ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಆಯೋಗ ಸಂಪೂರ್ಣ ವಿಫಲ
Team Udayavani, Apr 26, 2024, 11:28 AM IST
ರಾಮನಗರ: ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ, ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಿಫ್ಟ್ ಕಾರ್ಡ್ ಗಳನ್ನು ಹಂಚುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಗಿಫ್ಟ್ ಕಾರ್ಡುಗಳನ್ನು ಹಂಚುತ್ತಿದೆ ಈ ಮೂಲಕ ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿ ಕಾರಿದ ಅವರು ಹಣ ಹಂಚಿಕೊಂಡು ಚುನಾವಣಾ ನಡೆಸಲು ಅವಕಾಶ ಮಾಡಿಕೊಟ್ಟುಬಿಡಿ ಎಂದು ಆಯೋಗದ ವಿರುದ್ಧ ಗುಡುಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರವಾಗಿ ಕ್ಯೂ ಆರ್ ಕೋಡ್ ಇರುವ ಕೂಪನ್ ಗಳ ಹಂಚಿಕೆ ಮಾಡಲಾಗುತ್ತಿದೆ ಇದನ್ನು ತಡೆಯಲು ಹೋದ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಕುಸುಮ ಹನುಮಂತಯ್ಯ, ಕುಣಿಗಲ್ ಶಾಸಕ ಡಾ.ರಂಗನಾಥ್, ಮಾಗಡಿ ಶಾಸಕ ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಕೂಪನ್ ಕಾರ್ಡುಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಕೈಯಲ್ಲಿದ್ದ ಕೂಪನ್ ಕಾರ್ಡ್ ತೋರಿಸಿ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು
Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ
ICSE: ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 99 ಮೀರಿದ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್ ಯಾತ್ರೆ
ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ
Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ
Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್ ಕಡ್ಡಾಯ
ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು