ರೈತರ ಮನೆ ಬಾಗಿಲಿಗೆ ಕಿಸಾನ್‌ ಸಮ್ಮಾನ್‌ ಯೋಜನೆ

Kisan summon scheme for farmers' doorstep

Team Udayavani, Jun 23, 2019, 2:59 PM IST

rn-tdy-2..

ರೈತರ ಮನೆ ಬಾಗಿಲಿಗೆ ಕಿಸಾನ್‌ ಸಮ್ಮಾನ್‌ ಯೋಜನೆ

ರಾಮನಗರ: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ವಾರ್ಷಿಕ 6 ಸಾವಿರ ರೂ. ಪಡೆಯಲು ಭೂ ಒಡೆತನ ಹೊಂದಿರುವ ರೈತರು ಕೂಡಲೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಜೂನ್‌ 25 ಕೊನೆ ದಿನ. ತಾಲೂಕು ಆಡಳಿತದ ನಗದಿತ ಅರ್ಜಿಗಳನ್ನು ರೈತರ ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ ಎಂದು ತಹಶೀಲ್ದಾರ್‌ ರಾಜು ತಿಳಿಸಿದ್ದಾರೆ.

ಮಿನಿ ವಿಧಾನಸೌಧದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಸಹಾಯಕರು, ಗ್ರಾಮ ಪಂಚಾಯ್ತಿ ಸಿಬ್ಬಂದಿ ರೈತರ ಮನೆ ಬಾಗಿಲಿಗೆ ತೆರಳಿ ಅರ್ಜಿಗಳನ್ನು ವಿತರಿಸಲಿದ್ದಾರೆ. ಈ ಯೋಜನೆಯಡಿ ಪ್ರತಿ ರೈತರಿಗೆ 3 ಕಂತುಗಳಲ್ಲಿ ವಾರ್ಷಿಕ 6 ಸಾವಿರ ರೂ. ರೈತರ ಆಧಾರ್‌ ಜೋಡಣೆ ಆಗಿರುವ ಬ್ಯಾಂಕ್‌ ಖಾತೆಗಳಿಗೆ ಜಮೆ ಆಗಲಿದೆ. ಈ ಸೌಲಭ್ಯವನ್ನು ಪಡೆಯಲು ಎಲ್ಲಾ ರೈತರು ಅರ್ಹರಿದ್ದಾರೆ ಎಂದರು.

ಒದಗಿಸಬೇಕಾದ ದಾಖಲೆಗಳು: ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಸೌಲಭ್ಯ ಪಡೆಯಲು ರೈತರು ತಮ್ಮ ಆಧಾರ್‌ ಸಂಖ್ಯೆ, ಆಧಾರ್‌ ಸಂಖ್ಯೆ ಜೋಡಣೆಯಾಗಿರುವ ಬ್ಯಾಂಕ್‌ ಖಾತೆಯ ಪಾಸ್‌ಬುಕ್‌ ಛಾಯಾ ಪ್ರತಿ ನೀಡಬೇಕಾಗಿದೆ. ರೈತರು ಪಹಣಿ ನೀಡಬೇಕಾಗಿಲ್ಲ. ಆದರೆ, ತಾವು ಹೊಂದಿರುವ ಭೂಮಿಯ ವಿವರವನ್ನು ಅರ್ಜಿಯಲ್ಲಿ ನಮೂದಿಸಬೇಕಾಗಿದೆ. ಪಹಣಿ ವಿವರಗಳನ್ನು ತಾಲೂಕು ಕಚೇರಿಯಲ್ಲಿ ಸಿಬ್ಬಂದಿಯೇ ಪರಿಶೀಲನೆ ಮಾಡಲಿದ್ದಾರೆ ಎಂದು ಹೇಳಿದರು.

ಇವರು ಅನರ್ಹರು: ಸರ್ಕಾರಿ ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತರಾಗಿರುವ ಅಧಿಕಾರಿಗಳು (ಡಿ-ಗ್ರೂಪ್‌ ನೌಕರರು ಹೊರತುಪಡಿಸಿ), 10 ಸಾವಿರ ರೂ.ಗಿಂತ ಹೆಚ್ಚಿ ಮೊತ್ತ ಪಡೆಯುತ್ತಿರುವ ಪಿಂಚಣಿದಾರರು. ಆದಾಯ ತೆರಿಗೆ ಪಾವತಿಸುವ ಕುಟುಂಬಗಳು, ವೈದ್ಯರು, ಎಂಜಿನಿಯರ್‌, ವಕೀಲರು ಮುಂತಾದ ವೃತ್ತಿಪರರು (ಪತಿ ಅಥವಾ ಪತ್ನಿ), ಸಾಂವಿಧಾನಿಕ ಹುದ್ದೆ ಹೊಂದಿದ ಕುಟುಂಬಗಳು, ಸಾಂಸ್ಥಿಕ ಭೂ ಮಾಲೀಕರ ಕುಟುಂಬಗಳು ಯೋಜನೆಗೆ ಅನರ್ಹರಾಗಿದ್ದಾರೆ. ರೈತರು ತಮಗೆ ಸಮೀಪದ ಬಾಪೂಜಿ ಸೇವಾ ಕೇಂದ್ರ, ನಾಡ ಕಚೇರಿ, ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗೆ ತೆರಳಿ ಅನುಬಂಧದಲ್ಲಿ ತಮ್ಮ ಹೆಸರು, ಆಧಾರ್‌ ಸಂಖ್ಯೆ, ಆಧಾರ್‌ ಜೋಡಣೆಯಾಗಿರುವ ಬ್ಯಾಂಕ್‌ ಖಾತೆ ವಿವರ, ಜಮೀನಿನ ವಿವರ ಮುಂತಾದ ವಿವರಗಳನ್ನು ನಮೂದಿಸಿ ಸ್ವಯಂ ಘೋಷಣೆಯನ್ನು ಸದರಿ ದಾಖಲೆಗಳ ನಕಲು ಪ್ರತಿಯೊಂದಿಗೆ ಜೂ. 25ರೊಳಗೆ ಸಲ್ಲಿಸಬೇಕಾಗಿದೆ ಎಂದು ಹೇಳಿದರು.

ರಜೆಯಿದ್ದರೂ ಕರ್ತವ್ಯ ನಿರ್ವಹಣೆ: ರೈತರ ಅನುಕೂಲಕ್ಕಾಗಿ ಜೂ.22 ಮತ್ತು 23ರಂದು ಸಾರ್ವಜನಿಕ ರಜೆಯಿದ್ದರೂ ಕೃಷಿ ಇಲಾಖೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳು ಕರ್ತವ್ಯ ನಿರ್ವಹಿಸುತ್ತವೆ. ಹೆಚ್ಚಿನ ಸಂಖ್ಯೆಯ ರೈತರು ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ತಾಲೂಕು ಪಂಚಯ್ತಿ ಇಒ ಬಾಬು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.