ಕಲಾವಿದ ಮಲ್ಲೇಶಯ್ಯನಿಗೆ ರಾಜ್ಯೋತ್ಸವ ಪ್ರಶಸ್ತಿ

Team Udayavani, Nov 1, 2021, 3:51 PM IST

ಕಲಾವಿದ ಮಲ್ಲೇಶಯ್ಯನಿಗೆ ರಾಜ್ಯೋತ್ಸವ ಪ್ರಶಸ್ತಿ

ಮಾಗಡಿ: ಮಾಗಡಿಯ ರಂಗಭೂಮಿ ಕಲಾವಿದ ಎನ್‌. ಮಲ್ಲೇಶಯ್ಯ ಅವರಿಗೆ 2021 ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಗರಿ ಸಿಕ್ಕಿರುವುದು ಹೆಮ್ಮೆಯ ವಿಷಯ. ಜುಟ್ಟನಹಳ್ಳಿ ಎನ್‌.ಮಲ್ಲೇಶಯ್ಯ ಇವರು ರಂಗಭೂಮಿ ಕಲಾವಿದರು. 2021 ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ನಡೆಯುವ ಕರ್ನಾಟಕ ರಾಜ್ಯೋತ್ಸವದಲ್ಲಿ ಪ್ರಶಸ್ತಿಯನ್ನು ಸಿಎಂ ಬಸವರಾಜ ಬೊಮ್ಮಯಿ ಅವರಿಂದ ಸ್ವೀಕರಿಸಲಿದ್ದಾರೆ. ಮಾಗಡಿ ಮಣ್ಣಿನ ಕುಡಿ: ಮಾಗಡಿ ತಾಲೂಕಿನ ಕಸಬಾ ಹೋಬಳಿ ಜುಟ್ಟನಹಳ್ಳಿ ಗ್ರಾಮದ ಎನ್‌. ಮಲ್ಲೇಶಯ್ಯ ರೈತಾಪಿ ಕುಟುಂಬದಲ್ಲಿ ಜನಿಸಿದವರು. ಕಲೆ ಎನ್ನುವುದು ರಕ್ತಗತವಾಗಿಯೇ ಬಂದಿರುತ್ತದೆ ಎಂಬುದಕ್ಕೆ ಇವರೇ ಸಾಕ್ಷಿ. ನಾಡಪ್ರಭು ಕೆಂಪೇಗೌಡರ ನಾಡು ಮಾಗಡಿಯ ಮಣ್ಣು ಬಹುಮುಖ ಪ್ರತಿಭೆಗಳಿಗೆ ಜನ್ಮಕೊಟ್ಟಿದೆ. ಅದರಲ್ಲಿ ರಂಗಭೂಮಿ ಕಲಾವಿದ ಎನ್‌.ಮಲ್ಲೇಶಯ್ಯ ಅವರೂ ಒಬ್ಬರು.

ಶಂಕರಾಚಾರ್‌ ಪ್ರೇರಣೆ: ಎನ್‌.ಮಲ್ಲೇಶಯ್ಯ ಅವರು ಪಕ್ಕದ ಕೆಂಪಸಾಗರದ ಗ್ರಾಮದಲ್ಲಿನ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುತ್ತಿದ್ದಾಗಲೇ ರಂಗಭೂಮಿ ಪ್ರವೇಶ ಮಾಡಿ ಜನಮನ್ನಣೆ ಗಳಿಸಿದ್ದರು. ಜುಟ್ಟನಹಳ್ಳಿ ಹಳ್ಳಿ ಗ್ರಾಮದ ಗ್ರಾಮದೇವತೆ ಆಧಿಶಕ್ತಿ ಮಾರಮ್ಮನ ಗುಡಿಯಲ್ಲಿನ ಹಿರಿಯ ಕಲಾವಿದರು ರಂಗಭೂಮಿ ನಾಟಕ ಪ್ರದರ್ಶನಕ್ಕೆ ಪಾತ್ರದಾರಿಗಳು ಅಭ್ಯಾಸ ಮಾಡುತ್ತಿದ್ದರು.

ಇದನ್ನೂ ಓದಿ:- 2ಎ ಮೀಸಲಾತಿ ಸಿಗುವವರೆಗೂ ಹೋರಾಟ ಕೈ ಬಿಡಲ್ಲ

ಆ ವೇಳೆ ಮಲ್ಲೇಶ್‌ ಅವರು ತಪ್ಪದೆ ಪ್ರತಿದಿನವೂ ನಾಟಕ ಅಭ್ಯಾಸ ಮಾಡುತ್ತಿದ್ದ ಮಾರಮ್ಮನ ಗುಡಿಗೆ ತೆರಳಿ ಅಲ್ಲಿನ ಅಭ್ಯಾಸ ನಿರತ ಕಲಾವಿದರ ಕಂದ ಪದ್ಯವನ್ನು ಕೇಳಿಸಿಕೊಳ್ಳುತ್ತಿದ್ದದನ್ನು ಹಾರ್ಮೊನಿಯಂ ಮಾಸ್ಟರ್‌ ಶಂಕರಾ ಚಾರ್‌ ಸೂಕ್ಷ್ಮವಾಗಿ ಗಮನಿಸಿ ಎನ್‌.ಮಲ್ಲೇಶಯ್ಯ ಅವರಿಗೆ ದ್ರೌಪದಿ ಪಾತ್ರದ ಕಂದವನ್ನು ಹಾಡು ವಂತೆ ಪ್ರೇರೇಪಿಸಿದಾಗ ಅತ್ಯಂತ ಚೆನ್ನಾಗಿ ಹಾಡಿದನ್ನು ಮಾಸ್ಟರ್‌ ಒಪ್ಪಿಕೊಂಡರು. ಸಂತಸಗೊಂಡು ಅಂದಿನಿಂದ ಕಲೆ ಹುಚ್ಚು ಹೆಚ್ಚಾಯಿತು. ರಂಗಭೂಮಿ ಪ್ರವೇಶಿಸಲು ಅವಕಾಶ ಸಿಕ್ಕಿತು ಎಂದು ಎನ್‌.ಮಲ್ಲೇಶಯ್ಯ ವಿವರಿಸಿದರು.

ಕಲಾಸೇವೆ: ಮಂಡ್ಯದ ಬೆಣ್ಣಿ ಕಾಳಪ್ಪ ಅವರ ಪ್ರಸಿದ್ಧ ಸೀನರಿ ಇತ್ತು. ಆ ವೇಳೆ ಪೌರಾಣಿಕ ನಾಟಕಗಳು ಎಲ್ಲೆಡೆ ಹೆಚ್ಚಾಗಿ ನಡೆಯುತ್ತಿತ್ತು. ಸುಮಾರು 13 ವರ್ಷದ ಬಾಲಕನಾಗಿದ್ದಾಗಲೇ ನಾನು ರಂಗಭೂಮಿ ವೇದಿಕೆಯಲ್ಲಿ ಬಣ್ಣ ಹಚ್ಚಿದ್ದೆ. ನಂತರದಲ್ಲಿ ಬೆಂಗಳೂರಿನ ವಿವಿಧೆಡೆ ನಡೆಯುವ ನಾಟಕ ಪ್ರದರ್ಶನಲ್ಲಿ ಶ್ರೀಕೃಷ್ಣನ ಪಾತ್ರ ಮಾಡಿಕೊಂಡು ಬರುತ್ತಿದ್ದೆ. ವಜ್ರಪ್ಪ ಎಂಬ ನಾಟಕದ ಮಾಸ್ಟರ್‌ ಇದ್ದರು.

ಅವರ ಮಾರ್ಗದರ್ಶನಲ್ಲಿ 1984 ರಿಂದಲೂ 84 ಭಾರಿ ಶ್ರೀಕೃಷ್ಣನ ಪಾತ್ರಧಾರಿಯಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರದರ್ಶನ ನೀಡಿರುವೆ. ನನ್ನ ಸಹೋದರ ಭೈರಪ್ಪ ದುರ್ಯೋಧನ ಪಾತ್ರ ಮಾಡುತ್ತಿದ್ದರು ಎಂದು ನೆನಪಿಸಿಕೊಂಡರು. ಪ್ರತಿವರ್ಷ ಯಲಹಂಕದಲ್ಲಿ ನಾಟಕ ಪ್ರದರ್ಶನ ನಡೆಯುತ್ತಿತ್ತು. ನಾನು ಅಲ್ಲಿಯೂ ಬಬ್ರುವಾಹನ ಪಾತ್ರ ಮಾಡುತ್ತಿದ್ದೆ. ಹೇಗೆ ಎಲ್ಲೆಡೆ ನೂರಾರು ರಂಗ ಸಜ್ಜಿಕೆಯಲ್ಲಿ ಕೃಷ್ಣನ ಪಾತ್ರ ಮಾಡಿದ್ದೇನೆ. ನನ್ನ ರಂಗಭೂಮಿ ಸೇವೆ ಪರಿಗಣಿಸಿ ಪ್ರಶಸ್ತಿ ಕೋರಿ ಸರ್ಕಾರಕ್ಕೆ ಅರ್ಜಿ ಹಾಕಿದೆ. ಜಿಲ್ಲಾ ಉಸ್ತವಾರಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ನನ್ನ ಆಯ್ಕೆಗೆ ಶ್ರಮಿಸಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ಅವರು ನನ್ನ ಕಲಾ ಸೇವೆಗೆ ಸಂದ ಗೌರವ ಪ್ರಶಸ್ತಿ ಸ್ವೀಕರಿಸುವುದಾಗಿ ಕಲಾವಿದ ಎನ್‌. ಮಲ್ಲೇಶಯ್ಯ ವಿವರಿಸಿದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.