ಮಾನಸಿಕ ರೋಗಿಗಳ ಬಗ್ಗೆ ಕಾಳಜಿ ಇರಲಿ: ವೆಂಕಟಪ್ಪ


Team Udayavani, Oct 11, 2020, 1:43 PM IST

rn-tdy-1

ರಾಮನಗರ: ಮಾನಸಿಕ ರೋಗಿಗಳಿಗೂ ಕಾನೂನು ಇದೆ. ಹೀಗಾಗಿ ಜನಸಾಮಾನ್ಯರಲ್ಲಿ ಈ ವಿಚಾರದ ಬಗ್ಗೆ ತಿಳಿವಳಿಕೆ ಮೂಡಿಸಿ ಕಾನೂನುಅವಶ್ಯಕತೆ ಇದ್ದರೆ ಪ್ರಾಧಿಕಾರದ ಗಮನಕ್ಕೆ ತರಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಬಿ.ವೆಂಕಟಪ್ಪ ತಿಳಿಸಿದರು.

ಜಿಲ್ಲೆಯ ಚನ್ನಪಟ್ಟಣದಲ್ಲಿರುವ ಪೊಲೀಸ್‌ ತರಬೇತಿ ಶಾಲೆಯಲ್ಲಿ “ಸದೃಢ ಮಾಸಿಕ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಿ’ ಎಂಬ ಘೋಷಣೆಯೊಡನೆ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಮಾನಸಿಕ ಆರೋಗ್ಯ ದಿನ ಉದ್ಘಾಟಿಸಿ ಮಾತನಾಡಿದರು. ಮಾನಸಿಕ ರೋಗಿಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡುವುದರ ಮೂಲಕ ಅಂತಹ ರೋಗಿಗಳಿಗೂ ನ್ಯಾಯ ಒದಗಿಸಬೇಕು ಎಂದರು.

ಆಪ್ತ ಸಮಾಲೋಚನೆ:ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಮಂಜುನಾಥ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಮಾನಸಿಕ ಆರೋಗ್ಯ ವಿಭಾಗದಿಂದ ಆಯೋಜಿಸುತ್ತಿರುವ ಶಿಬಿರಗಳ ಬಗ್ಗೆ ಮಾಹಿತಿ ನೀಡಿದರು. ಮಾನಸಿಕವಾಗಿ ಕುಗ್ಗಿರುವ ವ್ಯಕ್ತಿಗಳಿಗೆ ಆಪ್ತ ಸಮಾಲೋಚನೆ ನಡೆಸುತ್ತಿರುವುದಾಗಿ, ಅಗತ್ಯವಿದ್ದವರಿಗೆ ಚಿಕಿತ್ಸೆ ನೀಡುತ್ತಿರುವು ದಾಗಿ ವಿವರಿಸಿದರು. ಇದೇ ವೇಳೆ ಮಾನಸಿಕ ರೋಗಿಗಳಿಗೆ ಲಭ್ಯವಿರುವ ಆರೋಗ್ಯ ಸವಲತ್ತಿನ ಬಗ್ಗೆ ಕರಪತ್ರ ಬಿಡುಗಡೆ ಮಾಡಿದರು.

ಅಧ್ಯಕ್ಷತೆ  ವಹಿಸಿದ್ದ ಪೊಲೀಸ್‌ ತರಬೇತಿ ಶಾಲೆ ಪ್ರಾಂಶುಪಾಲ ವಿ.ಶೈಲೇಂದ್ರ, ಭೌತಿಕ ಆರೋಗ್ಯ ಸಮಸ್ಯೆ ಗಳಿಗೆ ಹೆಚ್ಚು ಒತ್ತು ಕೊಡುತ್ತಿದ್ದೇವೆ. ಮಾನಸಿಕ ಸಮಸ್ಯೆಗಳ ಬಗ್ಗೆಯೂ ತಿಳಿವಳಿಕೆ ಮೂಡಿಸಿಕೊಂಡು ಆರೋಗ್ಯಇಲಾಖೆಕಾರ್ಯಕ್ರಮದ ಅಧಿಕಾರಿ, ಸಿಬ್ಬಂದಿಯೊಂದಿಗೆ ಮುಕ್ತವಾಗಿ ವಿನಿಮಯ ಮಾಡಿಕೊಂಡರೆ ಉತ್ತಮ ಜೀವನ ನಡೆಸಲು ಸಾಧ್ಯವಿದೆ ಎಂದರು.

ಮನೋರೋಗ ತಜ್ಞ ಡಾ.ಆದರ್ಶ ಉಪನ್ಯಾಸ ನೀಡಿ, ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣ ಮತ್ತು ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದರು. ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವರನ್ನು ಪತ್ತೆ ಹಚ್ಚುವುದುಹೇಗೆ,ಪೂರ್ಣಚಿಕಿತ್ಸೆಮಹತ್ವ,ಯೋಗ, ಧ್ಯಾನಗಳಿಂದಾಗುವ ಲಾಭ, ಇತ್ಯಾದಿ ವಿಷಯಗಳ ಬಗ್ಗೆ ಬೆಳಕು ಚೆಲ್ಲಿದರು.

ಆರ್‌ಸಿಎಚ್‌ ಅಧಿಕಾರಿ ಡಾ.ಪದ್ಮಾ, ಡಿಎಸ್‌ಒಡಾ.ಕಿರಣ್‌ ಶಂಕರ್‌,ಡಿಟಿಒಡಾ.ಕುಮಾರ,ಡಿವೈಎಸ್ಪಿಗಳಾದ ಗುರುಪ್ರಸಾದ್‌, ಶ್ರೀನಿವಾಸ್‌,ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್‌.ಗಂಗಾಧರ್‌, ಪ್ರಮುಖರಾದ ಪದ್ಮರೇಖಾ, ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್‌ ತರಬೇತಿ ಶಾಲೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.