ದಿನೇಶ್ ಕಲ್ಲಹಳ್ಳಿ ನಿವಾಸಕ್ಕೆ ಖಾಕಿ ಕಾವಲು
Team Udayavani, Mar 5, 2021, 5:52 PM IST
ಕನಕಪುರ: ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ನಿವಾಸಕ್ಕೆ ಪೊಲೀಸರು ರಕ್ಷಣೆ ನೀಡಿದ್ದಾರೆ.
ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಉತ್ತರ ಕರ್ನಾಟಕದ ಯುವತಿಯೊಬ್ಬಳಿಗೆ ಕೆಪಿಟಿಸಿಎಲ್‌ನಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ವಂಚಿಸಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ನಾಗರೀಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದರು. ಈ ಬೆನ್ನಲ್ಲೇ ಸಚಿವರು ಮತ್ತು ಅವರ ಆಪ್ತರಿಂದ ಜೀವ ಬೆದರಿಕೆ ಕರೆ ಬರುತ್ತಿವೆ. ಅಲ್ಲದೇ ನಮ್ಮ ನಿವಾಸದ ಬಳಿ ಯಾರೋ ಅನಾಮಧೇಯರು ನನ್ನನ್ನು ಹಿಂಬಾಲಿಸುತ್ತಿದ್ದಾರೆ. ತನ್ನ ಹಾಗೂ ಕುಟುಂಬಕ್ಕೆ ಪ್ರಾಣ ಬೆದರಿಕೆ ಇರುವುದರಿಂದ ಪೊಲೀಸ್ ರಕ್ಷಣೆ ಕೊಡಿ ಎಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದರು.
ಮನವಿಗೆ ಸ್ಪಂದಿಸಿರುವಪೊಲೀಸ್ ಅಧಿಕಾರಿಗಳು, ದಿನೇಶ್ ಕಲ್ಲಹಳ್ಳಿ ನಿವಾಸದ ಬಳಿ ಇಬ್ಬರು ರಕ್ಷಣಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿದ್ದಾರೆ.