ಸಚಿವ ಸುರೇಶ್‌ ಕುಮಾರ್‌ ರಾಜೀನಾಮೆಗೆ ಒತ್ತಾಯ

Team Udayavani, Nov 18, 2019, 5:01 PM IST

rn-tdy-02

ರಾಮನಗರ: ಸಂವಿಧಾನ ಕತೃ ಡಾ.ಬಿ.ಆರ್‌. ಅಂಬೇಡ್ಕರ್‌ ಅವರಿಗೆ ಅಗೌರವ ಉಂಟು ಮಾಡಿರುವ ಶಿಕ್ಷಣ ಇಲಾಖೆಯ ಅಧಿಕಾರಿ ಉಮಾ ಶಂಕರ್‌ರನ್ನು ಸರ್ಕಾರ ತಕ್ಷಣ ಸೇವೆಯಿಂದ ವಜಾ ಮಾಡಬೇಕು. ಹಾಗೂ ಅವರನ್ನು ಉಳಿಸಿಕೊಳ್ಳಲು ಯತ್ನಿಸುತ್ತಿರುವ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ತಾಲೂಕಿನ ಬಿಡದಿಯಲ್ಲಿ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದಲಿತ ಸಮುದಾಯಗಳ ಕ್ಷೇಮಾಭಿವೃದ್ಧಿ ಸಮಿತಿ ಒಕ್ಕೂಟದ ನೇತೃತ್ವದಲ್ಲಿ ಕರ್ನಾಟಕ ಬೌದ್ಧ ಸಮಾಜ, ಬಹುಜನ ಸಮಾಜ ಪಾರ್ಟಿ ಹಾಗೂ ವಿವಿಧ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಬಿಡದಿಯ ಬಿಜಿಎಸ್‌ ವೃತ್ತದಲ್ಲಿ ಜಮಾಯಿಸಿ ಅಧಿಕಾರಿ ಮತ್ತು ಸಚಿವರ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ದಲಿತ ಸಮುದಾಯಗಳ ಕ್ಷೇಮಾಭಿವೃದ್ಧಿ ಸಮಿತಿ ಒಕ್ಕೂಟದ ಅಧ್ಯಕ್ಷ ಕೆಂಚನಕುಪ್ಪೆ ರಾಮಕೃಷ್ಣಯ್ಯ, ಅಂಬೇಡ್ಕರ್‌ ಒಬ್ಬರೇ ಸಂವಿಧಾನ ಬರೆದಿಲ್ಲವೆಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಸುತ್ತೋಲೆಯಲ್ಲಿ ಉಲ್ಲೇಖಸಿರುವುದು ಅಂಬೇಡ್ಕರ್‌ ಅವರನ್ನು ಅವಮಾನಿಸಲು ನಡೆಸಿರುವ ಷಡ್ಯಂತ್ರ. ಇದೊಂದು ಸುಳ್ಳು ಮಾಹಿತಿ ನೀಡಿ ಮಕ್ಕಳಲ್ಲಿ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ಎಲ್ಲರೂ ಒಪ್ಪಿರುವ ಸತ್ಯಕ್ಕೆ ಚ್ಯುತಿ ತರುವ ಯತ್ನಅಂಬೇಡ್ಕರ್‌ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರಲು ಯತ್ನಿಸಿರುವ ಈ ಅಧಿಕಾರಿಗೆ ತಕ್ಕ ಶಿಕ್ಷೆಯಾಗಲೇ ಬೇಕು ಎಂದು ಅವರು ಒತ್ತಾಯಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೆ ತಪ್ಪಿನ ಅರಿವಿದ್ದರೂ, ಸಹ ಜಾಣ ಕುರುಡುತನ ಪ್ರದರ್ಶಿಸಿದ್ದಾರೆ. ಅಧಿಕಾರಿ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ದಲಿತ ಸಮುದಾಯಗಳ ಕ್ಷೇಮಾಭಿವೃದ್ಧಿ ಸಮಿತಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹಾಗೂ ಪುರಸಭೆ ಸದಸ್ಯ ಶಿವಕುಮಾರ್‌, ಪದಾಧಿಕಾರಿಗಳಾದ ನಾಗೇಂದ್ರ, ಇಟ್ಟಮಡು ಶ್ರೀಧರ್‌, ಅಬ್ಬನಕುಪ್ಪೆ ವೆಂಕಟೇಶ್‌, ರಾಮನಹಳ್ಳಿ ಸುರೇಶ್‌, ಪುಟ್ಟಸ್ವಾಮಣ್ಣ, ಬಾನಂದೂರು ಕೆಂಪರಾಜು, ಬಿಎಸ್‌ಪಿ ಜಿಲ್ಲಾ ಕಾರ್ಯದರ್ಶಿ ಬಾನಂದೂರು ಕುಮಾರ್‌, ಕರ್ನಾಟಕ ಬೌದ್ಧ ಸಮಾಜದ ಅಧ್ಯಕ್ಷ ಸುರೇಶ್‌, ರವಿ ಅಬ್ಬನಕುಪ್ಪೆ, ಸಂಜಯ್‌, ಲೋಕೇಶ್‌ ಕಲ್ಲುಗೋಪಹಳ್ಳಿ,ಬನ್ನಿಕುಪ್ಪೆ ಕುಮಾರ್‌, ಅವರಗೆರೆ ಗಿರೀಶ್‌ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.