Road mishap: ಕೆಎಸ್ಆರ್ಟಿಸಿ ಬಸ್-ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರ ಸಾವು
Team Udayavani, Jan 12, 2024, 12:51 PM IST
ಕುದೂರು: ಕೆಎಸ್ಆರ್ಟಿಸಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯ ಸೋಲೂರು ರೈಲ್ವೆ ಬ್ರಿಡ್ಜ್ ಬಳಿ ಸಂಭವಿಸಿದೆ.
ರಾಮನಗರ ಜಿಲ್ಲೆ ಕುದೂರು ಹೋಬಳಿಯ ಮಲ್ಲಪ್ಪನಹಳ್ಳಿಯ ವೆಂಕಟಾಚಲ (32) ಮೃತ ದುರ್ದೈವಿ. ಸೋಲೂರು ಬಳಿ ಇರುವ ಶ್ರೀರಾಮ ಫೈನಾನ್ಸ್ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವೆಂಕಟಾಚಲ ಗುರುವಾರ ಬೆಳಗ್ಗೆ ತನ್ನ ಪತ್ನಿಯನ್ನು ಬೈಕ್ನಲ್ಲಿ ಕರೆದುಕೊಂಡು ಕುದೂರಿನಲ್ಲಿ ಬಿಟ್ಟು ಕೆಲಸ ಹೋಗಿ ಬರುವುದಾಗಿ ಹೇಳಿ ಹೋಗುತ್ತಿದ್ದ ವೇಳೆ ಸೋಲೂರು ಬಳಿ ಇರುವ ರೈಲ್ವೆ ಬ್ರಿಡ್ಜ್ ಸಮೀಪ ಅತಿ ವೇಗವಾಗಿ ಅಜಾಗರುಕತೆಯಿಂದ ಬಂದ ಕೆಎಸ್ಆರ್ಟಿಸಿ ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಕೆಎಸ್ಆರ್ಟಿಸಿ ಬಸ್ ಅಡಿ ಸಿಲುಕಿ ನುಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಪಕ್ಕದಲ್ಲಿಯೇ ಇದ್ದ ಬೇಲಿ ಎಗರಿಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಡ್ರೈವರ್ ಹಾಗು ಕಂಡಕ್ಟರ್ ಪರಾರಿಯಾಗಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ