ರಸ್ತೆಯಲ್ಲಿ ಗುಂಡಿ ಮುಚ್ಚಿದ ಹಾರೋಹಳ್ಳಿ ಪೊಲೀಸರು

Team Udayavani, Jul 16, 2022, 3:04 PM IST

ರಸ್ತೆಯಲ್ಲಿ ಗುಂಡಿ ಮುಚ್ಚಿದ ಹಾರೋಹಳ್ಳಿ ಪೊಲೀಸರು

ಹಾರೋಹಳ್ಳಿ: ಹಾರೋಹಳ್ಳಿ ಸಮೀಪದ ಬಿ.ಡಬ್ಲ್ಯು.ಎಸ್‌. ಎಸ್‌.ಬಿ. ಮುಂಭಾಗ ಗುಂಡಿ ಬಿದ್ದ ರಸ್ತೆಯಲ್ಲಿ ನಿತ್ಯ ಅಪಘಾತಗಳಾಗಿ ಸಾರ್ವಜನಿಕರು ಸಾವು ನೋವು ಅನುಭವಿಸುತ್ತಿದ್ದರು. ಇಂತಹ ಗುಂಡಿಯನ್ನು ಮುಚ್ಚುವ ಮೂಲಕ ಹಾರೋಹಳ್ಳಿ ಇಬ್ಬರು ಯುವ ಪೊಲೀಸರು ಮಾನವೀಯತೆ ಮೆರೆಯುವ ಮೂಲಕ ಸುಗಮ ರಸ್ತೆ ಸಂಚಾರಕ್ಕೆ ನೆರವಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 209ರ ಕನಕಪುರ-ಹಾರೋಹಳ್ಳಿ ಮುಖ್ಯರಸ್ತೆಯಲ್ಲಿನ ಬಿ.ದಯಾನಂದ ಸಾಗರ ಆಸ್ಪತ್ರೆಯಿಂದ ಬಿ.ಡಬ್ಲ್ಯು.ಎಸ್‌.ಎಸ್‌.ಬಿ. ವರೆಗೂ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳಿಗೆ ವೈಯಕ್ತಿಕವಾಗಿ ಕಾಂಕ್ರಿಟ್‌ ಬೆರೆಸಿದ ಸಿಮೆಂಟನ್ನು ಚೀಲದಲ್ಲಿ ತಂದು ಗುಂಡಿಗಳಿಗೆ ತುಂಬುವ ಮೂಲಕ ಗುಂಡಿಯನ್ನು ಮುಚ್ಚಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಇಬ್ಬರು ಯುವ ಪೊಲೀಸ್‌ ತಮ್ಮ ಹೆಸರನ್ನೂ ಸಹ ಹೇಳಲು ಇಚ್ಛಿಸದೇ ಇಂತಹ ಗುಂಡಿ ಮುಚ್ಚುವ ಕೆಲಸಕ್ಕೆ ಮುಂದಾಗಿರುವುದು ಅವರ ಸೇವಾ ಮನೋಭಾವಕ್ಕೆ ಹಿಡಿದ ಕನ್ನಡಿಯಾಗಿದೆ.

ಇತ್ತೀಚೆಗೆ ಈ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳಲ್ಲಿ ದ್ವಿಚಕ್ರ ವಾಹನ ಸವಾರರು ಬಿದ್ದು ಸಾವು-ನೋವುಗಳನ್ನು ಅನುಭವಿಸುತ್ತಿದ್ದರು. ಮಂಗಳವಾರ ರಾತ್ರಿಯೂ ಸಹ ಇದೇ ಮಾರ್ಗದಲ್ಲಿ ದ್ವಿಚಕ್ರ ವಾಹನದಲ್ಲಿ ಇಬ್ಬರು ಸವಾರರು ಗುಂಡಿ ಕಾಣದೇ ಕತ್ತಲಲ್ಲಿ ಬಿದ್ದು ತೀವ್ರ ಗಾಯಗೊಂಡಿದ್ದರು. ಇವರನ್ನು ಹಾರೋಹಳ್ಳಿ ಪೊಲೀಸರೇ ದಯಾನಂದ ಸಾಗರ

ಆಸ್ಪತ್ರೆಗೆ ಸೇರಿಸಿದ್ದರು. ಅಪಘಾತಕ್ಕೆ ಆಹ್ವಾನ ಉಂಟುಮಾಡುತ್ತಿದ್ದ ಇಂತಹ ಗುಂಡಿಗಳನ್ನು ಸ್ವತಃ ಇಬ್ಬರು ಯುವ ಪೊಲೀಸರು ಮುಚ್ಚುವ ಮೂಲಕ ಸುಗಮ ಸಂಚಾರಕ್ಕೆ ನೆರವಾಗಿದ್ದಾರೆ.

ಕಾಮಗಾರಿ ಪೂರ್ಣಗೊಳಿಸಿ:ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳೆದ 5-6 ವರ್ಷದಿಂದ ಕುಂಟುತ್ತಾ ಸಾಗಿದ್ದು, ಈ ಕಾಮಗಾರಿಯಿಂದ ಜನರು ಹಲವಾರು ಕಡೆ ರಸ್ತೆ ಅಪಘಾತದಲ್ಲಿ ಸಾವು-ನೋವುಗಳನ್ನು ಅನುಭವಿಸುತ್ತಿದ್ದಾರೆ. ಇದಕ್ಕೆ ಹೊಣೆಯಾರು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ಈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು. ಇಲ್ಲಿನ ಗುತ್ತಿಗೆದಾರ ಮತ್ತು ತುಂಡು ಗುತ್ತಿಗೆದಾರರ ಕಾಮಗಾರಿ ಅವ್ಯವಹಾರದಲ್ಲಿ ಸಾರ್ವಜನಿಕರು ಈ ರೀತಿ ನೋವು ಅನುಭವಿಸಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ಸಮಸ್ಯೆ ಬಗೆ ಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.