ಎಲ್ಲಾ ಕ್ಷೇತ್ರದಲ್ಲೂ ಸ್ತ್ರೀಯರಿಂದ ಅತ್ಯುನ್ನತ ಸಾಧನೆ

Team Udayavani, Feb 1, 2019, 7:04 AM IST

yella.jpg

ಚನ್ನಪಟ್ಟಣ: ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಅತ್ಯುನ್ನತ ಸಾಧನೆ ಮಾಡುತ್ತಿದ್ದಾರೆ. ಮಹಿಳೆಯರು ಕಾರ್ಯ ನಿರ್ವಹಿಸದ ಕ್ಷೇತ್ರವಿಲ್ಲ. ಹಾಗಾಗಿ ಸಾಧಕ ಮಹಿಳೆಯರನ್ನು ಮಾದರಿಯಾಗಿಸಿಕೊಂಡು, ಇತರರೂ ಆತ್ಮವಿಶ್ವಾಸದಿಂದ ಸ್ವಾವಲಂಬಿಗಳಾ ಗಬೇಕು ಎಂದು ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಜಿ.ಡಿ.ವೀಣಾ ಕುಮಾರಿ ತಿಳಿಸಿದರು.

ಪಟ್ಟಣದ ಶತಮಾನೋತ್ಸವ ಭವನದಲ್ಲಿ ನಡೆದ ಜಿಲ್ಲಾ ಮಹಿಳಾ ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿದ ಅವರು ಮಾತನಾಡಿ, ಮಹಿಳೆ ಸಂಸಾರದ ಜತೆಗೆ ಇಡೀ ದೇಶವನ್ನೇ ಮುನ್ನಡೆಸ ಬಲ್ಲಳು ಎಂಬುದಕ್ಕೆ ಉದಾಹರಣೆಗಳಿವೆ. ಮಹಿಳೆ ಸಾಧನೆ ಮಾಡಬೇಕೆಂದರೆ ಆಕೆಯ ಹಿಂದೆ ಪ್ರೋತ್ಸಾಹ ನೀಡುವ ಹಲವು ಅವಕಾಶ ಗಳಿವೆ. ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡಬೇಕು ಎಂದು ಹೇಳಿದರು.

ಮಹಿಳೆಗೆ ಸೂಕ್ತ ರಕ್ಷಣೆ ಇಲ್ಲ: ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಸರ್ಕಾರ ರೂಪಿಸಿದೆ. ಸಮಾಜದಲ್ಲಿ ಮಹಿಳೆಗೆ ಉನ್ನತ ಸ್ಥಾನ ನೀಡಲಾಗಿದೆ. ಆದರೆ, ಇಂದಿಗೂ ಆಕೆಗೆ ಸೂಕ್ತ ರಕ್ಷಣೆ ಸಿಗದೇ ಭಯದ ಕರಿನೆರಳಿನಲ್ಲಿಯೇ ಬದುಕು ಸಾಗಿಸಬೇಕಾದ ಅನಿವಾರ್ಯತೆ ಇದೆ. ಸಮಾಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ಇಂದಿಗೂ ನಡೆಯುತ್ತಿವೆ. ಇದರ ವಿರುದ್ಧ ಮಹಿಳೆಯರು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದರು.

ವೈಚಾರಿಕತೆ ಬೆಳೆಸಿಕೊಳ್ಳಿ: ರೈತ ಹೋರಾಟ ಗಾರ್ತಿ ಸುನಂದ ಜಯರಾಮ್‌ ಮಾತನಾಡಿ, ಮಹಿಳೆಯರು ವೈಚಾರಿಕತೆ ಬೆಳೆಸಿಕೊಂಡು ಸಬಲೀಕರಣವಾಗಬೇಕು. ಭಯ ಮಹಿಳೆ ಯರನ್ನು ಸಾಧನೆಯಿಂದ ದೂರ ಸರಿಯುವಂತೆ ಮಾಡುತ್ತಿದೆ. ಈ ಭಯ ನಿವಾರಣೆಯಾದರೆ ಮಾತ್ರ ಸಬಲೀಕರಣ ಸಾಧ್ಯವಾ ಗುತ್ತದೆ. ಈ ಕೆಲಸವನ್ನು ಸರ್ಕಾರಗಳು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು ಎಂದರು.

ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ: ಮಹಿಳೆಯರ ಸಬಲೀಕರಣದ ಬಗ್ಗೆ ಕಾನೂನಾತ್ಮಕವಾಗಿ ಯಾವುದೇ ನಿರ್ಧಾರ ಕೈಗೊಳ್ಳಬೇಕಾದರೂ ಶಾಸನ ಸಭೆಗಳಲ್ಲಿ ಅಗತ್ಯವಿರುವ ಮಹಿಳೆಯರ ಸಂಖ್ಯೆ ಇಲ್ಲ. ಮಹಿಳಾ ಪ್ರತಿನಿಧಿಗಳ ಸಂಖ್ಯೆ ಕಡಿಮೆ ಇದೆ. ಇದು ಸರಿಯಾದರೆ ಸಮಾಜದಲ್ಲಿ ಮಹಿಳೆಯರು ಪುರುಷರಿಗೆ ಸಮಾನವಾಗಿ ಸಾಧನೆ ಗೈಯಬಲ್ಲರು, ಶೇ.50ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲು ಆಡಳಿತ ನಡೆಸುವವರು ಮುಂದಾಗಬೇಕು ಎಂದರು.

ದೇಶ ಅಭಿವೃದ್ಧಿಗೆ ಮುಂದಾಗಿ: ಹೋರಾಟಗಾರ್ತಿ ಅನುಸೂಯಮ್ಮ ಮಾತನಾಡಿ, ಯುವಕರು ಸ್ವಾರ್ಥ ಮನೋಭಾವವನ್ನು ಬದಿಗೊತ್ತಿ ದೇಶದ ಅಭಿವೃದ್ಧಿಗೆ ಮುಂದಾಗಬೇಕು. ಭಯ ಇರುವ ತನಕ ದೇಶದಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ. ಮಹಿಳೆಯರು ಎಲ್ಲವನ್ನೂ ಎದುರಿಸಿ ಸಮಾಜದ ಸುಸ್ಥಿತಿಗೆ ದುಡಿಯುವ ಜತೆಗೆ ಅಭಿವೃದ್ಧಿಯಾಗಬೇಕು ಎಂದರು.

ಕಾರ್ಯಕ್ರಮ ಉತ್ತಮ ಬೆಳವಣಿಗೆ: ಜಿಪಂ ಸದಸ್ಯೆ ಸುಗುಣ ಮಾತನಾಡಿ, ಜಿಲ್ಲೆಯಲ್ಲಿ ಮೊದಲ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಹಿಳಾ ಸಾಂಸ್ಕೃತಿಕ ಉತ್ಸವದ ಮೂಲಕ ಜಿಲ್ಲೆಯಲ್ಲಿ ಸಾಧನೆ ಮಾಡಿರುವ ಮಹಿಳೆಯರು, ಕಲಾವಿದರನ್ನು ಒಂದೆಡೆ ಸೇರಿಸಿ ಹಬ್ಬದಂತೆ ಕಾರ್ಯಕ್ರಮ ರೂಪಿಸಿ ರುವುದು ಉತ್ತಮ ಬೆಳವಣಿಗೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಕೊಲ್ಲಾಪುರದ ಮಹಾಲಕ್ಷ್ಮೀ ದೇವಾಲಯದ ಆವರಣದಿಂದ ಜಾನಪದ ಕಲಾ ತಂಡಗಳಿಗೆ ಚಾಲನೆ ನೀಡಲಾಯಿತು. ಅಂಚೆ ಕಚೇರಿ ರಸ್ತೆಯ ಮೂಲಕ ಶತಮಾನೋತ್ಸವ ಭವನದವರೆಗೆ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ಹಲವು ಕಲಾ ತಂಡಗಳು ಪ್ರದರ್ಶನ ನೀಡಿದವು, ವಿಚಾರ ಗೋಷ್ಠಿ, ಕವಿಗೋಷ್ಠಿಗಳು ನಡೆಯಿತು. ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.

ಮಾಗಡಿ ಕಸಾಪ ಅಧ್ಯಕ್ಷೆ ಕಲ್ಪನಾ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಕೆ.ಟಿ.ಲಕ್ಷ್ಮಮ್ಮ, ಟೆಕ್ಕೀಸ್‌ ಟೀಂ ಅಧ್ಯಕ್ಷೆ ನವ್ಯಶ್ರೀ ಆರ್‌., ಟಿಎಪಿಸಿಎಂಎಸ್‌ ಅಧ್ಯಕ್ಷೆ ವನಜ, ಸುಮಂಗಲ, ಕವಿತಾ ರಾವ್‌, ಮಹಿಳಾ ಕಾಂಗ್ರೆಸ್‌ ಉಪಾಧ್ಯಕ್ಷೆ ಕಾವೇರಮ್ಮ, ಮುಖಂಡರಾದ ಜಯಮ್ಮ, ಪಾರ್ವತಮ್ಮ, ಸಾವಿತ್ರಿ ರಾವ್‌, ರಾಧಿಕಾ ರವಿಕುಮಾರಗೌಡ, ರೇಖಾ ಉಮಾಶಂಕರ್‌, ಗೀತಾ ವೆಂಕಟೇಶ್‌, ಶಾರದಾ ನಾಗೇಶ್‌, ವಿಮಲಾ ಯೋಗ ಹಾಜರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.