Ramanagara: ಲಾರಿ-ಟಿಟಿ ವಾಹನ ಅಪಘಾತ, ಮೂವರು ಸ್ಥಳದಲ್ಲೇ ಸಾವು
Team Udayavani, Feb 17, 2024, 10:06 AM IST
ರಾಮನಗರ: ಲಾರಿ ಹಾಗೂ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿ, ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜು ಬಳಿ ಸಂಭವಿಸಿದೆ.
ಮೈಸೂರು ಮೂಲದ ಸೋಮಲಿಂಗಪ್ಪ(70), ಸೋಮಣ್ಣ(68), ರಾಜೇಶ್ವರಿ(52) ಮೃತಪಟ್ಟವರು.
ಹಾವೇರಿಯಲ್ಲಿ ಸಂಬಂಧಿಕರ ಮದುವೆಗೆ ಹೋಗಿದ್ದವರು ಬೆಂಗಳೂರು ಮೂಲಕ ಮತ್ತೆ ಮೈಸೂರಿಗೆ ತೆರಳುವಾಗ ಈ ಅಪಘಾತ ನಡೆದಿದೆ. ಟಿಟಿ ವಾಹನದಲ್ಲಿದ್ದ ಉಳಿದ ಆರು ಮಂದಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಮೃತದೇಹಗಳು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಚನ್ನಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ