ಪ್ರತಿಭಟನೆಯಿಂದ ತಪ್ಪು ಮುಚ್ಚಿಹಾಕಲು ಸಾಧ್ಯವಿಲ್ಲ; ಕೆ.ಎಸ್‌.ಈಶ್ವರಪ್ಪ

ಮ್ಯಾಚ್‌ ಪಿಕ್ಸಿಂಗ್‌ ಇದ್ದಿದ್ದರೆ ಮುಸ್ಲಿಂ ಓಟು ಇಟ್ಟುಕೊಂಡು ಏಕೆ ಸೋತರು.

Team Udayavani, Jun 18, 2022, 6:19 PM IST

ಪ್ರತಿಭಟನೆಯಿಂದ ತಪ್ಪು ಮುಚ್ಚಿಹಾಕಲು ಸಾಧ್ಯವಿಲ್ಲ; ಕೆ.ಎಸ್‌.ಈಶ್ವರಪ್ಪ

ಮಾಗಡಿ: ಐಟಿ ಮತ್ತು ಇಡಿಗೆ ಸಂಬಂಧಿಸಿದಂತೆ ಹೋರಾಟಕ್ಕಿಳಿದಿರುವ ಕಾಂಗ್ರೆಸ್‌ ನಾಯಕರು, ಮೊದಲು ಎಐಸಿಸಿ ಸಮಿತಿಯಲ್ಲಿ ಕುಳಿತು ಚರ್ಚಿಸಿ ಮಾತನಾಡಲಿ ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ಮಾಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ಮಾಂಡವ್ಯ ಕ್ಷೇತ್ರದ ತಿರುಮಲೆ ಶ್ರೀರಂಗನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಸೋನಿಯಾ ಗಾಂಧಿ ಮತ್ತು ರಾಹುಲ್‌ಗಾಂಧಿ ಅವರನ್ನು ಇಡಿ ಅಧಿಕಾರಿಗಳು ತನಿಖೆಗೆ ಕರೆದಿದ್ದು, ತನಿಖೆ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನಿಖೆ ಎನ್ನುವುದು ಎಲ್ಲರಿಗೂ ಒಂದೇ ಇರುತ್ತದೆ.

ದೊಡ್ಡವರು, ಚಿಕ್ಕರವರು ಎಂಬ ಪ್ರಶ್ನೆಯೇ ಉದ್ಬವಿಸುವುದಿಲ್ಲ. ಕಾಂಗ್ರೆಸ್‌ ನಾಯಕರ ಹೋರಾಟ, ಪ್ರತಿಭಟನೆಗಳಿಂದ ತಪ್ಪನ್ನು ಮುಚ್ಚಿಹಾಕಲು ಸಾಧ್ಯವಿಲ್ಲ ಎಂದು ಹೇಳಿದರು.

ಮುಸಲ್ಮಾನರನ್ನು ಉದ್ದಾರೆ ಮಾಡುತ್ತೇವೆ ಎನ್ನುವುದು ಬರೀ ಸುಳ್ಳು ಹೇಳಿಕೆ: ಬಿಜೆಪಿ ಕೋಮುವಾದಿ ಪಕ್ಷ ಎಂದು ಹೇಳುವ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ರಾಜ್ಯಸಭಾ ಚುನಾವಣೆಯಲ್ಲಿ ಮ್ಯಾಚ್‌ ಪಿಕ್ಸಿಂಗ್‌ ಎನ್ನುತ್ತಾರೆ. ಕಾಂಗ್ರೆಸ್‌  ನಾಯಕರು ಅಲ್ಪಸಂಖ್ಯಾತರನ್ನು ಕಣಕ್ಕಿಳಿಸಿದ್ದು, ಏಕೆ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಗೆಲ್ಲಿಸಿಕೊಳ್ಳಲಿಲ್ಲ.

ಬಿಜೆಪಿಯಿಂದ 112 ಓಟು ಇಟ್ಟುಕೊಂಡು 2 ಸ್ಥಾನವನ್ನು ಗೆದ್ದಿದ್ದೇವೆ. ಇನ್ನೊಂದು 2ನೇ ಸ್ಥಾನದಲ್ಲಿದ್ದು ಗೆದ್ದಿದ್ದೇವೆ. ಮ್ಯಾಚ್‌ ಪಿಕ್ಸಿಂಗ್‌ ಎಲ್ಲಿಂದ ಬಂತು. ಮ್ಯಾಚ್‌ ಪಿಕ್ಸಿಂಗ್‌ ಇದ್ದಿದ್ದರೆ ಮುಸ್ಲಿಂ ಓಟು ಇಟ್ಟುಕೊಂಡು ಏಕೆ ಸೋತರು. ಕೋಮವಾದಿಯನ್ನು ಸೋಲಿಸುತ್ತೇವೆ ಎಂದು ಕಾಂಗ್ರೆಸ್‌ ನಾಯಕರು ಏಕೆ ಜೆಡಿಎಸ್‌ನೊಂದಿಗೆ ಒಂದಾಣಿಕೆ ಮಾಡಿಕೊಳ್ಳಲಿಲ್ಲ. ಮುಸಲ್ಮಾನರನ್ನು ಉದ್ದಾರ ಮಾಡುತ್ತೇವೆ ಎಂದು ಹೇಳುವವರು, ಜೆಡಿಎಸ್‌ನಿಂದ ಏಕೆ ಹೊರ ಬಂದರು.

ಕೋಮವಾದಿಗಳು ಎನ್ನುವವರೇ ಮುಸಲ್ಮಾನರನ್ನು ಸೋಲಿಸಿದರು. ಇದೆಲ್ಲ ರಾಜಕೀಯ ತಂತ್ರಗಾರಿಕೆಯಷ್ಟೆ ಎಂದು ಲೇವಡಿ ಮಾಡಿದರು. ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಯಾವಾಗ ನಡೆಸುತ್ತೀರಿ ಎಂಬ ಪ್ರಶ್ನೆಗೆ ಚುನಾವಣೆಯ ಮೀಸಲಾತಿ ಸಂಬಂಧಿಸಿದಂತೆ ಪ್ರಕರಣ ಸುಪ್ರೀಂಕೋಟ್‌ನಲ್ಲಿದ್ದು, ಜಡ್ಜ್ಮೆಂಟ್‌ ಬಂದ ನಂತರ ಚುನಾವಣೆ ಯಾವಾಗ ಎಂದು ನಿರ್ಧಾರವಾಗುತ್ತದೆ ಎಂದು ಹೇಳಿದರು.

ಲಕ್ಷ್ಮೀ ನರಸಿಂಹ ಸ್ವಾಮಿ ದೇಗುಲಕ್ಕೆ ಭೇಟಿ: ಪ್ರಸಿದ್ಧ ಪ್ರವಾಸಿ ತಾಣ ಸಾವನದುರ್ಗದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೂ ಭೇಟಿ ನೀಡಿದ ಮಾಜಿ ಸಚಿವರು ದರ್ಶನ ಪಡೆದರು. ಸ್ಥಳೀಯ ಬಿಜೆಪಿ ನಾಯಕರು, ಮುಖಂಡರಿಗಾಗಲಿ ಈಶ್ವರಪ್ಪ ಅವರು ಮಾಗಡಿಗೆ ಬರುವ ವಿಷಯ ತಿಳಿದಿಲ್ಲದ ಕಾರಣ ಬಿಜೆಪಿಯ ಮುಖಂಡರು ಕಾಣಿಸಿಕೊಂಡಿಲ್ಲ.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.