ಸಖೀ ಯೋಜನೆ ಸದುಪಯೋಗ ಆಗಲಿ: ಎಡಿಸಿ


Team Udayavani, Oct 10, 2020, 4:14 PM IST

rn-tdy-2

ರಾಮನಗರ: ಅತ್ಯಾಚಾರ, ದೌರ್ಜನ್ಯ, ಕೌಟುಂಬಿಕ ಹಿಂಸೆ, ವರದಕ್ಷಿಣೆ ಸಮಸ್ಯೆಗೆ ಒಳಗಾದ ಮಹಿಳೆಹಾಗೂ ಹೆಣ್ಣು ಮಕ್ಕಳಿಗೆ ಸಹಾಯ ಒದಗಿಸಲು ಸಖೀ ಯೋಜನೆಜಾರಿಯಲ್ಲಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಜನಸಾಮಾನ್ಯರಿಗೆ ಮಾಹಿತಿ ನೀಡಿಎಂದು ಅಪರ ಜಿಲ್ಲಾಧಿಕಾರಿ ಜವರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಸರ್ಕಾರಿ ಕಚೇರಿಗಳ ಸಂಕಿರ್ಣದಲ್ಲಿರುವ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ವೇಳೆ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪನೆಯಾಗಿರುವ ಸಖೀ (ಒನ್‌ ಸ್ಟಾಪ್‌ ಸೆಂಟರ್‌) ಕಾರ್ಯ ನಿರ್ವಹಣೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.

ಸೆಂಟರ್‌ನಲ್ಲಿ ಘಟಕಾಧಿಕಾರಿಗಳು, ಆಪ್ತ ಸಮಾ ಲೋಚಕರು,ಕಾನೂನು ಸಲಹೆಗಾರರು ಹಾಗೂ ಮಹಿಳಾಪೊಲೀಸರುಕಾರ್ಯ ನಿರ್ವಹಿಸುತ್ತಾರೆ. ಅತ್ಯಾಚಾರಕೊಳಗಾದ ಮಹಿಳೆ ಮತ್ತು ಹೆಣ್ಣು ಮಕ್ಕಳಿಗೆವೈದ್ಯಕೀಯ ಸೌಲಭ್ಯ,ಆಪ್ತ ಸಮಾ ಲೋಚನೆ, ಪುನರ್ವಸತಿ ಕಲ್ಪಿಸುವುದು,ಕಾನೂನು ನೆರವು ನೀಡುವುದು ಈ ಯೋಜನೆಯ ಉದ್ದೇಶ ವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ದೌರ್ಜನ್ಯಕೊಳಗಾದ ಮಹಿಳೆಯರು ಯಾವುದೇ ಆತಂಕಕ್ಕೆ ಒಳಗಾಗದೇ ಸಖೀ ಕೇಂದ್ರ ಸಂಪರ್ಕಿಸಿದರೆ, ಕೇಂದ್ರದ ಮೂಲಕವೇ ಸಂಬಂಧಿಸಿದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ಎಲ್ಲಾ ರೀತಿಯ ಸರ್ಕಾರದ ಸೌಲಭ್ಯಗಳನ್ನು ಒದಗಿಸಿ ಕೊಡಲಾಗುತ್ತದೆ ಎಂದು ಅಧಿಕಾರಿಗಳು ಸಭೆಯ ಗಮನ ಸೆಳೆದರು. ಸಖೀ ಕೇಂದ್ರದ ಸಹಾಯವಾಣಿ ಸಂಖ್ಯೆ 181 ಅಥವಾ ಕೇಂದ್ರದ ದೂರವಾಣಿ ಸಂಖ್ಯೆ 080 29500223 ಮೂಲಕ ಸಂಪರ್ಕಿಸಬಹುದು ಎಂದರು.

ಪೋಷಣ್‌ ಅಭಿಯಾನದ ಬಗ್ಗೆ: ಜಿಲ್ಲೆಯಲ್ಲಿ ಪೋಷಣ್‌ ಅಭಿಯಾನದ ಬಗ್ಗೆಯೂ ಎಡಿಸಿ ಜವರೇ ಗೌಡ ಮಾಹಿತಿ ಪಡೆದುಕೊಂಡರು. ಜನವರಿ 2020ರಿಂದ ಜಾರಿಯಲ್ಲಿದ್ದು, ಅಂಗನವಾಡಿ ಕೇಂದ್ರಗಳಲ್ಲಿದ್ದ 1,543 ಮಕ್ಕಳಿಗೆ ಸರಿಯಾದ ಸಮಯದಲ್ಲಿ ನಿಗದಿಪಡಿ ಸಿರುವ ಆಹಾರ ಪದಾರ್ಥಗಳು ತಲುಪುವಂತೆ ನಿಗಾವಹಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆಕೊಟ್ಟರು. ಯಾವುದೇ ಮಗು ಅಪೌಷ್ಟಿಕತೆಯಿಂದ ಬಳಲುತ್ತಿದ್ದರೆ, ಹೆಚ್ಚಿನ ಪೌಷ್ಟಿಕತೆ ಒದಗಿಸಲು ಆರೋಗ್ಯ ಇಲಾಖೆ ಗಮನಕ್ಕೆ ತರುವಂತೆ ತಿಳಿಸಿದರು.

ಸ್ಥಳಾವಕಾಶವಿರುವ ಅಂಗನವಾಡಿ ಕೇಂದ್ರಗಳಲ್ಲಿಪೌಷ್ಟಿಕ ಸಸ್ಯಗಳ ಕೈತೋಟ ನಿರ್ಮಾಣಕ್ಕೆ ಒತ್ತು ನೀಡಿ ಎಂದ ಅವರು, ತೋಟ ನಿರ್ಮಿಸಲು ನರೇಗಾಯೋಜನೆಯ ನೆರವು ಪಡೆದು. ತೋಟಗಾರಿಕೆ ಇಲಾಖೆಯಿಂದ ಗಿಡಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್‌, ಆರ್‌.ಸಿ.ಎಚ್‌ಅಧಿಕಾರಿ ಡಾ. ಪದ್ಮಾ, ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಮನ್‌,ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಗಾಯಿತ್ರಿ ದೇವಿ, ಪೋಷಣ್‌ ಅಭಿಯಾನದ ಜಿಲ್ಲಾಸಂಯೋಜಕ ಚೇತನ್‌ ಕುಮಾರ್‌, ಕಾರ್ಯಕ್ರಮ ಸಹಾಯಕ ಪ್ರವೀಣ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.