ಮೇಕೆದಾಟು ಯೋಜನೆಗೆ ಸಿಗುತ್ತಾ ಮುಕ್ತಿ?

5912 ಕೋಟಿ ರೂ. ವೆಚ್ಚದ ಯೋಜನೆ ನನಸಾಗುವುದೆಂದು?: ಈವರೆಗೆ ಜನಪ್ರತಿನಿಧಿಗಳ ಭರವಸೆಗಳೆಲ್ಲಾ ಹುಸಿ

Team Udayavani, Sep 14, 2020, 12:54 PM IST

rn-tdy-1

ರಾಮನಗರ: ಮೇಕೆದಾಟು ಯೋಜನೆ ಕುರಿತು ಈಗ ಮತ್ತೆ ಜಿಲ್ಲೆಯಲ್ಲಿ ಚರ್ಚೆಯಾಗುತ್ತಿದೆ. ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರು ಸೋಮವಾರ ಮೇಕೆದಾಟು ಸಮತೋಲನ ಜಲಾಶಯ (ಕುಡಿಯುವ ನೀರಿನ) ಯೋಜನೆ ಸ್ಥಳಕ್ಕೆ ಭೇಟಿ ನೀಡಲಿದ್ದು ಪರಿಶೀಲನೆ ನಡೆಸಲಿದ್ದಾರೆ.

2019ರ ಸೆಪ್ಟೆಂಬರ್‌ನಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್‌ ಇಲಾಖೆ ಹಿರಿಯ ಅಧಿಕಾರಿಗಳನ್ನು ಕರೆದುಕೊಂಡು ಮೇಕೆದಾಟು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದರು. 5912 ಕೋಟಿ ರೂ. ವೆಚ್ಚದ ಈ ಯೋಜನೆಯ ಉದ್ದೇಶಿತ ಜಲಾಶಯ ನಿರ್ಮಾಣದ ಸ್ಥಳಗುರುತು ಮಾಡಿಸಿದ್ದರು. ಆಗ ಸಿಎಂ ಆಗಿದ್ದ ಎಚ್‌. ಡಿ.ಕುಮಾರಸ್ವಾಮಿ ತಮ್ಮ ಅವಧಿಯಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿಕೆ ನೀಡಿದ್ದರು. ತದ ನಂತರ ಸರ್ಕಾರ ಪತನವಾದ ಮೇಲೆ ಮೇಕೆದಾಟು ಯೋಜನೆಯ ಬಿಸಿ ತಣ್ಣಗಾಗಿತ್ತು. ಇದೀಗ ಮತ್ತೆ ಮೇಕೆದಾಟು ಯೋಜನೆ ಗರಿಗೆದರಿದೆ.

ಎಲ್ಲಿ ನಿರ್ಮಾಣ?: ಜಿಲ್ಲೆಯ ಕನಕಪುರ ತಾಲೂಕಿನ ಒಂಟಿಗುಂಡ್ಲು ಎಂಬ ಸ್ಥಳದಲ್ಲಿ ಮಗ್ಗೂರು ಅರಣ್ಯ ವಲಯ ಮತ್ತು ಹನೂರು ಅರಣ್ಯವಲಯದ 2 ಬೆಟ್ಟಗಳ ನಡುವೆ ಮೇಕೆ ದಾಟು ಸಮತೋಲನ ಜಲಾಶಯ (ಕುಡಿಯುವ ನೀರಿನ) ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ಅರ್ಕಾವತಿ ಮತ್ತು ಕಾವೇರಿ ನದಿಗಳು ಸಂಗಮಿಸುವ ಸ್ಥಳದಿಂದ 4 ಕಿ.ಮೀ. ಅಂತರದಲ್ಲಿ ಈ ಜಲಾಶಯ ನಿರ್ಮಾಣವಾಗಲಿದೆ. ರಾಮನಗರ ಜಿಲ್ಲೆ, ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಸಲುವಾಗಿಯೇ ಈ ಯೋಜನೆ ಎಂದು ರಾಜ್ಯ ಸರ್ಕಾರ ಈಗಾಗಲೆ ಘೋಷಿಸಿದೆ. ಸುಮಾರು 66 ಟಿಎಂಸಿ ನೀರನ್ನು ಇಲ್ಲಿ ಶೇಖರಿಸಿಕೊಳ್ಳುವ ಸಾಮರ್ಥ್ಯ ಈ ಜಲಾಶಯಕ್ಕೆ ಇರಲಿದೆ. ಜತೆಗೆ 40 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನಾ ಘಟಕವನ್ನೂ ಸ್ಥಾಪಿಸುವ ಉದ್ದೇಶವಿದೆ.

ರಾಜಕೀಯಕ್ಕೆ ಬಳಕೆ: ರಾಜ್ಯ ರಾಜಕಾರಣದಲ್ಲಿ ಅತ್ಯಂತ ಪ್ರಭಾವಿಗಳು ರಾಮನಗರದಿಂದಲೇ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಜಿಲ್ಲೆಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಬಲ್ಲ ಮೇಕೆದಾಟು ಯೋಜನೆಗೆ ಜೆಡಿಎಸ್‌-ಕಾಂಗ್ರೆಸ್‌ ರಾಜಕೀಯಕ್ಕೂ ಬಳಸಿಕೊಂಡಿದೆ. ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಯೋಜನೆ ಶತಸಿದ್ಧ ಎಂದು ಎರಡೂ ಪಕ್ಷಗಳ ನಾಯಕರು ಮತಯಾಚನೆ ವೇಳೆ ಹೇಳಿಕೊಂಡಿದ್ದಾರೆ. ಇದೀಗ ಬಿಜೆಪಿ ಸರದಿ ಎಂದು ಜಿಲ್ಲೆಯ ಜನತೆ ಟೀಕಾ ಪ್ರಹಾರ ನಡೆಸಿದ್ದಾರೆ. ಈ ಯೋಜನೆ ಬಗ್ಗೆ ಯಾವ ಪಕ್ಷಕ್ಕೂ ಪ್ರಾಮಾಣಿಕ ಕಾಳಜಿ ಇಲ್ಲ ಎಂದು ಆರೋಪಿಸಿದ್ದಾರೆ.

ವಿಳಂಬಕ್ಕೆ ಕಾರಣ ಏನು? :  ಮೇಕೆದಾಟು ಸಮತೋಲನ ಜಲಾಶಯ (ಕುಡಿಯುವ ನೀರಿನ)ಕ್ಕೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಆದರೆ,ಕೇಂದ್ರದ ಪರಿಸರ ಇಲಾಖೆ, ಅರಣ್ಯ ಇಲಾಖೆ ಇನ್ನೂ ಅನುಮತಿ ನೀಡಬೇಕಾಗಿದೆ. ಮೇಕೆದಾಟುಯೋಜನೆಯಿಂದ 3,181 ಹೆಕ್ಟೇರ್‌ ವನ್ಯಜೀವಿ ಸಂರಕ್ಷಿತಅರಣ್ಯ ಸೇರಿ 5,051 ಹೆಕ್ಟೇರ್‌ ಅರಣ್ಯ ಪ್ರದೇಶ ಮುಳುಗಡೆಯಾಗುತ್ತದೆ. ಇದರಲ್ಲಿ ಶೇ.90 ಅರಣ್ಯ ಭೂಮಿ, ಉಳಿದ ಕಂದಾಯ ಭೂಮಿ ಸೇರಿದೆ. ಆನೆ, ಜಿಂಕೆ ಸೇರಿದಂತೆ ಇನ್ನಿತರ ವನ್ಯ ಸಂಕುಲ ನೆಲೆ ಕಳೆದುಕೊಳ್ಳಲಿವೆ. ಹೀಗಾಗಿ ಅರಣ್ಯ ಇಲಾಖೆ ಇನ್ನು ಅನುಮತಿ ನೀಡಿಲ್ಲ ಎಂದು ಹೇಳಲಾಗಿದೆ.

ಕುಡಿಯುವ ನೀರು, ವಿದ್ಯುತ್‌ ಉತ್ಪಾದನೆ :  ಮೇಕೆದಾಟು ಸಮತೋಲನ ಜಲಾಶಯದ ಅಣೆಕಟ್ಟೆ ಎತ್ತರ 441.20 ಮೀಟರ್‌, ಅಗಲ 674.5 ಮೀಟರ್‌. ನೀರು ಶೇಖರಣಾ ಸಾಮರ್ಥ್ಯ 66 ಟಿಎಂಸಿ ನೀರಿನ ಹೊರ ಹರಿವಿಗಾಗಿ 15×12 ಮೀಟರ್‌ ಎತ್ತರದಷ್ಟು 17 ಗೇಟ್‌ ಅಳವಡಿಕೆ ಮಾಡಲಾಗುತ್ತದೆ. ಕುಡಿಯುವ ನೀರಿನ ಯೋಜನೆ ಜತೆಗೆ 440 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸುವಉದ್ದೇಶವೂ ಇದೆ. ಯೋಜನೆಯಿಂದ ತಮಿಳುನಾಡಿಗೆ ವಾರ್ಷಿಕವಾಗಿ ಬಿಡಬೇಕಾದ ನೀರಿನ ಪ್ರಮಾಣಕ್ಕೆ ಧಕ್ಕೆಯಾಗುವುದಿಲ್ಲ ಎಂಬುದು ರಾಜ್ಯ ಸರ್ಕಾರದ ಸಮಜಾಯಿಷಿ. 2018ರಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸಲು 5912 ಕೋಟಿ ರೂ. ವೆಚ್ಚ ಅಂದಾಜಿಸಲಾಗಿತ್ತು. ಇಂಧನ ಇಲಾಖೆಯಿಂದ 2 ಸಾವಿರ ಕೋಟಿ ಹಾಗೂ ಜಲಸಂಪನ್ಮೂಲ ಇಲಾಖೆಯಿಂದ 3912 ಕೋಟಿ ವಿನಿಯೋಗಿಸಲು ನಿರ್ಧರಿಸಲಾಗಿದೆ.

ಮೇಕೆದಾಟು ಯೋಜನೆಗೆ ತಮಿಳುನಾಡು ತಗಾದೆ ಏಕೆ? :  ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಯ ಕುಡಿಯುವ ನೀರಿನ ಬವಣೆ ನೀಗಿಸುವ ಉದ್ದೇಶದ ಮೇಕೆದಾಟು ಸಮತೋಲನ ಜಲಾಶ ಯೋಜನೆಗೆ ತಮಿಳು ನಾಡು ನಿರಂತರ ವಿರೋಧ ವ್ಯಕ್ತಪಡಿಸುತ್ತಲೇ ಇದೆ. ಮೇಕೆದಾಟು ಯೋಜನೆ ಅಸ್ತಿತ್ವಕ್ಕೆ ಬಂದರೆ ಕರ್ನಾಟಕ ತನ್ನ ಪಾಲಿನ ನೀರನ್ನು ಕೊಡಲು ಸಾಧ್ಯವಿಲ್ಲ ಎಂಬ ವಾದ, ಜಲಾಶಯ  ನಿರ್ಮಾಣದಿಂದ ಅಪಾರ ಪ್ರಮಾಣದ ಕಾಡು ಮುಳುಗಡೆ ಯಾಗಲಿದೆ ಎಂಬ ವಾದ ಮಂಡಿಸಿದೆ. ಸುಪ್ರೀಂ ಕೋರ್ಟಿನ ಅನುಮತಿ ಇಲ್ಲದೆ, ಇಲ್ಲವೇ ಕಾವೇರಿ ನದಿ ಪಾತ್ರದ ರಾಜ್ಯಗಳ ಅನುಮತಿ ಇಲ್ಲದೆ ಜಲಾಶಯ ನಿರ್ಮಾಣ ಕೂಡದು ಎಂದು ತಮಿಳುನಾಡು ರಾಜ್ಯ ಸರ್ಕಾರ -ಕೇಂದ್ರ ಸರ್ಕಾಕ್ಕೆ 2019ರಅಕ್ಟೋಬರ್‌ನಲ್ಲಿ ಪತ್ರ ಬರೆದಿದೆ. ಅಲ್ಲದೇ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಗಳಲ್ಲೂ ತಮಿಳುನಾಡು ಸರ್ಕಾರ ತನ್ನ ವಿರೋಧ ವ್ಯಕ್ತಪಡಿಸುತ್ತಲೇ ಇದೆ. ಮೇಕೆದಾಟು ಯೋಜನೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ 2018ರಲ್ಲಿ ಸುಪ್ರೀಂ ತೀರ್ಪು ಮತ್ತು ಕಾವೇರಿ ವಾಟರ್‌ ಡಿಸ್ಪ್ಯೂಟ್ಸ್‌ ಟ್ರಿಬ್ಯುನಲ್‌ನ (ಸಿಡಬ್ಲ್ಯೂಡಿಟಿ) ಅಂತಿಮ ತೀರ್ಪಿನ ವಿರುದ್ಧವಾಗಿದೆ. ಕಾವೇರಿ ನದಿ ನೀರಿನ ಶೇಖರಣೆಗೆ ಕರ್ನಾಟಕದ ಬಳಿ ಈಗಾಗಲೇ ಸಾಕಷ್ಟು ಶೇಖರಣ ಸಾಮರ್ಥ್ಯವಿದೆ ಎಂಬುದಾಗಿ ಇವೆರೆಡು ತೀರ್ಪುಗಳಲ್ಲಿ ಉಲ್ಲೇಖವಾಗಿದೆ. ಹೀಗಾಗಿ ಹೊಸ ಜಲಾಶಯದ ಅಗತ್ಯವಿಲ್ಲ ಎಂದು ತಮಿಳುನಾಡು ವಿರೋಧ ವ್ಯಕ್ತಪಡಿಸಿದೆ.

 

-ಬಿ.ವಿ. ಸೂರ್ಯಪ್ರಕಾಶ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.