ಅವಳಿ ಜಿಲ್ಲೆಯಲ್ಲಿ ಕ್ಷೀಣಿಸುತ್ತಿರುವ ಎಚ್‌ಐವಿ

ರಾಮನಗರ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಸೋಂಕಿತರು

Team Udayavani, Nov 30, 2020, 12:55 PM IST

ಅವಳಿ ಜಿಲ್ಲೆಯಲ್ಲಿ ಕ್ಷೀಣಿಸುತ್ತಿರುವ ಎಚ್‌ಐವಿ

ರಾಮನಗರ: ಜಿಲ್ಲೆಯಲ್ಲಿ ಕಳೆದ 3 ವರ್ಷಗಳಲ್ಲಿ ಎಚ್‌ಐವಿ ಸೋಂಕಿತರ ಸಂಖ್ಯೆ ಕ್ಷೀಣಿಸುತ್ತಿದೆ. ಸದ್ಯ ಜಿಲ್ಲೆಯಲ್ಲಿ 467 ಮಂದಿ ಸೋಂಕಿತರಿದ್ದು ಎಆರ್‌ಟಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಏಪ್ರಿಲ್‌2018 ರಿಂದ ಮಾರ್ಚ್‌ 2019ರ ಅವಧಿಯಲ್ಲಿ ಜಿಲ್ಲೆಯಲ್ಲಿ 55333 ಮಂದಿ ಎಚ್‌ಐವಿ ಸೋಂಕಿನ ಪರೀಕ್ಷೆಗೆ ಒಳಗಾಗಿದ್ದರು. ಈ ಪೈಕಿ 194 ಮಂದಿ ಸೋಂಕಿತರು ಪತ್ತೆಯಾಗಿದ್ದರು. ಏಪ್ರಿಲ್‌ 2019ರಿಂದ 2020ರ ಮಾರ್ಚ್‌ ಅವಧಿಯಲ್ಲಿ 63604 ಮಂದಿ ಸೋಂಕು ಪತ್ತೆಗಾಗಿ ಪರೀಕ್ಷೆ ಮಾಡಿಸಿಕೊಂಡಿದ್ದು194 ಮಂದಿ ಸೋಂಕಿತರು ಪತ್ತೆಯಾಗಿದ್ದರು. ಏಪ್ರಿಲ್‌2020ರಿಂದ ಅಕ್ಟೋಬರ್‌2020ರವರೆಗೆ 32940 ಮಂದಿ ಪರೀಕ್ಷೆಗೆ ಒಳಗಾಗಿದ್ದು 79 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಜಿಲ್ಲೆಯಲ್ಲಿಕಳೆದ3 ವರ್ಷಗಳಲ್ಲಿ ಒಟ್ಟು151877ಮಂದಿ ಎಚ್‌ಐವಿ ಪರೀಕ್ಷೆಗೆ ಒಳಗಾಗಿದ್ದಾರೆ. ಈ ಪೈಕಿ 467 ಮಂದಿಗೆ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ದರ ಇದೀಗ ಶೇ 0.30ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಗರ್ಭಿಣಿ ಮತ್ತು ಅವರ ಪತಿ ಸೇರಿದಂತೆ ವಿವಿಧ ಸೋಂಕು ಕಾಯಿಲೆ ಯವರಿಗೆ ಕಡ್ಡಾಯವಾಗಿ ಎಚ್‌ಐವಿ ಸೋಂಕು ಪರೀಕ್ಷೆಗಳು ನಡೆಯುತ್ತಿವೆ.

ಜಾಗತಿಕ ಒಗ್ಗಟ್ಟು ಜವಾಬ್ದಾರಿ ಹಂಚಿಕೆ: ವಿಶ್ವ ಆರೋಗ್ಯ ಸಂಸ್ಥೆ ಆದೇಶದಲ್ಲಿ ಪ್ರತಿ ಡಿ.1ರಂದು ವಿಶ್ವ ಏಡ್ಸ್‌ ದಿನ ಆಚರಿಸಲಾಗುತ್ತಿದೆ. ವಿಶೇಷವಾಗಿ ಈ ದಿನ ಎಚ್‌ಐವಿ/ಏಡ್ಸ್‌ ಸೋಂಕಿನ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು, ಸೋಂಕು ಹರಡುವ ರೀತಿ, ಅದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮ ಗಳ ಬಗ್ಗೆ ಜನ ಸಾಮಾನ್ಯರಲ್ಲಿ ಮಾಹಿತಿ ಕೊಡುವುದು ಈ ದಿನಾಚರಣೆಯ ಪ್ರಮುಖ ಉದ್ದೇಶ. ಎಚ್‌ಐವಿಸೋಂಕು ತಡೆಗಾಗಿ ಜಾಗತಿಕ ಒಗ್ಗಟ್ಟು ಜವಾಬ್ದಾರಿ ಹಂಚಿಕೆ ಎಂಬ ಘೋಷ ವಾಕ್ಯದಡಿ ಏಡ್ಸ್‌ ದಿನವನ್ನು ಆಚರಿಸಲಾಗುತ್ತಿದೆ.

ಸೋಂಕಿತರಿಗೆವಿವಿಧ ಸರ್ಕಾರಿ ಸವಲತ್ತು :  ಜಿಲ್ಲಾಸ್ಪತ್ರೆ-ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಮಗ್ರ ಆಪ್ತ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರಗಳು ಅಸ್ತಿತ್ವದಲ್ಲಿವೆ. ಜಿಲ್ಲಾಸ್ಪತ್ರೆಯಲ್ಲಿ ಡಿಎಸ್‌ಆರ್‌ಸಿ ಕೇಂದ್ರ ಅಸ್ತಿತ್ವದಲ್ಲಿದ್ದು ಇಲ್ಲಿ ಲೈಂಗಿಕ ಸೋಂಕು ಕುರಿತಾದ ಆಪ್ತ ಸಮಾಲೋಚನೆ ಮತ್ತು ಪರೀಕ್ಷಾ ಸೌಲಭ್ಯವಿದೆ. ಎಚ್‌ಐವಿ ಸೋಂಕಿತರಿಗಾಗಿ ಜಿಲ್ಲಾಸ್ಪತ್ರೆಯಲ್ಲಿ ಎಆರ್‌ಟಿ ಕೇಂದ್ರದಲ್ಲಿ ಉಚಿತ ಚಿಕಿತ್ಸೆ ಮತ್ತು ವೈದ್ಯಕೀಯ ಸೌಲಭ್ಯ ಸಿಗುತ್ತಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಿಂದ ಉಚಿತ ಕಾನೂನು ಸೇವಾ ಸೌಲಭ್ಯದ ವ್ಯವಸ್ಥೆ ಇದ್ದು, ಪ್ರತಿ ಶನಿವಾರ ಎಆರ್‌ಟಿ ಕೇಂದ್ರದಲ್ಲೇ ನಡೆಯುತ್ತಿದೆ.ಸೋಂಕಿತರಿಗಾಗಿ ಸರ್ಕಾರದ ವತಿಯಿಂದ ವಿವಿಧ ಇಲಾಖೆಗಳ ಮೂಲಕ ಸವಲತ್ತು ಜಾರಿಯಲ್ಲಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಧನಶ್ರೀ ಯೋಜನೆ, ಧಮನಿತ ಮಹಿಳೆಯರಿಗಾಗಿ ಚೇತನಾ ಯೋಜನೆ ಜಾರಿಯಲ್ಲಿದೆ.

ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ : ಡಿ.1ರಂದು ರಾಮನಗರದ ಸರ್ಕಾರಿಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಆರೋಗ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು, ಏಡ್ಸ್‌ ಸೋಂಕಿನ ಬಗ್ಗೆ ತಿಳಿವಳಿಕೆ, ಏಡ್ಸ್‌ ಕಾರ್ಯಕ್ರಮದಡಿ ಕಾರ್ಯನಿರ್ವಹಿಸುತ್ತಿರುವ 5 ಮಂದಿ ಆರೋಗ್ಯ ಸಿಬ್ಬಂದಿಗೆ ಸನ್ಮಾನ, ಮೂರು ರೆಡ್‌ ರಿಬ್ಬನ್‌ ಘಟಕಗಳ ಪದಾಧಿಕಾರಿಗಳಿಗೆ ಸನ್ಮಾನ ನಡೆಯಲಿದೆ. ಡಿಎಚ್‌ಒ ಡಾ.ನಿರಂಜನ್‌, ಏಡ್ಸ್‌ ನಿಯಂತ್ರಣ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಕುಮಾರ್‌, ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ಎನ್‌.ರವಿಕು ಮಾರ್‌ ಮುಂತಾದವರು ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.