ಆರೋಗ್ಯ ಸಮಾಜ ನಿರ್ಮಾಣದ ಗುರಿ

ಆರೋಗ್ಯ ಉಚಿತ ತಪಾಸಣೆ ಶಿಬಿರಕ್ಕೆ ರಜತ್‌ ಎಸ್‌.ಆರ್‌. ಚಾಲನೆ

Team Udayavani, May 13, 2019, 3:39 PM IST

ramanagar-tdy-2..

ಮಾಗಡಿ ಪಟ್ಟಣದ ಕನ್ನಿಕಾ ಮಹಲ್ನಲ್ಲಿ ವಾಸವಿ ಯುವ ಜನಸಂಘ ಮತ್ತು ಪೀಪಲ್ ಟ್ರೀ ಹಾಸ್ಪಿಟಲ್ ಸಹಯೋಗದಲ್ಲಿ ಏರ್ಪಡಿಸಿದ್ದ ಆರೋಗ್ಯ ಉಚಿತ ತಪಾಸಣಾ ಬೃಹತ್‌ ಶಿಬಿರದಲ್ಲಿ ರೋಗಿಯ ತಪಾಸಣೆ ಮಾಡುತ್ತಿರುವ ವೈದ್ಯರು.

ಮಾಗಡಿ: ಸಮಾಜದ ಸರ್ವತೋಮುಖ ಬೆಳವಣಿಗೆಯ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿ ಕೊಂಡು ಪರೋಪಕಾರ ಮಾಡುವುದೇ ನಮ್ಮ ಗುರಿ ಎಂದು ವಾಸವಿ ಯುವಜನ ಸಂಘದ ಅಧ್ಯಕ್ಷ ರಜತ್‌.ಎಸ್‌.ಆರ್‌. ತಿಳಿಸಿದರು.

ಪಟ್ಟಣದ ಕನ್ನಿಕಾ ಮಹಲ್ನಲ್ಲಿ ವಾಸವಿ ಯುವಜನ ಸಂಘ ಹಾಗೂ ಬೆಂಗಳೂರಿನ ಪೀಪಲ್ ಟ್ರೀ ಆಸ್ಪತ್ರೆಯ ಸಹಯೋಗದಲ್ಲಿ ವಾಸವಿ ಜಯಂತಿ ಅಂಗವಾಗಿ ನಡೆದ ಆರೋಗ್ಯ ಉಚಿತ ತಪಾಸಣೆ ಬೃಹತ್‌ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದ ಅಭಿವೃದ್ಧಿಯಲ್ಲಿ ಯುವಜನತೆಯ ಆರೋಗ್ಯ ಬಹಳ ಮುಖ್ಯ ಪಾತ್ರವಸಲಿದೆ. ಯುವಕರು ಮೊಬೈಲ್, ಸಿನಿಮಾ, ಇತರೆ ದುಷ್ಟಚಟಗಳಿಂದ ದೂರ ಉಳಿಯಬೇಕು. ದೀನರ ಸೇವೆಯೇ ದೇವರ ಸೇವೆ ಎಂದು ನಂಬಿ ಧಾರ್ಮಿಕ ಮತ್ತು ಆರೋಗ್ಯ ಸುಧಾರಣೆಯ ಬಗ್ಗೆ ಅರಿವು ಮೂಡಿಸಲು ಮುಂದಾಗಬೇಕಿದೆ. ಯುವಕರು ಇಳಿವಯಸ್ಸಿನ ಪೋಷಕರ ರಕ್ಷಣೆಯ ಕಡೆಗೆ ಹೆಚ್ಚಿನ ಗಮನಹರಿಸಬೇಕಿದೆ ಎಂದು ಹೇಳಿದರು.

ವ್ಯಾಪಾರ ಮಾಡುವುದು ಜೀವನದ ಮುಖ್ಯ ಗುರಿಯಾದರೂ ಸಹ ಮಾನವೀಯತೆಯ ಕಡೆಗೂ ಆದ್ಯತೆ ನೀಡಲಾಗುವುದು. ಪರಿಸರ, ಜಲಮೂಲ, ಸ್ಮಾರಕಗಳ ರಕ್ಷಣೆಯ ಜತೆಗೆ ಮಹಿಳಾ ಜಾಗೃತಿ ಮತ್ತು ಬಡವರ ಆರೋಗ್ಯ ಸುಧಾರಣೆಗೆ ಶಿಬಿರಗಳ ಮೂಲಕ ನೆರವಾಗುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದರು.

ಸಂಘದ ಕಾರ್ಯದರ್ಶಿ ಬಾಲಾಜಿ ಆನಂದ್‌ ಮಾತನಾಡಿ, ಸನಾತನ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಮುಂದುವರಿಸಲಾಗುವುದು. ಒಟ್ಟಿನಲ್ಲಿ ಆರೋಗ್ಯಕರ ಸಮಾಜ ದೇಶದ ಪ್ರಗತಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ಎಸ್‌.ಆರ್‌.ರಮೇಶ್‌ ಗುಪ್ತ ಮಾತನಾಡಿ, ವಾಸವಿ ಯುವಜನ ಸಂಘದವರು ಮಾಡುವ ಸಮಾಜ ಸೇವಾ ಕಾರ್ಯಗಳಿಗೆ ಬೆಂಬಲ ನೀಡಲಾಗುವುದು. ಸಮಾಜ ಸೇವೆಯೇ ನಮ್ಮ ಗುರಿ ಎಂದರು.

ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾ ಅಧ್ಯಕ್ಷ ಎಸ್‌.ಎನ್‌.ಶಭರೀಶ್‌, ಯುವಪರಿಷತ್‌ ಅಧ್ಯಕ್ಷ ಸಂದೀಪ್‌.ಎಚ್.ಎಂ, ಸ್ವರೂಪ್‌, ಗೋವರ್ಧನ್‌, ಕೃಷ್ಣ.ಬಿ.ಎಸ್‌, ರಸ್ವಂತ್‌, ಪುನೀತ್‌, ಸುಮನ್‌, ಸುಹಾಸ್‌, ಅಮೃತ್‌, ರಾಹುಲ್, ರಂಜಿತ್‌, ಮೋತ್‌, ಅಜೆಯ್‌, ನಾಗಾರ್ಜುನ್‌, ಪೀಪಲ್ ಟ್ರೀ ಆಸ್ಪತ್ರೆ ಎಚ್.ಜಿ.ಮಂಜುನಾಥ್‌ ಕಾರ್ಯಕ್ರಮ ದಲ್ಲಿ ಪಾಲ್ಗೊಂಡಿದ್ದರು.

ಶಿಬಿರದಲ್ಲಿ ಪಾಲ್ಗೊಂಡಿದ್ದ ನೂರಾರು ರೋಗಗಿಳನ್ನು ತಪಾಸಣೆ ಮಾಡಿ, ಔಷಧ ನೀಡಲಾಯಿತು.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; Mother-son passed away due to gas leak from geyser

Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

1-train

Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ

HD-Kumaraswamy

Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್‌ಡಿಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.