Udayavni Special

ಪ್ರಚಾರದಲ್ಲಿ ಅಭ್ಯರ್ಥಿ ಸೇರಿ ಐವರಿಗೆ ಅವಕಾಶ


Team Udayavani, Apr 21, 2021, 3:22 PM IST

Join the candidate in the campaign

ರಾಮನಗರ: ಚನ್ನಪಟ್ಟಣ ಹಾಗೂ ರಾಮನಗರ ನಗರಸಭೆಗಳಿಗೆ ಏ.27ರಂದು ಚುನಾವಣೆ ನಡೆಯಲಿದ್ದು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಪ್ರಚಾರದ ವೇಳೆ ಅಭ್ಯರ್ಥಿಗಳು ಪಾಲಿಸಬೇಕಾದ ಕೆಲವು ಸೂಚನೆ ನೀಡಿದೆ.

ಸೂಚನೆಗಳೇನು?: ಪ್ರಚಾರದ ವೇಳೆ ಅಭ್ಯ ರ್ಥಿಯೂ ಸೇರಿ ಗರಿಷ್ಠ 5 ಮಂದಿ ಬೆಂಬಲಿಗರೊಂದಿಗೆ ಫೇಸ್‌ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮನೆ, ಮನೆಗೆ ಭೇಟಿ ಕೊಟ್ಟು ಪ್ರಚಾರ ಮಾಡಬಹುದು. ಪ್ರಚಾರಕ್ಕೆ ಯಾವುದೇ ವಾಹನ ಬಳಸುವುದನ್ನು ಹಾಗೂ ಗುಂಪು, ಗುಂಪಾಗಿ ಪ್ರಚಾರ ಮಾಡುವುದನ್ನು ನಿಷೇಧಿಸಿದೆ.

ಅಭ್ಯರ್ಥಿಗಳು ಪ್ರಚಾರದ ಸಂದ ರ್ಭದಲ್ಲಿ ಫೇಸ್‌ ಮಾಸ್ಕ್ ಕಡ್ಡಾಯವಾಗಿ ಧರಿಸತಕ್ಕದ್ದು, ವಿದ್ಯುನ್ಮಾನ ಮೀಡಿಯಾದಲ್ಲಿ ಪ್ರಚಾರ ಕೈಗೊಳ್ಳಬಹುದು. ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನು ಹಂಚಬಹುದು. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಕೈಗವುಸು, ಫೇಸ್‌ ಮಾಸ್ಕ್ ಧರಿಸಿರಬೇಕು.

ಈ ಮೇಲ್ಕಂಡ ಸೂಚನೆಗಳನ್ನು ಹೊರತುಪಡಿಸಿ ಇನ್ಯಾವುದೇ ತರಹದ ಪ್ರಚಾರ ಕೈಗೊಳ್ಳುವಂತಿಲ್ಲ ಎಂದು ಆದೇಶ ಸ್ಪಷ್ಟವಾಗಿ ತಿಳಿಸಿದೆ. ರಾಜ್ಯದಲ್ಲಿ ಕೋವಿಡ್‌ ಸೋಂಕು ಹಿನ್ನೆಲೆ ಯಲ್ಲಿ ಪ್ರಸ್ತುತ ಉಲ್ಲೇಖಗಳನ್ವಯ ಘೋಷಣೆ ಯಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಸಾರ್ವ ತ್ರಿಕ ಚುನಾವಣೆ ಮತ್ತು ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಕೈಗೊಳ್ಳುವ ಕುರಿತು ಭಾರತ ಸಂವಿಧಾ ನದ ಪರಿಚ್ಚೇದ 243 ಜೆಡ್‌ಎ ಅನ್ವಯ ಪ್ರದತ್ತ ವಾಗಿರುವ ಅಧಿಕಾರವನ್ನು ಚಲಾಯಿಸಿ ಈ ನಿರ್ದೇಶನ ನೀಡಿ ಆದೇಶಿಸಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಸಂಜೆ 6ನಂತರ ಪ್ರಚಾರ ಬೇಡ: ಚುನಾವಣಾ ಪ್ರಚಾರದ ವೇಳೆ ಅಭ್ಯರ್ಥಿಗಳು ಪಾಲಿಸಬೇಕಾದ ಕೋವಿಡ್‌ ನಿಯಮಗಳ ಬಗ್ಗೆ ಆದೇಶ ಹೊರಡಿಸಿದೆ. ಆದರೆ, ಇದು ಎಷ್ಟರಮಟ್ಟಿಗೆ ಪಾಲನೆಯಾಗುತ್ತದೆ ಎಂಬ ಪ್ರಶ್ನೆ ನಾಗರಿಕರನ್ನು ಕಾಡುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಂಜೆಯ ನಂತರ ಗುಂಪು, ಗುಂಪಾಗಿ ಪ್ರಚಾರ ನಡೆಯುತ್ತಿದೆ. ಇದನ್ನು ಕೇಳುವವರೇ ಇಲ್ಲ ಎಂದು ನಾಗರಿಕರು ದೂರಿ ದ್ದಾರೆ. ಸಂಜೆ 6 ಗಂಟೆ ನಂತರ ಚುನಾವಣಾ ಪ್ರಚಾರ ಬಂದ್‌ ಮಾಡಿ ಎಂಬ ಸಲಹೆಗಳು ನಾಗರಿಕರಿಂದ ವ್ಯಕ್ತವಾಗಿದೆ. ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಸೀಮಿತ ಮಂದಿಯೊಂದಿಗೆ ಅಭ್ಯರ್ಥಿಗಳು ಪ್ರಚಾರ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

Udaya Garudachar Statement On war Room and Bed Blocking

ಬಿಬಿಎಂಪಿ ವಾರ್ ರೂಂನಲ್ಲಿ ಒಂದು ಕೋಮಿನ ವಿರುದ್ಧ ದುರ್ವತನೆ ತೋರಿಲ್ಲ: ಉದಯ್ ಗರುಡಾಚಾರ್

covid effect

ಜಿಲ್ಲೆಯಲ್ಲಿ 1,550ಕ್ಕೂ ಹೆಚ್ಚು ಜನ ಘರ್‌ ವಾಪ್ಸಿ

battele-ground

ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್ ಆಡಲು ಈ ನಿಯಮಗಳನ್ನು ಪಾಲಿಸಲೇಬೇಕು !

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

COVID-19: Why India is Pfizer’s shot at redemption

ಜಗತ್ತಿನ ದುಬಾರಿ  ಕೋವಿಡ್ ಲಸಿಕೆ  ಫೈಜರ್..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aim for one thousand units of blood collection

ಸಾವಿರ ಯೂನಿಟ್‌ ರಕ್ತ ಸಂಗ್ರಹದ ಗುರಿ

covacsin is only 10 doses

ಕೊವ್ಯಾಕ್ಸಿನ್‌ ಇರುವುದು 10 ಡೋಸ್‌ ಮಾತ್ರ

ಆರ್.ಆರ್.ನಗರದ 200 ಸೋಂಕಿತರಿರುವ ಆಸ್ಪತ್ರೆಯಲ್ಲೂ ಆಕ್ಸಿಜನ್ ಸಮಸ್ಯೆ: ಡಿ.ಕೆ.ಸುರೇಶ್

ಆರ್.ಆರ್.ನಗರದ 200 ಸೋಂಕಿತರಿರುವ ಆಸ್ಪತ್ರೆಯಲ್ಲೂ ಆಕ್ಸಿಜನ್ ಸಮಸ್ಯೆ: ಡಿ.ಕೆ.ಸುರೇಶ್

City Council Commissioner’s Rounds

ನಗರ ಸಭೆ ಆಯುಕ್ತರ ರೌಂಡ್ಸ್‌: ದಂಡ ವಸೂಲಿ

covid effect

ಭಿಕ್ಷುಕರ ಹಸಿವು ನೀಗಿಸಿದ ಆರಕ್ಷಕ

MUST WATCH

udayavani youtube

ನಿಮ್ಮ ಜಿಲ್ಲೆಗೆ ಎಷ್ಟು ಕೋಟಾ ಬೇಕು ಅದನ್ನ ಸಿಎಂ ಬಳಿ ತಿಳಿಸಿ : ಸಂಸದ ಪ್ರತಾಪ್ ಸಿಂಹ

udayavani youtube

ಮಂಗಳೂರಿನ ಪದವಿನಂಗಡಿಯಲ್ಲಿ ಬೈಕ್ ಗಳ ನಡುವೆ ಅಪಘಾತಭೀಕರ ಅಪಘಾತದ ದೃಶ್ಯ

udayavani youtube

ಹೋಂ ಐಸೋಲೇಷನ್ ಸಂದರ್ಭ ನಾವು ಹೇಗಿರಬೇಕು ?

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

ಹೊಸ ಸೇರ್ಪಡೆ

7-18

ಬೆಡ್‌-ಆಕ್ಸಿಜನ್‌ ಪೂರೈಕೆಗೆ ಕ್ರಮ ಕೈಗೊಳ್ಳಿ

7-17

ಎಲ್ಲರೂ ಒಟ್ಟಾಗಿ ಶ್ರಮಿಸಿ ಕೊರೊನಾ ತಡೆಯೋಣ

7-16

ಸೋಂಕಿತರಿಗೆ ಧೈರ್ಯ ತುಂಬಿದ ಶಾಸಕ ಲಮಾಣಿ

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

7-15

ಕೊರೊನಾ ಸೋಂಕಿತರಿಗೆ ಸೌಲಭ್ಯ ಕಲ್ಪಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.