ಮಾಗಡಿ: ಎಸೆಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ: 8 ಮಂದಿ ವಶಕ್ಕೆ
Team Udayavani, May 26, 2022, 9:26 PM IST
ಮಾಗಡಿ: ಎಸೆಸೆಲ್ಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ತಿಳಿಸಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಪ್ರಿನ್ಸಿಪಾಲ್ ಶ್ರೀನಿವಾಸ್, ಕ್ಲರ್ಕ್ ರಂಗೇಗೌಡ, ರಂಗನಾಥ ಶಾಲೆಯ ಕೃಷ್ಣಮೂರ್ತಿ ಹಾಗೂ ಇತರ ಐವರು ಶಿಕ್ಷಕರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಪ್ರಕರಣ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದ ದೇವರಾಜು ಎಂಬಾತನನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕೆಂಪೇಗೌಡ ಪ್ರೌಢಶಾಲೆಯಲ್ಲಿ ಪರೀಕ್ಷಾ ಕೇಂದ್ರ ಇರಲಿಲ್ಲ. ರಂಗನಾಥ ಶಾಲೆಯಲ್ಲಿ ಪರೀಕ್ಷಾ ಕೇಂದ್ರ ಇತ್ತು. ಶಿಕ್ಷಕ ಕೃಷ್ಣಮೂರ್ತಿ ಪರೀಕ್ಷೆ ಪ್ರಾರಂಭವಾಗುತ್ತಿದ್ದಂತೆ ಪ್ರಶ್ನೆ ಪತ್ರಿಕೆಯನ್ನು ರಂಗೇಗೌಡನಿಗೆ ನೀಡಿರುವ ಮಾಹಿತಿ ಇದೆ. ರಂಗೇಗೌಡ ಪ್ರಶ್ನೆ ಪತ್ರಿಕೆ ತುಂಬಿ ಕೃಷ್ಣಮೂರ್ತಿಗೆ ಕೊಡುತ್ತಿದ್ದ ಬಗ್ಗೆಯೂ ಗೊತ್ತಾಗಿದೆ.
ಪ್ರಕರಣದಲ್ಲಿ ಸ್ಥಳೀಯ ಪತ್ರಕರ್ತ ಎಂದು ಹೇಳಿಕೊಳ್ಳುತ್ತಿದ್ದ ಓರ್ವನನ್ನೂ ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ತಲಾ 10 ಸಾವಿರ ರೂ. ವಸೂಲಿ ಮಾಡಿರುವ ಮಾಹಿತಿಯಿದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ