
Ramanagara: ಪಿಒಪಿ ಮೂರ್ತಿ ನಿರ್ಮಾಣ ಕೇಂದ್ರಕ್ಕೆ ದಾಳಿ
Team Udayavani, Sep 18, 2023, 11:20 PM IST

ರಾಮನಗರ: ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿ ಪಿಒಪಿ ಗಣೇಶ ಮೂರ್ತಿ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದು, ಸ್ಥಳದಿಂದ ಹಲವು ಮೂರ್ತಿಗಳನ್ನು ವಶಕ್ಕೆ ಪಡೆಯಲಾಗಿದೆ.
ರಾಮನಗರದ ಧಾರಾಪುರ ಗ್ರಾಮದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾರಾಟ ಮಾಡಲಾಗುತ್ತಿತ್ತು. ಕೇರಳ, ಆಂಧ್ರ ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ಸರಬರಾಜು ಮಾಡಲು ಇಲ್ಲಿ ಮೂರ್ತಿಗಳನ್ನು ಸಿದ್ಧಪಡಿಸಲಾಗುತ್ತಿತ್ತು. ಸ್ಥಳದಿಂದ 70ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಮನಗರ ಎಸಿ ವಿನಯ್ ಬಿ.ಕೆ. ನೇತೃತ್ವದಲ್ಲಿ ದಾಳಿ ನಡೆದಿದೆ. ಮಾಲಿನ್ಯ ಮಂಡಳಿ ಅಧಿಕಾರಿಗಳು ಹಾಗೂ ಪೊಲೀಸರು ಜತೆಯಲ್ಲಿದ್ದರು.
ಸಂಸ್ಥೆಯು ನವೀನ್ ಎಂಬಾತ ಮಾಲಕತ್ವದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
