ಹೋರಾಟ ಇಲ್ಲದೆ ಮೇಕೆದಾಟು ಕಾರ್ಯಗತ ಆಗದು

Team Udayavani, Sep 20, 2021, 2:59 PM IST

mekedatu plan

ರಾಮನಗರ: ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಜಲಾಶಯ ನಿರ್ಮಾಣದ ವಿಚಾರದಲ್ಲಿ ಆಗೊಮ್ಮೆ, ಈಗೊಮ್ಮೆ ಕನ್ನಡ ಪರ, ರೈತ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದೆ, ಈ ಹೋರಾಟ ಜನಾಂದೋಲನ ಸ್ವರೂಪ ಪಡೆಯದ ಹೊರತು ಯೋಜನೆ ಸಾಕಾರವಾಗದು ಎಂಬ ಅಭಿಪ್ರಾಯಗಳು ಜಿಲ್ಲೆಯ ಸಾಮಾನ್ಯ ಜನರಲ್ಲಿ ವ್ಯಕ್ತವಾಗಿದೆ.

ರಾಜಕಾರಣಿಗಳಲ್ಲಿ ಐಕ್ಯತೆ, ಇಚ್ಛಾಶಕ್ತಿ ಕೊರತೆ!: ರಾಮನಗರ, ಬೆಂಗಳೂರು ನಗರ, ಕೋಲಾರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ನೀಗಿಸಲು ಜಿಲ್ಲೆಯ ಕನಕಪುರ ತಾಲೂಕಿನ ಮೂಲಕ ಹರಿಯುವ ಕಾವೇರಿ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಿಸಬೇಕು ಎಂಬುದು ದಶಕಗಳ ಕೂಗು. ಅಧಿಕಾರಕ್ಕೆ ಬಂದ ಎಲ್ಲಾ ಸರ್ಕಾರಗಳು ಈ ಬಗ್ಗೆ ಭರವಸೆ ನೀಡಿವೆ ಹೊರತು ಅನುಷ್ಠಾನಕ್ಕಾಗಿ ಪ್ರಾಮಾಣಿಕವಾಗಿ ಪ್ರಯತ್ನ ಪಟ್ಟಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿದೆ. ರಾಜ್ಯದ ಜನನಾಯಕರಲ್ಲಿ ಐಕ್ಯತೆಯ ಕೊರತೆ ಇದೆ. ರಾಜಕಾರಣ ಬದಿಗೊತ್ತಿ ಯೋಜನೆ ಸಾಕಾರಕ್ಕೆ ಇವರಲ್ಲಿ ಇಚ್ಚಾಶಕ್ತಿಯ ಕೊರತೆ ಇದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿದೆ.

ಜನಾಂದೋಲನದ ಅಗತ್ಯ..!: ಯೋಜನೆ ಅನುಷ್ಠಾ ನಕ್ಕೆ ಸದ್ಯ ಆಗೊಮ್ಮೆ, ಈಗೊಮ್ಮೆ ನಡೆಯುತ್ತಿರುವ ಹೋರಾಟಗಳು ಜನಾಂದೋಲನ ಸ್ವರೂಪ ಪಡೆಯ ಬೇಕು. ರಾಜಕರಣಿಗಳನ್ನೇ ನೆಚ್ಚಿ ಕುಳಿತರೆ ಯೋಜನೆ ಸಾಕಾರವಾಗದು ಎಂಬ ಅಭಿಪ್ರಾಯಗಳು ಜಿಲ್ಲೆಯಲ್ಲಿ ಮೂಡ ತೊಡಗಿದೆ. ಚುನಾಯಿತ ಪ್ರತಿನಿಧಿಗಳ ಮೇಲೆ, ಸರ್ಕಾರದ ಮೇಲೆ ಒತ್ತಡ ನಿರಂತರವಾಗಿ ಹೇರಲು ಜನಾಂದೋಲನದ ಅಗತ್ಯವಿದೆ. ಜನಾಂದೋಲನದ ಬಿಸಿ ಕಾವೇರಿ ಕೊಳ್ಳದ ಎಲ್ಲಾ ರಾಜ್ಯಗಳ ಜನತೆಗೂ ಅರ್ಥವಾಗಬೇಕು ಆ ಮೂಲಕ ಎಲ್ಲರ ಸಹಕಾರದಲ್ಲಿ ಡ್ಯಾಂ ನಿರ್ಮಾಣವಾಗಬೇಕು ಎಂಬುದು ಈ ಭಾಗದ ಜನರ ಆಶಯ.

ಬೆಂಗಳೂರು ನಾಗರಿಕರಿಗೆ ನೀರು ಬೇಕು, ಚಳವಳಿ ಬೇಡವೆ?: ಬೆಂಗಳೂರು ನಗರ ಎದುರಿಸುತ್ತಿರುವ ಕುಡಿಯುವ ನೀರಿನ ಕೊರತೆ ನೀಗಿಸಲು ಮೇಕೆದಾಟು ಡ್ಯಾಂ ನಿರ್ಮಾಣ ತೀರಾ ಅಗತ್ಯ. ಬೆಂಗಳೂರು ನಗರ ದಲ್ಲಿ ವಾಸಿಸುವ ಎಲ್ಲರಿಗೂ ಈ ಯೋಜನೆಯ ಲಾಭ ದೊರೆಯುತ್ತದೆ. ಆದರೆ ಯೋಜನೆಯ ಅನುಷ್ಠಾನ ವಿಳಂಭಕ್ಕೆ ರಾಜಧಾನಿ ಜನರಲ್ಲೇಕೆ ಕಿಚ್ಚು ಹೊತ್ತಿ ಕೊಂಡಿಲ್ಲ ಎಂಬುದು ಈ ಭಾಗದ ಜನರ ಪ್ರಶ್ನೆ. ವಿಶೇಷವಾಗಿ ಐಟಿ, ಬಿಟಿ ಕಂಪನಿಗಳ ನೌಕರರ ಮೇಲೆ ಅಪಾರ ಸಿಟ್ಟು ಜನಸಾಮಾನ್ಯರಲ್ಲಿದೆ. ಈ ನೆಲದಲ್ಲಿ ಉದ್ಯೋಗ ಸಂಪಾದಿಸಿ, ಜೀವನ ಕಟ್ಟಿಕೊಳ್ಳುವ ಈ ಮಂದಿ ಇಲ್ಲಿನ ಸಮಸ್ಯೆಗಳಿಗೂ ಸ್ಪಂದಿಸಬೇಕಲ್ಲವೇ ಎಂಬು ಈ ಜನರ ಪ್ರಶ್ನೆ!

ಎಲ್ಲಾ ಭಾಷಿಕರು ಕೈ ಜೋಡಿಸಲಿ: ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ದಶಕಗಳ ಕಾಲ ರಾಜ್ಯವನ್ನು ಗೋಳಾಡಿಸಿದ ತಮಿಳುನಾಡು ಈಗ ಮೇಕೆ ದಾಟು ಯೋಜನೆಯ ವಿಚಾರದಲ್ಲೂ ವಿನಾಕಾರಣ ಕ್ಯಾತೆ ತೆಗೆಯುತ್ತಿದೆ. ತನ್ನ ಪಾಲಿನ ನೀರನ್ನು ದೊರಕಿಸಿಕೊಡಲು ಬದ್ಧವಾಗಿರುವುದಾಗಿ ಕರ್ನಾಟಕ ಸರ್ಕಾರ ಪದೇ ಪದೇ ಹೇಳಿದೆ. ಆದರೂ ತಮಿಳುನಾಡು ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ. ಬೆಂಗಳೂರು ನಗರದಲ್ಲಿ ವಾಸಿಸುವ ತಮಿಳುನಾಡು ಮೂಲದ ಕುಟುಂಬಗಳು ಕುಡಿಯುವ ನೀರಿನ ಕೊರತೆ ಬಗ್ಗೆ ದನಿ ಎತ್ತ ಬೇಕಾಗಿದೆ.

ಎಲ್ಲ ನಾಗರಿಕರು ತಮ್ಮ ಜಾತಿ, ಮತ, ಭಾಷೆ ತೊರೆದು ಯೋಜನೆ ಪರ ನಿಂತು ಹೋರಾಟಕ್ಕೆ ಬಲ ತುಂಬಬೇಕು ಎಂಬುದು ಜನಸಾಮಾನ್ಯರ ವಾದ. ಪ್ರತಿಕ್ರಿಯೆ: ಸಂಪತ್‌, ರೈತ ಮುಖಂಡರು ಹಾಗೂ ಅಧ್ಯಕ್ಷರು, ಮೇಕೆದಾಟು ಹೋರಾಟ ಸಮಿತಿ ಮೇಕೆ ದಾಟು ಯೋಜನೆಗೆ ತಮಿಳುನಾಡು ಕ್ಯಾತೆ ತೆಗೆಯುತ್ತಿದೆ. ಇದನ್ನೇ ನೆಪವಾಗಿಟ್ಟು ಕೊಂಡು ರಾಜ್ಯದ ಜನನಾಯಕರು ಯೋಜನೆ ಕೈಗೆತ್ತಿಕೊಳ್ಳಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇದೇ 23ರಂದು ಮೇಕೆದಾಟಿನಿಂದ ರೈತರು, ಜನಸಾಮಾ ನ್ಯರು ಪಾದಯಾತ್ರೆ ಮೂಲಕ ವಿಧಾನಸೌಧದ ಬಳಿಗೆ ತಲುಪಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಲಾಗುವುದು. ಈ ಹೋರಾಟದಲ್ಲಿ ಬೆಂಗಳೂರು ನಗರ ನಿವಾಸಿಗಳು ಸಹ ಭಾಗವಹಿಸಬೇಕು.

ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.