ಗುಂಡಿ ಬಿದ್ದ ರಸ್ತೆಯಲ್ಲಿ ಹೆಂಗಪ್ಪ ಓಡಾಡೋದು?

Team Udayavani, Oct 18, 2019, 4:45 PM IST

rn-tdy-1

ಕುದೂರು: ಮಾಗಡಿ ತಾಲೂಕಿನ ವೀರೇಗೌಡನದೊಡ್ಡಿ ಗ್ರಾಪಂ ವ್ಯಾಪ್ತಿ ಮತ್ತ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು ಜನತೆ ಸಂಕಷ್ಟ ಎದುರಿಸುವಂತಾಗಿದೆ. ಇಷ್ಟಾದರೂ ಯಾವ ಅಧಿಕಾರಿಗಳು, ಜನಪ್ರತಿನಿಧಿಗಳೂ ಕಣ್ಣೆತ್ತಿಯೂ ನೋಡಿಲ್ಲ.

ವೀರೇಗೌಡನದೊಡ್ಡಿ ಗ್ರಾಮದಿಂದ ಮಂಚನಬೆಲೆ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆ ಸಮೀಪ ಬಲಕ್ಕೆ ತೆರಳಿದರೆ ಮತ್ತ ಗ್ರಾಮ ಸಿಗುತ್ತದೆ. ಈ ರಸ್ತೆಯ ಡಾಂಬರು ಸಂಪೂರ್ಣ ಕಿತ್ತು ಹೋಗಿದ್ದು ಗುಂಡಿಗಳು ಬಿದ್ದಿವೆ. ಬಿಎಂಟಿಸಿ ಬಸ್‌ ಕೂಡ ಗ್ರಾಮಕ್ಕೆ ಬರುತ್ತಿಲ್ಲ. ಪ್ರತಿದಿನ ಈ ಮಾರ್ಗವಾಗಿ ಸಂಚರಿಸುವ ನೂರಾರು ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಿತ್ಯ ನರಕಯಾತನೆಯಾಗಿದೆ.

ಹಾಳಾದ ರಸ್ತೆಯಲ್ಲಿ ವಿಧಿಯಿಲ್ಲದೇ ಸಂಚರಿಸಲು ಹೋಗಿ ಪ್ರತಿನಿತ್ಯ ಅಪಘಾತ ಸಂಭವಿಸುತ್ತಲೇ ಇವೆ. ಮತ್ತ ಗ್ರಾಮದ ಜನ ಈ ಮಾರ್ಗವಾಗಿ ಸಂಚರಿಸಿ ತಲುಪಬೇಕು. ಇಲ್ಲಿನ ಜನತೆ ಉನ್ನತ ಶಿಕ್ಷಣ, ವೈದ್ಯಕೀಯ, ಮಾರುಕಟ್ಟೆ ಸೌಲಭ್ಯ ಬೇಕೆಂದರೆ ಮಾಗಡಿಯನ್ನೇ ಅವಲಂಬಿಸಿದ್ದಾರೆ. ಮಾಗಡಿ-ಬೆಂಗಳೂರು, ರಾಮನಗರಕ್ಕೆ ತೆರಳಬೇಕಾದರೆ 2.ಕಿ.ಮೀ. ನಡೆದುಕೊಂಡು ಬರಬೇಕು. ರಾತ್ರಿ ವೇಳೆಯಲ್ಲಂತೂ ಸ್ವಂತ ವಾಹನ ಇಲ್ಲದಿದ್ದರೆ ಗ್ರಾಮಕ್ಕೆ ಸೇರಲು ಆಗುವುದೇ ಇಲ್ಲ. ಕಿತ್ತು ಹೋಗಿರುವ ರಸ್ತೆಯಲ್ಲಿ ರಾತ್ರಿ ಸಂಚಾರ ಅಪಾಯಕಾರಿಯಾಗಿದ್ದು ಆನೆ, ಚಿರತೆ ,ಕರಡಿ ಸಂಚರಿಸುವ ನಿರ್ಜನ ಪ್ರದೇಶವಾಗಿದೆ. ನಿತ್ಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಮತ್ತ ಗ್ರಾಮದಲ್ಲಿ ಸಾವಿರಕ್ಕೂ ಹೆಚ್ಚು ಜನ ವಾಸವಾಗಿದ್ದು 200 ಮನೆಯಿರುವ ಗ್ರಾಮದಲ್ಲಿ 7 ನೇ ತರಗತಿವರೆಗೂ ಶಾಲೆ ಇದೆ. 8ನೇ ತರಗತಿ ಮತ್ತು ಕಾಲೇಜಿಗೆ ತೆರಳಲು ವೀರೇಗೌಡನದೊಡ್ಡಿ ಅಥವಾ ಮಾಗಡಿ , ರಾಮನಗರಕ್ಕೆ ತೆರಳಬೇಕು, ಆಟೋಗಳೂ ಈ ರಸ್ತೆಯಲ್ಲಿ ಸಂಚರಿಸಲಾಗದ ಪರಿಸ್ಥಿತಿಯಿದೆ. ಆಕಸ್ಮಾತ್‌ ಬಂದರೂ ಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ಸಂಚರಿಸಲು ವಾಹನ ಚಾಲಕರಂತೂ ಸಂಕಟ ಅನುಭವಿಸಬೇಕು.

ರಸ್ತೆಗಳಲ್ಲಿ ಮಾರು ದೂರಕ್ಕೆ ಮೂವತ್ತು ಗುಂಡಿಗಳನ್ನು ಹೊರಳಿಸಿ ಮುಂದಕ್ಕೆ ಸಾಗ ಬೇಕಾದರೆ ಸಾಕು ಸಾಕೆನಿಸುತ್ತದೆ. ಈ ಸಾಹಸ ಮಾಡುವ ಬದಲು ನಡೆದೇ ಹೋಗುವ ಮನಸ್ಸಾಗುತ್ತದೆ. ಇನ್ನೂ ರೋಗಿಗಳ ಪಾಡಂತೂ ಹೇಳತೀರದು. ರಸ್ತೆಯಲ್ಲಿ ಆಮೆ ನಡಿಗೆಯಲ್ಲಿ ಸಂಚರಿಸಿ ಆಸ್ಪತ್ರೆ ತಲುಪುವಷ್ಟರಲ್ಲಿ ಪ್ರಾಣವೇ ಹೋಗುತ್ತದೆ.

ಕಾಡಿನ ಅಂಚಿನಲ್ಲಿರುವ ಗ್ರಾಮಸ್ಥರು ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಮಾಗಡಿ ಅಥವಾ ರಾಮನಗರಕ್ಕೆ ಹೋಗಬೇಕಾಗಿರುವುದರಿಂದ ರಸ್ತೆ ಸಂಪರ್ಕ ಸರಿ ಇಲ್ಲದೆ ತಾವು ಬೆಳೆದ ಬೆಳೆಗಳನ್ನು ಹೆಗಲ ಮೇಲೆ ಹೊತ್ತು ಕೊಂಡು ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಮತ್ತ ಗ್ರಾಮದ ರಸ್ತೆ ಡಾಂಬರೀಕರಣಗೊಂಡು ಬಹಳ ವರ್ಷಗಳೇ ಕಳೆಯಿತು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹೇಳಿ ಸಾಕಾಗಿ ಹೋಗಿದೆ. ಈ ಭಾಗದ ಸಾಮಾನ್ಯ ಜನತೆ ಪ್ರತಿ ನಿತ್ಯ ನರಳುವಂತಾಗಿದೆ.

-ಕೆ.ಎಸ್..ಮಂಜುನಾಥ್‌

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.