ಮಳೆ ಬಂದ್ರೆ ಈ ಶಾಲಾ ಮಕ್ಕಳಿಗೆ ದೇಗುಲವೇ ಆಸರೆ

Team Udayavani, Aug 1, 2022, 4:54 PM IST

tdy-10

ರಾಮನಗರ: ಮಳೆ ಮುನ್ಸೂಚನೆ ಕಂಡರೆ ಸಾಕು ಈ ಶಾಲೆಯ ಮಕ್ಕಳು ಪಕ್ಕದ ದೇಗುಲಕ್ಕೆ ಓಡಬೇಕು. ಏಕೆಂದರೆ, ಕಟ್ಟಡ ಶಿಥಿಲವಾಗಿರುವುದು. ಅದು ಯಾವ ಮಟ್ಟಿಗೆ ಅಂದ್ರೆ ಮಳೆ ಬಂದ್ರೆ ಚಾವಣಿಯಿಂದಲೇ ನೀರು ಶಾಲಾ ಕೊಠಡಿಯೊಳಗೆ ನುಗ್ಗುತ್ತದೆ. ಇದರಿಂದ ಆತಂಕಗೊಂಡ ಶಿಕ್ಷಕರು ಮಳೆ ಬಂದಾಗ ದೇವಾಲಯದ ಆವರಣದಲ್ಲಿ ಮಕ್ಕಳನ್ನು ಕೂರಿಸಿ ಪಾಠ ಪ್ರವಚನ ಮಾಡುತ್ತಾರೆ.

ನಗರದ 31ನೇ ವಾರ್ಡ್‌ ಅರ್ಚಕರಹಳ್ಳಿಯಲ್ಲಿನ ಈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕು ಕಟ್ಟಡಗಳಿದ್ದು, ಎರಡನ್ನು 30 ವರ್ಷ ಹಿಂದೆ ನಿರ್ಮಿಸಲಾಗಿದೆ. ಕಳಪೆ ಕಾಮಗಾರಿಯಾಗಿರುವ ಕಾರಣ, ಬೇಗನೇ ಶಿಥಿಲಗೊಂಡಿವೆ. ಉಳಿದ ಎರಡು ಕೊಠಡಿ 40 ವರ್ಷ ಹಳೆಯದ್ದಾಗಿವೆ. ಇಲ್ಲಿ ನಾಲ್ವರು ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮುಖ್ಯೋಪಾಧ್ಯಾಯರು ಸೇರಿ ಮೂವರು ಸರ್ಕಾರಿ ಶಿಕ್ಷಕರು, ಒಬ್ಬ ಅತಿಥಿ ಶಿಕ್ಷಕ ಇದ್ದಾರೆ. 1ರಿಂದ 7ನೇ ತರಗತಿವರೆಗೆ ಒಟ್ಟು 90 ವಿದ್ಯಾರ್ಥಿಗಳಿದ್ದು, ಮೂರು ಕೊಠಡಿಗಳ ಚಾವಣಿ ಶಿಥಿಲಗೊಂಡಿದೆ. ಅಲ್ಲದೆ, ಕಟ್ಟಡದ ಮೋಲ್ಡ್‌ಗೆ ಬಳಸಲಾಗಿದ್ದ ಕಬ್ಬಿಣದ ಸರಳು ತುಕ್ಕು ಹಿಡಿದು ಹೊರಗೆ ಕಾಣಿಸುತ್ತವೆ. ಇದರಿಂದ ಮಕ್ಕಳು, ಶಿಕ್ಷಕರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಮಕ್ಕಳ ಕಳುಹಿಸಲು ಹಿಂದೇಟು: ಶಾಲಾ ಕೊಠಡಿ ಸ್ಥಿತಿ ನೋಡಿ ಕೆಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಸರ್ಕಾರಿ ಶಾಲೆ ಗಳ ಉಳಿವಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಸರ್ಕಾರ ಸೌಲಭ್ಯ ನೀಡುವಲ್ಲಿ ಮಾತ್ರ ಸ್ವಲ್ಪ ಹಿಂದೆ ಬಿದ್ದಿದೆ ಎಂದರೆ ತಪ್ಪಲ್ಲ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸುವ ಸಲುವಾಗಿ ಕೆಲವು ಶಿಕ್ಷಕರು ಇನ್ನಿಲ್ಲದ ಕಸರತ್ತು ನಡೆಸುತ್ತಾರೆ. ಇಲಾಖೆಯ ಅಧಿಕಾರಿಗಳು ಕೂಡ ಹಲವು ಯೋಜನೆಗಳ ಅನುಷ್ಠಾನಕ್ಕೆ ಮುಂದಾಗಿದ್ದಾರೆ.

ಖಾಸಗಿ ವಲಯಗಳಿಂದ ಸಹಕಾರ ಪಡೆದು ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಲಾಗುತ್ತಿದೆ. ಇದರ ಜೊತೆಗೆ ಸರ್ಕಾರ ಹೆಚ್ಚು ಅನುದಾನ ಬಿಡುಗಡೆ ಮಾಡಿ ಸೌಲಭ್ಯ ಕಲ್ಪಿಸಬೇಕಿದೆ. ಸರ್ಕಾರ ಶಾಲೆಗಳ ಕೊಠಡಿ ನವೀಕರಣ ಮತ್ತುನೂತನ ಕೊಠಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡುವಮೂಲಕ ಮಕ್ಕಳ ಸುರಕ್ಷತೆ ಜೊತೆಗೆ ಉತ್ತಮ ಶಿಕ್ಷಣ ಕಲಿಕೆಯ ವಾತಾವರಣ ಸೃಷ್ಟಿಸಿದರೆ ಸರ್ಕಾರಿ ಶಾಲೆಗಳು ಉಳಿಯಲಿವೆ. ಈಗಾಗಲೇ ಶಾಲೆಗೆ ಮೂರು ಕೊಠಡಿವುಳ್ಳ ಹೊಸ ಕಟ್ಟಡ, ಎರಡು ಕೊಠಡಿಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದ್ದು, ನಗರೋತ್ಥಾನ ಯೋಜನೆಯಡಿ ಕಾಮಗಾರಿ ಪ್ರಾರಂಭಗೊಳ್ಳ ಲಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಯಾವುದೇ ಸರ್ಕಾರಿ ಶಾಲೆ ನಗರ ಪ್ರದೇಶದಲ್ಲಿದ್ದರೆ ನಗರೋತ್ಥಾನ ಯೋಜನೆಯಡಿ ಹಣ ಮೀಸಲಿಟ್ಟು ದುರಸ್ತಿಮಾಡುವುದು, ನೂತನ ಕಟ್ಟಡ ನಿರ್ಮಾಣಕಾರ್ಯ ಸುಗಮವಾಗಿ ಆಗುತ್ತಿದೆ. ಅಲ್ಲದೆ, ಸರ್ಕಾರ ವಿವಿಧ ಯೋಜನೆಗಳಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕೆ 5 ಕೋಟಿ ರೂ. ಮತ್ತುದುರಸ್ತಿ ಕಾರ್ಯಕ್ಕೆ 2 ಕೋಟಿ ರೂ. ಬಿಡುಗಡೆಮಾಡುತ್ತದೆ. ಈ ಶಾಲೆಗೂ ತಾಂತ್ರಿಕತೊಂದರೆ ಇತ್ತು. ಇದೀಗ ಪರಿಹಾರ ಆಗಿದೆ.ಕೆಲವೇ ದಿನಗಳಲ್ಲಿ ಕಾಮಗಾರಿಆರಂಭವಾಗುವ ನಂಬಿಕೆಯಿದೆ. – ನಂಜುಂಡಸ್ವಾಮಿ, ಶಿಕ್ಷಣ ಸಂಯೋಜಕರು

ಶಾಲಾ ಕಟ್ಟಡದ ಚಾವಣಿ ಬಿರುಕು ಬಿಟ್ಟಿದ್ದು, ಸಿಮೆಂಟ್‌ ಪದರ ಆಗ್ಗಾಗ್ಗೆ ಉದುರುತ್ತದೆ.ಇದರಿಂದಾಗಿ ಪಾಠ ಮಾಡುವ ವೇಳೆ ಭಯ ಸಹಜವಾಗಿಯೇ ಇರುತ್ತೆ. ವಿಶೇಷವಾಗಿಮಳೆಗಾಲ ಬಂದ್ರೆ ನಮಗೆ ಆತಂಕ ಜಾಸ್ತಿ. ಆದ್ದರಿಂದ ಮುಂಜಾಗ್ರತಾ ಹಾಗೂ ಮಕ್ಕಳಹಿತದೃಷ್ಟಿಯಿಂದ ದೇವಾಲಯದಲ್ಲಿ ಪಾಠ ಮಾಡ್ತೇವೆ ಅಷ್ಟೇ. ಶಾಲಾ ಜಾಗದ ತಾಂತ್ರಿಕ ಸಮಸ್ಯೆ ಜಿಲ್ಲಾಧಿಕಾರಿಗಳ ಹಂತದಲ್ಲಿ ಪರಿಹಾರವಾಗಿದೆ. ಈಗಾಗಲೇ ದುರಸ್ತಿ ಮಾಡುವ ಸಲುವಾಗಿ ಇಲಾಖೆ ಕೂಡ ಕ್ರಮವಹಿಸಿದೆ. ಆದಷ್ಟು ಬೇಗ ಕಟ್ಟಡ ನಿರ್ಮಾಣವಾಗಲಿದೆ ಎಂಬ ವಿಶ್ವಾಸವಿದೆ. – ಯೋಗಾನಂದ ಸ್ವಾಮಿ, ಮುಖ್ಯೋಪಾಧ್ಯಾಯ, ಅರ್ಚಕರಹಳ್ಳಿ ಶಾಲೆ.

– ಎಂ.ಎಚ್‌.ಪ್ರಕಾಶ್‌

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.