ಚೆಕ್‌ಡ್ಯಾಂ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಿ

Team Udayavani, Jul 22, 2019, 1:11 PM IST

ಮಾಗಡಿ: ಪ್ರತಿಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಸದಾಗಿ 10 ಚೆಕ್‌ ಡ್ಯಾಂಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಪಂ ಇಒ ಟಿ.ಪ್ರದೀಪ್‌ ಗ್ರಾಪಂ ಪಿಡಿಒಗಳಿಗೆ ತಾಕೀತು ಮಾಡಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕಿನ ಗ್ರಾಪಂನಲ್ಲಿನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ವೇಳೆ ಮಾತನಾಡಿ, ತಾಲೂಕು ಪಂಚಾಯ್ತಿಗೆ ನೂತನ ಇಒ ಆಗಿ ಅಧಿಕಾರ ಸ್ವೀಕರಿಸಿದ್ದೇನೆ. ಗ್ರಾಪಂ ಅಭಿವೃದ್ಧಿ ಅಧಿಕಾರಗಳ ಪರಿಚಯ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ತಮ್ಮ ಕಾರ್ಯವೈಖರಿಯ ಮೊದಲ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದಾಗಿ ತಿಳಿಸಿದರು.

ಜಲಾಮೃತ ಯೋಜನೆಯಡಿ ಚೆ‌ಕ್‌ಡ್ಯಾಂ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಬೇಕು. ತಾಲೂಕಿನ ಎಲ್ಲ ಅಂಗನವಾಡಿ ಶೌಚಾಲಯ ಹಾಗೂ ಕಟ್ಟಡಗಳನ್ನು ಪಿಡಿಒಗಳು ಖುದ್ದು ಪರಿಶೀಲಿಸಬೇಕು. ಅಪೂರ್ಣ ಕಟ್ಟಡಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕೆಲ ಶೌಚಾಲಯಗಳ ದುರಸ್ತಿ ಕೆಲಸಗಳನ್ನು ಶೀಘ್ರದಲ್ಲಿಯೇ ಮಾಡಿಸಬೇಕು. ಅವಶ್ಯವಿರುವೆಡೆ ಶೌಚಾಯಲ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಗ್ರಾಮ ಸಭೆ ನಡೆಸಿ ಅನುಮೋದನೆ ಪಡೆದಿರುವ ಕುರಿತು ಪಿಡಿಒಗಳು, ತಾಪಂಗೆ ಸಂಪೂರ್ಣ ಮಾಹಿತಿ ನೀಡಬೇಕು. ಕಾಮಗಾರಿಗಳ ಚೆಕ್‌ ಲಿಸ್ಟ್‌ ತೆಗೆದ ಮೇಲೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ಸ್ಥಳ ಪರಿಶೀಲನೆ ನಡೆಸಬೇಕು. ಅನವಶ್ಯಕ ವಿಷಯಗಳ ಬಗ್ಗೆ ಚರ್ಚೆ ಬೇಡ, ಕೆಲಸ ಮಾಡಿ ತೋರಿಸಬೇಕು. ಕಳಪೆ ಕಾಮಗಾರಿಗೆ ಅವಕಾಶ ಕೊಡಬೇಡಿ. ನೀವು ಮಾಡುವ ಕೆಲಸ ದೇವರ ಕೆಲಸಕ್ಕೆ ಸಮ ಎನ್ನುವಂತಿರಬೇಕು ಎಂದು ಇಒ ಸಲಹೆ ನೀಡಿದರು.

ಪಿಡಿಒಗಳು ನೂತನ ತಾಪಂ ಇಒ ಟಿ. ಪ್ರದೀಪ್‌ ಅವರಿಗೆ ಮೈಸೂರು ಪೇಟ ತೊಡಿಸಿ ಸನ್ಮಾನಿಸಿದರು. ತಾಪಂನ ಎಲ್ಲ ಗ್ರಾಮಗಳ ಪಿಡಿಗಳು ಸಭೆಯಲ್ಲಿ ಹಾಜರಿದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

  • ಚನ್ನಪಟ್ಟಣ: ಐದು ವರ್ಷ ದೊಳಗಿನ ಮಕ್ಕಳಿಗೆ ಉಚಿತವಾಗಿ ಪಲ್ಸ್‌ ಪೋಲಿಯೊ ಹನಿ ಹಾಕಿಸುವ ಮೂಲಕ ಶಾಶ್ವತ ಅಂಗವಿಕಲತೆ ಯಿಂದ ಪಾರು ಮಾಡಬೇಕು ಎಂದು ನರ್ಸರಿ ಟೀಚರ್ ಟ್ರೆçನಿಂಗ್‌...

  • ರಾಮನಗರ: ಜನರ ಅನುಕೂಲಕ್ಕಾಗಿಯೇ ಕಾನೂನು ಇರುವುದು ಹೀಗಾಗಿ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಹೆಲ್ಮೆಟ್‌ ಧರಿಸುವುದು ಕಡ್ಡಾಯ ಎಂಬ ಕಾನೂನು ಜನತೆ ಪಾಲಿಸಬೇಕು...

  • ರಾಮನಗರ: ಬೆಂಗಳೂರು ದಿಂಡಿಗಲ್‌ ರಾಷ್ಟ್ರೀಯ ಹೆದ್ಧಾರಿ 209 ರಲ್ಲಿ ಅಭಿವೃದ್ಧಿ ಕಾಮಗಾರಿ ಕಳೆದ ಕೆಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದು, ರಸ್ತೆ ನಿರ್ಮಾಣ ಸಂಸ್ಥೆಯ...

  • ರಾಮನಗರ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅನಾಹುತ ಸಂಭವಿಸಿದರೆ, ಅದರ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಸಜ್ಜಾಗುತ್ತಿದೆ. ಜಿಲ್ಲೆಯಲ್ಲಿ...

  • ‌ಕುದೂರು: ಆಧ್ಯಾತ್ಮಿಕ ಚೇತನ ಸ್ವಾಮಿ ವಿವೇಕಾನಂದರಿಂದ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿ ವಿಶ್ವದಲ್ಲಿ ಭಾರತದ ಕೀರ್ತಿ ಪಸರಿಸಿತುಎಂದು...

ಹೊಸ ಸೇರ್ಪಡೆ