ಸೋಲಿನಿಂದ ಜೀವನ ಪಾಠ: ರಾಕೇಶ್‌

Team Udayavani, Mar 26, 2021, 1:02 PM IST

ಸೋಲಿನಿಂದ ಜೀವನ ಪಾಠ: ರಾಕೇಶ್‌

ಚನ್ನಪಟ್ಟಣ: ಗೆಲುವು ಪದಕವನ್ನು ತಂದು ಕೊಟ್ಟರೆ, ಸೋಲು ಎಂದೂ ಮರೆಯಲಾಗದಪಾಠವನ್ನು ಕಲಿಸುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್‌ಕುಮಾರ್‌ ಹೇಳಿದರು.

ಪಟ್ಟಣದ ಡಿಎಆರ್‌ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಪೊಲೀಸ್ ‌ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.ಕ್ರೀಡೆಯಲ್ಲಿ ಗೆಲುವಿನ ಬೆನ್ನೇರಿ ಹೋಗುವುದುಪ್ರತಿಯೊಬ್ಬ ಕ್ರೀಡಾಪಟುವಿನ ಸಹಜ ಗುಣ,ಗೆದ್ದವರು ಬೀಗದೆ, ಸೋತವರು ಕುಗ್ಗದೆ ಸೋಲುಗೆಲುವನ್ನು ಸಮನಾಗಿ ಸ್ವೀಕರಿಸಿದಾಗ ಮಾತ್ರ ನಿಜವಾದ ಕ್ರೀಡಾಪಟುವಾಗಲು ಸಾಧ್ಯ ಎಂದರು.

ಪೊಲೀಸ್‌ ಸಿಬ್ಬಂದಿಗಳು ಇತರ ನೌಕರರಿಗಿಂತ ಹೆಚ್ಚಿನ ಸಮಯ ಕೆಲಸ ಮಾಡುವುದರಿಂದ ಸಹಜವಾಗಿ ಮಾನಸಿಕ ಮತ್ತು ದೈಹಿಕ ಒತ್ತಡಗಳಿಗೆ ಸಿಲುಕುತ್ತಾರೆ. ಈ ಒತ್ತಡಗಳನಡುವೆಯೇ ಕೆಲಸ ನಿರ್ವಹಿಸಲೇಬೇಕಾದಅನಿವಾರ್ಯತೆ ಅವರದ್ದಾಗಿದ್ದು, ಕ್ರೀಡಾಕೂಟಗಳು ತಾತ್ಕಾಲಿಕವಾಗಿ ಅವರ ಒತ್ತಡ ಕಡಿಮೆಮಾಡಲು ಸಹಕಾರಿಯಾಗುತ್ತವೆ ಎಂದರು.

ಕರ್ತವ್ಯದ ಜತೆಗೆ ಪೊಲೀಸರು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳ ಬೇಕಿದ್ದು, ನಿಯಮಿತ ವ್ಯಾಯಾಮ ಮತ್ತು ಸಮತೋಲನ ಆಹಾರ ಸೇವನೆ ಬಹುಮುಖ್ಯವಾಗಿದೆ, ಪೊಲೀಸರು ಆರೋಗ್ಯವಾಗಿದ್ದಲ್ಲಿ ‌ಮಾತ್ರ ಸಮಾಜದ ಆರೋಗ್ಯ ಕಾಪಾಡಲು ಸಾಧ್ಯ ಎಂದರು.

ದಿನದ 24 ತಾಸುಗಳು ಕೂಡ ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ಪಾಲನೆಯಲ್ಲಿತೊಡಗುವ ಪೊಲೀಸರಿಗೆ, ಹಬ್ಬಹರಿದಿನಗಳಿರುವುದಿಲ್ಲ, ಕುಟುಂಬದವರ ಜತೆ ಬೆರೆಯುವಭಾಗ್ಯವು ಇರುವುದಿಲ್ಲ, ತಮ್ಮ ಕುಟುಂಬದ ರಕ್ಷಣೆಯನ್ನು ಮರೆತು, ಸಮಾಜದ ಆಸ್ತಿಪಾಸ್ತಿ ಪ್ರಾಣಗಳನ್ನು ಕಾಪಾಡುವ ಪೊಲೀಸರನ್ನು ಎಲ್ಲರೂ ಸ್ಮರಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಗಿರೀಶ್‌ ಮಾತನಾಡಿ, ಪೊಲೀಸರಿಗಾಗಿಯೇಆಯೋಜನೆ ಮಾಡುವ ಇಂತಹ ಕ್ರೀಡಾಕೂಟ ಗಳ ಸದುಪಯೋಗವನ್ನು ಎಲ್ಲರೂ ಪಡೆದು ಕೊಳ್ಳಬೇ ‌ಕು ಎಂದು ತಿಳಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಪೊಲೀಸ್‌ ಉಪವಿ ಭಾಗಾಧಿಕಾರಿಗಳಾದ ಚನ್ನಪಟ‌ಣದ ಕೆ.ಎನ್‌. ರಮೇಶ್‌, ಮಾಗಡಿ ಓಂಪ್ರಕಾಶ್‌, ರಾಮನಗರದ ಮೋಹನ್‌ಕುಮಾರ್‌, ಜಿಲ್ಲಾ ಶಸ್ತ್ರಸ್ತ್ರ ಮೀಸಲು ಪಡೆಯ ಮಹೇಶ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.