ಸಾತನೂರು ಆಸ್ಪತ್ರೆಗೆ ಸ್ವಚ್ಛ ರತ್ನ, ಕಾಯಕಲ್ಪ ಪ್ರಶಸ್ತಿ

Team Udayavani, Mar 10, 2019, 7:47 AM IST

satanoor.jpg

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ 2018-19ನೇ ಸಾಲಿನ ಸ್ವಚ್ಛ ರತ್ನ ಮತ್ತು ಕಾಯಕಲ್ಪ ಪ್ರಶಸ್ತಿಗಳು ಲಭ್ಯವಾಗಿವೆ ಎಂದು ಡಿಎಚ್‌ಒ ಡಾ. ಅಮರ್‌ನಾಥ್‌ ತಿಳಿಸಿದರು.

ನಗರದ ಆರೋಗ್ಯ ಇಲಾಖೆಯ ತರಬೇತಿ ಸಭಾಂಗಣದಲ್ಲಿ ಆಯೋಜಿಸಿದ್ದ ಇಲಾಖೆಯ ಕಾರ್ಯಕ್ರಮಗಳ ಮಾಹಿತಿ ಶಿಬಿರದ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಜಿಲ್ಲೆಗೆ 17 ಪ್ರಶಸ್ತಿಗಳು ಲಭ್ಯವಾಗಿವೆ. ಸ್ವಚ್ಛತೆ ಕಾಪಾಡಿಕೊಳ್ಳುವ ಆಸ್ಪತ್ರೆಗಳಿಗೆ ಸ್ವಚ್ಛ ರತ್ನ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಈ ಬಾರಿ ಸಾತನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಿಕ್ಕಿದೆ ಎಂದು ಹೇಳಿದರು.

ವಿವಿಧ ಆಸ್ಪತ್ರೆಗಳಿಗೆ ಮೆಚ್ಚುಗೆ ಪತ್ರ: ಚನ್ನಪಟ್ಟಣ ತಾಲೂಕು ಆಸ್ಪತ್ರೆ, ಕನಕಪುರ ತಾಲೂಕು ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ ಸಿಕ್ಕಿದೆ. ಉಳಿದಂತೆ ಜಿಲ್ಲೆಯ ಕೋಡಿಹಳ್ಳಿ, ವಿಜಿದೊಡ್ಡಿ, ಹೊಸದುರ್ಗ, ಬೇವೂರು, ಇಗ್ಗಲೂರು, ಜಗದಾಪುರ, ವೈ.ಟಿ.ಹಳ್ಳಿ, ಸುಗ್ಗನಹಳ್ಳಿ (ಮಾಗಡಿ), ತಗ್ಗೀಕುಪ್ಪೆ, ಬನ್ನಿಕುಪ್ಪೆ, ಗಾಣಕಲ್‌, ಲಕ್ಷ್ಮೀಪುರ, ಎಂ.ಜಿ.ಪಾಳ್ಯ ಆಸ್ಪತ್ರೆಗಳಿಗೂ ಮೆಚ್ಚುಗೆ ಪ್ರಮಾಣ ಪತ್ರ ಸಿಕ್ಕಿದೆ. ಕನಕಪುರದ ಯು.ಪಿ.ಎಚ್‌.ಸಿಗೆ ಅತ್ಯುತ್ತಮ ಪ್ರಶಸ್ತಿ ಸಿಕ್ಕಿದೆ ಎಂದು ತಿಳಿಸಿದರು.

ಆಯುಷ್ಮಾನ್‌ ಭಾರತ್‌ ಚಾಲನೆ: ಆಯುಷ್ಮಾನ್‌ ಭಾರತ- ಆರೋಗ್ಯ ಕರ್ನಾಟಕ ಯೋಜನೆಯಡಿ ನಾಗರಿಕರ ನೋಂದಣಿ ಆರಂಭವಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿಯೂ ನೋಂದಣಿ ಮಾಡಲಾಗುತ್ತಿದೆ. ನಾಗರಿಕರು ಆಧಾರ್‌ ಮತ್ತು ಪಡಿತರ ಚೀಟಿ ದಾಖಲೆ ಮತ್ತು 10 ರೂ. ನೋಂದಣಿ ಶುಲ್ಕ ಕೊಟ್ಟು ಕಾರ್ಡ್‌ ಪಡೆಯಬಹುದು. ಮಧ್ಯವರ್ತಿಗಳ ಮಾತಿಗೆ ಮರಳಾಗಬಾರದು. ಕಾರ್ಡ್‌ ಇಲ್ಲದಿದ್ದರೂ ಈ ಯೋಜನೆಯ ಸೌಲಭ್ಯ ಪಡೆಯುವುದು ಸಾಧ್ಯವಿದೆ. ಹೀಗಾಗಿ ನಾಗರಿಕರು ಆತಂಕ ಪಡದೆ, ಸಾವಧಾನವಾಗಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ತಿಳಿಸಿದರು.

ಈ ಯೋಜನೆಯಡಿಯಲ್ಲಿ ಬಿಪಿಎಲ್‌ ಕಾರ್ಡ್‌ ಉಳ್ಳ ಕುಟುಂಬ ವಾರ್ಷಿಕ 5 ಲಕ್ಷ ರೂ.ವರೆಗೆ ಉನ್ನತ ಚಿಕಿತ್ಸೆ ಪಡೆಯಲು ಸಾಧ್ಯವಿದೆ. ಎಪಿಎಲ್‌ ಕಾರ್ಡ್‌ದಾರರಿಗೆ ಶೇ.30ರಷ್ಟು ರಿಯಾಯಿತಿ ಸಿಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಈ ಯೋಜನೆಯನ್ನು ಜಾರಿಗೆ ತಂದಿದೆ ಎಂದರು. 

ದಂತಭಾಗ್ಯ ಯೋಜನೆ: ರಾಜ್ಯ ಸರ್ಕಾರ ದಂತ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಹಿರಿಯ ನಾಗರಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 100ಕ್ಕೂ ಹೆಚ್ಚು ಮಂದಿ ಈ ಯೋಜನೆಯ ಉಪಯೋಗ ಪಡೆದುಕೊಂಡಿದ್ದಾರೆ. ಬಡ ಕುಟುಂಬಗಳ ಹಿರಿಯ ನಾಗರಿಕರು ಇದೀಗ ವಯೋಮಾನದ ಕಾರಣ ಎದುರಾಗುವ ದಂತ ಸಮಸ್ಯೆಗಳಿಗೆ ನಿರಾತಂಕವಾಗಿ ಪರಿಹಾರ ಸಿಗಲಿದೆ ಎಂದು ಹೇಳಿದರು. 

ವಿವಿಧ ಕಾರ್ಯಕ್ರಮಗಳ ಮಾಹಿತಿ: ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್‌.ಎಂ.ದಕ್ಷಿಣಾ ಮೂರ್ತಿ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಆಶಾ ಕಾರ್ಯಕರ್ತೆಯರು ಮೂಲಕ ಜಾರಿಯಾಗುವ ಯೋಜನೆಗಳು, ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಲಭ್ಯವಿರುವ ಸವಲತ್ತುಗಳು ಹೀಗೆ ಆರೋಗ್ಯ ಇಲಾಖೆಯ ಮೂಲಕ ದೊರೆಯುವ ಸವಲತ್ತು, ಯೋಜನೆ, ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ಪ್ರಸನ್ನ ಕುಮಾರ್‌, ಎಂ.ಎಚ್‌.ಪ್ರಕಾಶ್‌ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.