ಸ್ಥಳೀಯ ಅಧಿಕಾರಕ್ಕೆ ರಾಜಕೀಯ ಲೆಕ್ಕಾಚಾರ

ಕನಕಪುರ ನಗರಸಭೆ, ಮಾಗಡಿ ಪುರಸಭೆ ಅಧಿಕಾರಕ್ಕಾಗಿ ಲಾಭಿ!

Team Udayavani, Oct 13, 2020, 1:15 PM IST

ಸ್ಥಳೀಯ ಅಧಿಕಾರಕ್ಕೆ ರಾಜಕೀಯ ಲೆಕ್ಕಾಚಾರ

ರಾಮನಗರ: ಕಳೆದ ವಾರ ಜಿಲ್ಲೆಯ ಮೂರು ನಗರಸಭೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಹೊಸದಾಗಿ ಮೀಸಲಾತಿ ನಿಗದಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್‌ 19 ಸೋಂಕು ಕಾರಣ ರಾಜಕೀಯ ಚಟುವಟಿಕೆಗಳು ತಣ್ಣಗಿತ್ತು. ಗ್ರಾಮಪಂಚಾಯ್ತಿಗಳಚುನಾವಣೆಗೆಚುನಾವಣಾಆಯೋಗ ತಯಾರಿ ಆರಂಭಿಸಿದೊಡನೆ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಗರಿಗೆದರಿತ್ತು. ಇದೀಗ ನಗರ ಸಂಸ್ಥೆಗಳ ಅಧ್ಯಕ್ಷ, ಉಪಾದ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಘೋಷಣೆಯಾಗಿರುವುದರಿಂದ ನಗರ ಪ್ರದೇಶಗಳಲ್ಲೂ ರಾಜಕೀಯ ಚಟುವಟಿಕೆಗಳು ಆರಂಭವಾಗಿದೆ.

ಎಲ್ಲೆಲ್ಲಿ ಚುನಾವಣೆ?: ಜಿಲ್ಲೆಯ ಕನಕಪುರ ನಗರಸಭೆ ಮತ್ತು ಮಾಗಡಿ ಪುರಸಭೆಗಳಲ್ಲಿ 11 ತಿಂಗಳ ಹಿಂದೆಯೇ ಚುನಾವಣೆಗಳು ನಡೆದಿವೆ. ಆದರೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಯಾಗದ ಕಾರಣದಿಂದ ಪ್ರಜಾಪ್ರತಿ ನಿಧಿಗಳ ಅಧಿಕಾರಕೈಗೆ ಸಿಕ್ಕಿರಲಿಲ್ಲ. ಬಿಡದಿ ಪುರಸಭೆಯಲ್ಲಿ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ.

ರಾಮನಗರ ಮತ್ತು ಚನ್ನಪಟ್ಟಣ ನಗರಸಭೆಗಳಿಗೆ ಚುನಾವಣೆಯೇ ನಡೆ ಯದಕಾರಣಇಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ. ಸರ್ಕಾರದ ಆದೇಶದ ಪ್ರಕಾರ ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಸ್ಥಾನ ಪರಿ ಶಿಷ್ಠ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಕನಕಪುರ ನಗರಸಭೆ ಅಧ್ಯಕ್ಷ ಸ್ಥಾನ ಬಿಸಿಎ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನ ಪರಿಶಿಷ್ಠ ವರ್ಗಕ್ಕೆ ಮೀಸಲಾಗಿದೆ. ರಾಮನಗರ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನಪರಿಶಿಷ್ಟ ಜಾತಿಗೆ ಮೀಸಲುಗೊಳಿಸಿ ಆದೇಶ ಹೊರೆಡಿಸಿದ್ದಾರೆ.

2ನೇ ಅವಧಿಗೆ ಚುನಾವಣೆ ಯಾವಾಗ :

ರಾಮನಗರ: 2016ರಲ್ಲಿ ಗ್ರಾಮ ಪಂಚಾಯ್ತಿಯಾಗಿದ್ದಬಿಡದಿ ಸ್ಥಳೀಯ ಸಂಸ್ಥೆ ಪುರಸಭೆಯಾಗಿ ಬಡ್ತಿ ಪಡೆದುಕೊಂಡಿದೆ. ಅದೇ ವರ್ಷ ಬಿಡದಿ ಪುರಸಭೆ ಅಸ್ತಿತ್ವಕ್ಕೆ ಬಂದಿದೆ. ಮೊದಲ ಅವಧಿ ಪೂರ್ಣಗೊಂಡು 22 ತಿಂಗಳುಕಳೆದು ಹೋಗಿದೆ. ಎರಡನೇ ಅವಧಿಗೆ ಈ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.

ವಿಳಂಬ ಏಕೆ?: ಬಿಡದಿ ಪುರಸಭೆ ಎರಡನೇ  ಅವದಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಘೋಷಣೆಯಾಗಿ ಹೆಲವಾರು ತಿಂಗಳಾಗಿವೆ. ಪ್ರಥಮ ಅವಧಿಯಲ್ಲಿ ಅಧ್ಯಕ್ಷಸ್ಥಾನಪರಿಶಿಷ್ಟಜಾತಿಮಹಿಳೆಗೆಮೀಸಲಾಗಿತ್ತು. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನದಲ್ಲಿ ವೆಂಕಟೇಶಮ್ಮ ರಾಮಕೃಷ್ಣಯ್ಯ, ಉಪಾಧ್ಯಕ್ಷ ಸ್ಥಾನದಲ್ಲಿ ವೈಶಾಲಿ ಮತ್ತು ಲಕ್ಷ್ಮೀ ದೇವಿ ಅಧಿಕಾರ ಚಲಾಯಿಸಿದ್ದಾರೆ. ಮೊದಲ ಅವಧಿ ಮುಗಿದು 2018ರ ಡಿಸೆಂಬರ್‌ನಲ್ಲಿ ಮೊದಲ ಅವಧಿ ಮುಕ್ತಾಯವಾಗಿದೆ.

ಬಿಡದಿ ಸೇರಿದಂತೆ ರಾಜ್ಯದ ಇನ್ನು ಕೆಲವು ಪುರಸಭೆ, ನಗರಸಭೆಗಳಿಗೆ ಮೀಸಲಾತಿ ನಿಗದಿಪಡಿಸಿತು. ಆದರೆ ಈಮೀಸಲಾತಿಪ್ರಶ್ನಿಸಿ ರಾಜ್ಯದ ಬೇರೆಡೆ ನ್ಯಾಯಾಲಯದ ಮೆಟ್ಟಿಲೇರಿರಿಂ‌ದ್ದರಿಂದ ಬಿಡದಿ ಪುರಸಭೆಯ ಮೀಸಲಾತಿ ನೆನೆಗುದಿಗೆ ಬಿತ್ತು. 2019ರ ಡಿಸೆಂಬರ್‌ನಲ್ಲಿ ಸರ್ಕಾರ ಮೀಸಲು ಮರು ನಿಗದಿಯಾಗಿ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಬಿಸಿಎಂ(ಎ) ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ  ವರ್ಗಕ್ಕೆ ಮೀಸಲು ನಿಗಧಿಯಾಗಿದೆ. ಆದರೆ

ಇನ್ನು ಚುನಾವಣೆ ನಿಗದಿಯಾಗಿಲ್ಲ. ರಾಜ್ಯ ಸರ್ಕಾರ ಕೆಲವು ನಗರಸಭೆಗಳ 9ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಹೊರೆಡಿಸಿದೆ. ಚುನಾವಣಾ ಆಯೋಗಇನ್ನಷ್ಟೇಈ ಸಂಸ್ಥೆಗಳಿಗೆ ಚುನಾವಣೆ ದಿನ ನಿಗದಿ ಮಾಡಬೇಕಿದೆ. ಇದೇ ಸಂದರ್ಭ ದಲ್ಲಿ ಬಿಡದಿ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ಆಡಲಿತದಚುಕ್ಕಾಣಿ ಪುನಃ ಜನಪ್ರತಿನಿಧಿಗಳಿಗೆ ಕೈಗೆ ಬರಲಿದೆ ಎಂದು ನಾಗರಿಕರು ಕಾಯುತ್ತಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.