿ.ವೀರೇಗೌಡ, ಶಿವಮಾದು, ಟಾಸ್‌ಫೋರ್ಸ್‌ ಅಧ್ಯಕ್ಷ ಶರತ್‌ಚಂದ್ರ, ಕಾಂಗ್ರೆಸ್‌ ಮುಖಂಡ ಆರ್‌.ನವ್ಯಶ್ರೀ, ಚಂದ್ರಸಾಗರ್‌, ಜೆಡಿಎಸ್‌ ತಾಲೂಕು ಅಧ್ಯಕ್ಷ ಜಯಮುತ್ತು, ನಗರಾಧ್ಯಕ್ಷ ರಾಜಣ್ಣ ಸೇರಿದಂತೆ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.