ಸೋಂಕು ಮುಕ್ತ ಪರೀಕ್ಷೆಗೆ ಅಗತ್ಯ ಕ್ರಮ
Team Udayavani, Jun 25, 2020, 6:35 AM IST
ಕನಕಪುರ: ವಿದ್ಯಾರ್ಥಿಗಳು ಮುಕ್ತವಾಗಿ ಪರೀಕ್ಷೆ ಎದುರಿಸಲು ಸೋಂಕು ನಿಯಂತ್ರಣದ ಎಲ್ಲ ಮುಂಜಾಗ್ರತೆ ಕ್ರಮ ತೆಗೆದುಕೊಂಡಿದೆ ಎಂದು ಕೋಡಿಹಳ್ಳಿ ಅಭಿವೃದ್ಧಿ ಅಧಿಕಾರಿ ಎಸ್.ಎಂ.ಕೃಷ್ಣಮೂರ್ತಿ ತಿಳಿಸಿದರು. ತಾಲೂಕಿನ ಕೋಡಿಹಳ್ಳಿ ಗ್ರಾಪಂನಲ್ಲಿ ಪರೀಕ್ಷಾ ಮೇಲ್ವಿಚಾರಕ ಶಿಕ್ಷಕರಿಗೆ ಥರ್ಮಲ್ ಸ್ಕ್ರೀನಿಂಗ್ ಸಾಧನ ಮತ್ತು ಸ್ಯಾನಿಟೈಸರ್ ಹಸ್ತಾಂತರಿಸಿ ಮಾತನಾಡಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕೋಠಡಿಗಳಲ್ಲಿ ಕೋವಿಡ್ 19 ನಿಯಂತ್ರಣದ ಮುಂಜಾಗ್ರತೆ ಕ್ರಮಕೈಗೊಳ್ಳಲು ಗ್ರಾಪಂಗೆ ಶಿಕ್ಷಣ ಇಲಾಖೆಯಿಂದ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಪರೀಕ್ಷೆ ಕೋಠಡಿಗಳಿಗೆ ಎಲ್ಲ ಸುರಕ್ಷತೆ ಕ್ರಮ ಕೈಗೊಳ್ಳಲಾಗಿದ್ದು, ಹೈಪೋಕ್ಲೋರೈಡ್ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಕೊಠಡಿಗಳ ಸುತ್ತಲು ಸ್ವತ್ಛತೆಗೆ ಆದ್ಯತೆ ನೀಡಲಾಗಿದೆ. ಕೋಡಿ ಹಳ್ಳಿ ಹೋಬಳಿಯಲ್ಲಿ ಸುಮಾರು 323 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಪರೀಕ್ಷೆ ಕೋಠಡಿಗೆ ಬರುವ ಮುನ್ನ ಜ್ವರ ಪರೀಕ್ಷಿಸಿ, ಸ್ಯಾನಿಟೈಸರ್ ವಿತರಿಸಬೇಕು.
ಹೀಗಾಗಿ ಪಂಚಾಯಿತಿಯಿಂದ ಥರ್ಮಲ್ ಸ್ಕ್ಯಾನರ್ ಮತ್ತು ಸ್ಯಾನಿಟೈಸರ್ ಹಸ್ತಾಂತರಿಸಲಾಗಿದೆ. ಪರೀಕ್ಷೆ ಕೇಂದ್ರದ ಮೇಲ್ವಿಚಾರಕರು, ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳವಂತೆ ಎಚ್ಚರಿಕೆ ವಹಿಸಿ, ಮುಕ್ತವಾಗಿ ಪರೀಕ್ಷೆ ಎದುರಿಸಲು ಸಲಹೆ ಸೂಚನೆ ನೀಡಿಬೇಕು ಎಂದರು. ಕೋಳಗೊಂಡನಹಳ್ಳಿ ಶಾಲೆ ಮುಖ್ಯ ಶಿಕ್ಷಕ ಯೊಗೀಶ್, ಶಾರದಾ ಶಾಲೆ ಪ್ರಭಾಕರ್, ಸಹ ಶಿಕ್ಷಕ ಪ್ರಸನ್ನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ