Ramanagara politics: ಡಿಕೆಶಿ, ಡಿಕೆಎಸ್‌ ಭದ್ರಕೋಟೆ ಭೇದಿಸುವುದೇ ಮೈತ್ರಿ?


Team Udayavani, Sep 11, 2023, 3:59 PM IST

TDY-14

ರಾಮನಗರ: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಸಂಬಂಧ ಚರ್ಚೆ ಆರಂಭ ಗೊಂಡ ಬೆನ್ನಲ್ಲೇ, ಬಿಜೆಪಿ ಪ್ರಬಲ ಅಲೆಯ ನಡುವೆಯೂ ಕೈ ಹಿಡಿದಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಕೈ ಜಾರಲಿದೆಯಾ ಎಂಬ ಚರ್ಚೆ ಕ್ಷೇತ್ರ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಕೇಳಿಬರುತ್ತಿದೆ.

ಹಿಂದೆ ಇದ್ದ ಕನಕಪುರ ಲೋಕಸಭಾ ಕ್ಷೇತ್ರ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವಾಗಿ ಪರಿವರ್ತನೆ ಗೊಂಡ ಬಳಿಕ 2009 ರಲ್ಲಿ ಮೊದಲ ಬಾರಿಗೆ ಸಾರ್ವತ್ರಿಕ ಚುನಾವಣೆ ಎದುರಿಸಿತ್ತು. ಮೊದಲ ಚುನಾವಣೆಯಲ್ಲಿ ಜೆಡಿಎಸ್‌ ನಿಂದ ಎಚ್‌.ಡಿ.ಕುಮಾರಸ್ವಾಮಿ ಗೆಲುವು ಸಾಧಿಸಿದ್ದನ್ನು ಹೊರತು ಪಡಿಸಿದರೆ ನಂತರ ನಡೆದ ಒಂದು ಉಪಚುನಾವಣೆ, ಎರಡು ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ. ಇದೀಗ ಬಿಜೆಪಿ-ಜೆಡಿಎಸ್‌ ಮೈತ್ರಿ ಕೂಟ ಡಿಕೆಎಸ್‌ ಸಹೋದರರ ಭದ್ರಕೋಟೆಯನ್ನು ಭೇದಿಸುವುದೇ ಎಂಬ ಕುತೂಹಲ ರಾಜಕೀಯ ಪಾಳಯದಲ್ಲಿ ಗರಿಗೆದರಿದೆ.

2024ರ ಲೋಕಸಭಾ ಚುನಾವಣೆ ಗೆಲುವಿಗೆ ಬಿಜೆಪಿ ಈಗಾಗಲೇ ರಣತಂತ್ರ ಆರಂಭಿಸಿದ್ದು, ಡಿ.ಕೆ.ಸುರೇಶ್‌ ಕೈನಲ್ಲಿರುವ ಈ ಕ್ಷೇತ್ರವನ್ನು ಕಸಿದುಕೊಳ್ಳಲು ಕಮಲ ಪಾಳಯ ಮುಂದಾಗಿದೆ. ಇದಕ್ಕಾಗಿ ದಳಪತಿಯ ದೋಸ್ತಿಗೆ ಕೈ ಚಾಚಿದೆ. ಎರಡೂ ಪಕ್ಷಗಳು ಒಗ್ಗೂಡಿ ಡಿ.ಕೆ.ಶಿವಕುಮಾರ್‌ ಅವರನ್ನು ಮಣಿಸುವ ಮೂಲಕ ಕಾಂಗ್ರೆಸ್‌ನ ಏಕೈಕ ಕ್ಷೇತ್ರ ಎನಿಸಿಕೊಂಡಿದ್ದ ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಕಸಿದುಕೊಳ್ಳಲು ಮಾಸ್ಟರ್‌ ಪ್ಲ್ರಾನ್‌ ಸಿದ್ಧಪಡಿಸಿವೆ.

ಬಲಾಬಲ:   ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ  ಕಳೆದ 3 ಚುನಾವಣೆಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಭರ್ಜರಿ ಬಹುಮತದಿಂದ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 5 ರಲ್ಲಿ ಕಾಂಗ್ರೆಸ್‌, ಒಂದರಲ್ಲಿ ಜೆಡಿಎಸ್‌ ಮತ್ತು 2 ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಕ್ಷೇತ್ರದಲ್ಲಿ ಮೂರು ಪಕ್ಷಗಳು ಪೈಪೋಟಿ:  ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಇದುವರೆಗೆ ಖಾತೆ ತೆಗೆದಿಲ್ಲ.  ಹಿಂದೆ ಕನಕಪುರ ಲೋಕಸಭಾ ಕ್ಷೇತ್ರ ಇದ್ದಾಗ 1998ರಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಶ್ರೀನಿವಾಸ್‌ ಗೆಲುವು ಸಾಧಿಸಿದ್ದನ್ನು ಹೊರತು ಪಡಿಸಿದರೆ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಆದರೆ, ಬಿಜೆಪಿಗೆ ತನ್ನದೇ ಆದ ಮತಬ್ಯಾಂಕ್‌ ಈ ಕ್ಷೇತ್ರದಲ್ಲಿ ಇದ್ದು, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳಿಗೆ ತೀವ್ರ ಪೈಪೋಟಿ ನೀಡಿಕೊಂಡು ಬರುತ್ತಿವೆ. ಎರಡೂ ಪಕ್ಷಗಳಿಗೆ ಪ್ರತಿಸ್ಪರ್ಧಿಯಾಗಿ ನಿಂತಿದ್ದು, ಬಿಜೆಪಿಗೆ ಈ ಕ್ಷೇತ್ರದಲ್ಲಿ ಸಾಂಪ್ರದಾಯಿಕ ಮತಗಳು ಇರುವುದು ಕಂಡು ಬಂದಿದೆ.

ಹಿಂದಿನ ಕನಕಪುರ, ಕ್ಷೇತ್ರ ಮರುವಿಂಗಡಣೆಯಾದ ಬಳಿಕ ಸ್ಥಾಪಿತವಾದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಭದ್ರಕೋಟೆ ಎನಿಸಿದ್ದು, ಕನಕಪುರ ಲೋಕಸಭಾ ಕ್ಷೇತ್ರದಲ್ಲಿ 12 ಚುನಾವಣೆಗಳ ಪೈಕಿ 9 ಬಾರಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದರೆ, ಒಂದು ಬಾರಿ ಬಿಜೆಪಿ, ಎರಡು ಬಾರಿ ಜೆಡಿಎಸ್‌ ಗೆಲುವು ಸಾಧಿಸಿದೆ. ಇನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವಾದ ಬಳಿಕ ನಡೆದಿರುವ 3 ಸಾರ್ವತ್ರಿಕ ಒಂದು ಉಪಚುನಾವಣೆಯಲ್ಲಿ ಮೂರು ಬಾರಿ ಕಾಂಗ್ರೆಸ್‌ ಒಂದು ಬಾರಿ ಜೆಡಿಎಸ್‌ ಗೆಲುವು ಸಾಧಿಸಿದೆ.

 2023ರ ಮತಗಳಿಕೆಯಲ್ಲಿ ಕಾಂಗ್ರೆಸ್‌ ನಂ.1, ಬಿಜೆಪಿ ನಂ.2:

ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್‌- ಬಿಜೆಪಿ ಮೈತ್ರಿ ಫಲಪ್ರದವಾದೀತೆ ಎಂಬ ಚರ್ಚೆ ಕ್ಷೇತ್ರವ್ಯಾಪ್ತಿಯಲ್ಲಿ ನಡೆಯುತ್ತಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಒಟ್ಟಾರೆ 8,12,917 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‌ ಅಭ್ಯರ್ಥಿಗಳು 3,62,805, ಬಿಜೆಪಿ ಅಭ್ಯರ್ಥಿಗಳು 6,09,382 ಮತಗಳನ್ನು ಪಡೆದಿದ್ದಾರೆ. ಈ ಎರಡೂ ಪಕ್ಷಗಳು ಗಳಿಸಿರುವ ಮತದ ಪ್ರಮಾಣವನ್ನು ಗಣನೆ ಮಾಡಿದರೆ, ಮೈತ್ರಿ ಉಭಯ ಪಕ್ಷಗಳಿಗೆ ಲಾಭದಾಯವೆನಿಸಲಿದೆ. ಆದರೆ, 2013ರ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಯಾಗಿತ್ತಾದರೂ, ಡಿ.ಕೆ.ಸುರೇಶ್‌ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಸಂಸದ ಡಿ.ಕೆ.ಸುರೇಶ್‌ ಬಿರುಸಿನ ಸಂಚಾರ:

ಒಂದೆಡೆ ನಾನು ಚುನಾವಣೆಗೆ ಸ್ಪರ್ಧೆಮಾಡುವುದೇ ಇಲ್ಲ ಎಂದು ರಾಜಕೀಯ ವೈರಾಗ್ಯದ ಮಾತುಗಳನ್ನಾಡುತ್ತಿದ್ದ ಸಂಸದ ಡಿ.ಕೆ.ಸುರೇಶ್‌, ಮೈತ್ರಿ ಸುದ್ದಿ ಬೆನ್ನಲ್ಲೇ  ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಸಂಚಾರ ಆರಂಭಿಸಿದ್ದಾರೆ. ಕಾಂಗ್ರೆಸ್‌ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡಿರುವ ಚನ್ನಪಟ್ಟಣ ಕ್ಷೇತ್ರದಲ್ಲೇ ತಮ್ಮ ಸಂಘಟನಾ ಕಾರ್ಯವನ್ನು ಆರಂಭಿಸಿದ್ದು, ವಾರದಿಂದ ಚನ್ನಪಟ್ಟಣ ಕ್ಷೇತ್ರದಲ್ಲಿ ಗ್ರಾಪಂ ವಾರು ಸಭೆ ನಡೆಸಿ ಜನಮನ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ. ಒಟ್ಟಾರೆ ಮೈತ್ರಿ ಸುದ್ದಿ ಗ್ರಾಮಾಂತರ ಕ್ಷೇತ್ರದಲ್ಲಿ ಸಾಕಷ್ಟು ಸದ್ದುಮಾಡಿದ್ದು, ಹ್ಯಾಟ್ರಿಕ್‌ ವೀರ ಎನಿಸಿಕೊಂಡಿರುವ ಡಿ.ಕೆ.ಸುರೇಶ್‌ ಕಟ್ಟಿಹಾಕಲು ಈ ಮೈತ್ರಿ ಸಹಕಾರಿಯಾದೀತೆ ಎಂಬುದು ಸದ್ಯಕ್ಕೆ ಎಲ್ಲರಲ್ಲಿ ಕಾಡುತ್ತಿರುವ ಕುತೂಹಲವಾಗಿದೆ.

ಕ್ಷೇತ್ರದಲ್ಲಿ ಕೆಲಸ ಮಾಡಿ ದರೆ ಜನತೆ ಕೈ ಬಿಡುವುದಿಲ್ಲ. ನಾವು ಕೆಲಸ ಮಾಡಿದ್ದೇವೆ. ನಮ್ಮ ಕೆಲಸ ನೋಡಿ ಜನತೆ ಮತ ನೀಡುತ್ತಾರೆ. ಮೈತ್ರಿಯಿಂದ ಕಾಂಗ್ರೆಸ್‌ಗೆ ಯಾವುದೇ ತೊಂದರೆ ಇಲ್ಲ.-ಡಿ.ಕೆ.ಸುರೇಶ್‌, ಸಂಸದ

- ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.