ಚನ್ನಪಟ್ಟಣಕೆ ಹೈಟೆಕ್‌ ರೇಷ್ಮೆಗೂಡು ಮಾರುಕಟ್ಟೆ


Team Udayavani, Aug 28, 2020, 5:04 PM IST

ಚನ್ನಪಟ್ಟಣಕೆ  ಹೈಟೆಕ್‌ ರೇಷ್ಮೆಗೂಡು ಮಾರುಕಟ್ಟೆ

ರಾಮನಗರ: ಚನ್ನಪಟ್ಟಣ ತಾಲೂಕಿನ ಪೊಲೀಸ್‌ ತರಬೇತಿಶಾಲೆಯ ಪಕ್ಕದಲ್ಲಿರುವ ರೇಷ್ಮೆ ಇಲಾಖೆಗೆ ಸೇರಿದ ಭೂಮಿಯಲ್ಲಿ ಸರ್ಕಾರಿ ಹೈಟೆಕ್‌ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಸರ್ಕಾರ ಉದ್ದೇಶಿಸಿದ್ದು, ಜಿಲ್ಲಾ ಕೇಂದ್ರ ರಾಮನಗರದಲ್ಲಿ ಆಕ್ಷೇಪ, ವಿರೋಧ ವ್ಯಕ್ತವಾಗುತ್ತಿದೆ.

ಜಿಲ್ಲಾ ಕೇಂದ್ರ ರಾಮನಗರದ ಆರ್ಥಿಕತೆಗೆ ಕಾರಣವಾಗಿರುವ ರೇಷ್ಮೆಗೂಡು ಮಾರುಕಟ್ಟೆಯನ್ನು ಚನ್ನಪಟ್ಟಣ ತಾಲೂಕಿನಗೆ ವರ್ಗಾವಣೆಯಾಗುವುದು ಜಿಲ್ಲಾಕೇಂದ್ರದ ಆರ್ಥಿಕತೆಯ ದೃಷ್ಟಿಯಲ್ಲಿ ಒಳ್ಳೆಯದಲ್ಲ ಎಂದು ಕೆಲವು ನಾಗರಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ರಾಮನಗರಕ್ಕೆ ಇರುವ ರೇಷ್ಮೆ ನಗರ ಎಂಬ ಸ್ಟೇಟಸ್‌ಗೂ ಧಕ್ಕೆಯಾಗುವ ಆತಂಕ ವ್ಯಕ್ತವಾಗಿದೆ.

ರೀಲರ್‌ಗಳ ವಿರೋಧ: ಚನ್ನಪಟ್ಟಣದಲ್ಲಿ ಹೈಟೆಕ್‌ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ರೀಲರ್‌ಗಳ ಸಂಘದ ಅಧ್ಯಕ್ಷ ಮುಹೀಬ್‌ ಪಾಷ ತೀವ್ರ ವಿರೋಧವ್ಯಕ್ತಪಡಿಸಿದ್ದಾರೆ. ರಾಮನಗರದಲ್ಲಿ ಸುಮಾರು 2000 ಸಕ್ರಿಯ ರೀಲರ್‌ ಗಳಿದ್ದಾರೆ. ರಾಮನಗರದಲ್ಲಿ ಹಾಲಿ ಇರುವ ರೇಷ್ಮೆ ಗೂಡು ಮಾರುಕಟ್ಟೆಗೂ, ಉದ್ದೇಶಿತ ಸ್ಥಳಕ್ಕೂ ಸುಮಾರು 6 ಕಿಮೀಗಳ ಅಂತರವಿದೆ. ಇಷ್ಟು ದೂರದಿಂದ ಗೂಡು ಖರೀದಿಸಿ ತರುವುದು ಆರ್ಥಿಕಮತ್ತು ಸಮಯದ ಕಾರಣ ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಇಲ್ಲೇ ಇರಲಿ – ರೇಷ್ಮೆ ಬೆಳೆಗಾರರು: ರೇಷ್ಮೆ ಗೂಡು ಮಾರುಕಟ್ಟೆಯಿಂದಾಗಿ ರಾಮನಗರದಲ್ಲಿ ಇನ್ನಿತರೆ ವ್ಯಾಪಾರ, ವಹಿವಾಟು ಸಹ ನಡೆಯುತ್ತಿದೆ. ಹೀಗಾಗಿ ರಾಮನಗರ ನಗರ ಪ್ರದೇಶದ ಆಸುಪಾಸಿನಲ್ಲೇ ಹೈಟೆಕ್‌ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಣವಾಗಬೇಕು ಎಂದು ರೇಷ್ಮೆ ಬೆಳೆಗಾರರು ಪ್ರತಿಕ್ರಿಯಿಸಿದ್ದಾರೆ. ಹಾಲಿ ಡೀಸಿ ಕಚೇರಿ ಪಕ್ಕದಲ್ಲೇ ಇರುವ ರೇಷ್ಮೆ ಇಲಾಖೆಗೆ ಸೇರಿದ ಸ್ಥಳದಲ್ಲೇ ಹೈಟೆಕ್‌ ಮಾರುಕಟ್ಟೆ ನಿರ್ಮಾಣವಾಗಲಿ. ಆರ್‌ಟಿಒ ಕಚೇರಿಯನ್ನು ಬೇರೆಡೆ ಸ್ಥಳಾಂತರಿಸಲಿ ಎಂಬ ಅಭಿಪ್ರಾಯಗಳು ನಾಗರಿಕರ ವಲಯದಲ್ಲಿ ವ್ಯಕ್ತವಾಗಿದೆ.

ಹೈಟೆಕ್‌ ರೇಷ್ಮೆಗೂಡು ಮಾರುಕಟ್ಟೆಗೆ ಸೂಕ್ತ ಸ್ಥಳ ಹುಡುಕುವ ವಿಚಾರದಲ್ಲಿ ಸರ್ಕಾರ ವಿಫ‌ಲವಾಗಿದೆ. ರೇಷ್ಮೆ ನಾಡು ಖ್ಯಾತಿ ತಂದು ಕೊಟ್ಟ ಮಾರುಕಟ್ಟೆ ರಾಮನಗರ ತಾಲೂಕಿನಲ್ಲೇ ಸ್ಥಾಪನೆ ಯಾಗಬೇಕು. ಹಾಲಿಡೀಸಿ ಕಚೇರಿ, ಆರ್‌ಟಿಒ ಕಚೇರಿ ಇರುವುದು ಸಹ ರೇಷ್ಮೆ ಇಲಾಖೆಗೆ ಸೇರಿದ ಸ್ಥಳದಲ್ಲೇ. ಜಿಲ್ಲಾಡಳಿತ ಈ ವಿಚಾರವನ್ನು ಅರ್ಥ ಮಾಡಿಕೊಂಡು ರಾಮನಗರದಲ್ಲೇ ಹೈಟೆಕ್‌ ಮಾರುಕಟ್ಟೆಗೆ ಸ್ಥಳ ಕೊಡಬೇಕು.  ಗೌತಂ, ಅಧ್ಯಕ್ಷರು, ರೇಷ್ಮೆ ಬೆಳೆಗಾರರ ಸಂಘ

ಹೈಟೆಕ್‌ ರೇಷ್ಮೆಗೂಡು ಮಾರುಕಟ್ಟೆ ಚನ್ನ ಪಟ್ಟಣದಲ್ಲಿ ನಿರ್ಮಾಣ ಉದ್ದೇಶದ ಹಿಂದೆ ರಾಜಕೀಯ ಹುನ್ನಾರವಿದೆ. ರಾಮನಗರ ತಾಲೂಕಿ ನಲ್ಲೇ ಸಾಕಷ್ಟು ಭೂಮಿ ಲಭ್ಯವಿದೆ. ಹೈಟೆಕ್‌ ಮಾರುಕಟ್ಟೆ ಇಲ್ಲೇ ನಿರ್ಮಾಣ ವಾಗಬೇಕು.  ಬಿ.ನಾಗೇಶ್‌, ನಗರಸಭೆ ಮಾಜಿ ಸದಸ್ಯ

 

ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.