ಮಾಗಡಿಯಲ್ಲಿ ಮಳೆಗೆ ಕಂಗೊಳಿಸುತ್ತಿದೆ ರಾಗಿ ಬೆಳೆ

Team Udayavani, Sep 30, 2019, 4:33 PM IST

ಮಾಗಡಿ: ತಾಲೂಕಿನಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಉತ್ತರಾ ಮಳೆಗೆ ರಾಗಿ ಬೆಳೆ ಹಸಿರಿನಿಂದ ಕಂಗೊಳಿಸುತ್ತಿದೆ. ನಾಡಪ್ರಭು ಕೆಂಪೇಗೌಡ ತವರೂರು ಮಾಗಡಿಗೆ ಅರೆ ಮಲೆನಾಡಿನಂತೆ ಜೀವ ಕಳೆ ಬಂದಿದೆ. ಹೀಗಾಗಿ ರೈತರಲ್ಲಿ ಸಂತಸ ಮೂಡಿದೆ.

ಮಾಗಡಿ ತಾಲೂಕಿನ ಕುದೂರು, ತಿಪ್ಪಸಂದ್ರ, ಸೋಲೂರು, ಮಾಡಬಾಳ್‌ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಮಾಡಿದ್ದ ರಾಗಿ, ಭತ್ತ, ತೊಗರಿ, ಅವರೆ ಕಾಯಿಗಿಡಗಳು ಹಸಿರಿನಿಂದ ಕೂಡಿದೆ. ಉತ್ತರಾ ಮಳೆಗೆ ರಾಗಿ ಹೊಲದ ಪೈರು ಮುಸುಕು ಹೊಡೆಯಲು ಸಕಾಲವಾಗಿದೆ. ಇದರಿಂದ ಉತ್ತಮವಾಗಿ ಮುಸುಕು ಬರಲಿದೆ.

ಹದ ಮಳೆ ಬಿದ್ದರೆ ಉತ್ತಮ ಫ‌ಸಲು: ಮುಸುಕು ಹೊಡೆದ 15 ದಿನಗಳಲ್ಲಿ ರಾಗಿ ಕಟ್ಟಲು ಪ್ರಾರಂಭಗೊಳ್ಳಲಿದೆ. ಆಗಾಗ್ಗೆ ಹದವಾಗಿ ಮಳೆ ಬಿದ್ದರೆ ಉತ್ತಮ ಫ‌ಸಲ ನಿರೀಕ್ಷಿಸಬಹುದು ಎಂಬ ನಂಬಿಕೆ ರೈತರಲ್ಲಿದೆ. ಅದರಲ್ಲೂ ಪ್ರಮುಖ ರಾಗಿ ಬೆಳೆ ಹೊಲದಲ್ಲಿ ಅವರೆ, ಜೋಳ, ಸಾಸಿವೆ, ತೊಗರಿ ಇವುಗಳನ್ನು ಮಿಶ್ರ ಬೆಳೆಯಾಗಿ ಬೆಳೆಯುವುದು ಸಾಮಾನ್ಯವಾಗಿದೆ.

ಸದ್ಯಕ್ಕೆ ನೀರು, ಮೇವಿಗೆ ಕೊರತೆಯಿಲ್ಲ: ಹದವಾಗಿ ಮಳೆಯಾಗುತ್ತಿರುವುದರಿಂದ ಬದುಗಳಲ್ಲಿ ಹಸಿರು ಮೇವು ಸಹ ಸೊಂಪಾಗಿ ಬರಲಾರಂಭಿಸಿದೆ. ರೈತರು ತಮ್ಮ ರಾಸುಗಳಿಗೆ ಹಸಿರು ಮೇವು ಕೊಡುತ್ತಿದ್ದಾರೆ. ಬಹುತೇಕ ಕೊಳವೆ ಬಾವಿಗಳ ಅಂತರ್ಜಲ ಹೆಚ್ಚಾಗುತ್ತಿದೆ. ಆದರೂ, ಕೆರೆ- ಕಟ್ಟೆ ತುಂಬುವಂತ ಮಳೆಯಾಗಿಲ್ಲ ಎಂಬ ಮಾತು ರೈತರಲ್ಲಿ ಕೇಳಿಬರುತ್ತಿದೆ. ಸದ್ಯಕ್ಕೆ ನೀರು, ಮೇವಿಗೆ ಕೊರತೆಯಿಲ್ಲ. ಹೀಗೆ ಹದವಾಗಿ ಮಳೆಯಾದರೆ ಶೇ.80ರಿಂದ 90ರಷ್ಟು ರಾಗಿ ಬೆಳೆ ರೈತರ ಕೈ ಸೇರಲಿದೆ ಎಂದು ನಿರೀಕ್ಷಿಸಲಾಗಿದೆ.

ರಾಗಿ ಹೊಲದಲ್ಲಿ ಸೊಂಪಾಗಿ ಬೆಳೆ ಬಂದಿದ್ದು, ಜೊತೆಗೆ ಹಸಿರು ಹಲ್ಲು ಚೆನ್ನಾಗಿ ಬೆಳೆದು ನಿಂತಿರುವುದರಿಂದ ಕೀಟ ಬಾಧೆ ಹೆಚ್ಚಾಗುವ ಸಾಧ್ಯತೆಯಿದೆ ಎಂಬ ಆತಂಕ ರೈತರನ್ನು ಕಾಡುತ್ತಿದೆ. ಇದರಿಂದ ಕೃಷಿ ಇಲಾಖೆ ಸೂಚಿಸುವ ಕೀಟನಾಶಗಳನ್ನು ಸಿಂಪಡಿಸಲು ರೈತರು ಮುಂದಾಗಿದ್ದಾರೆ.

ರೈತರಿಗೆ ಕಾಲ ಕಾಲಕ್ಕೆ ಸರ್ಕಾರ ಎಲ್ಲಾ ಸೌಲಭ್ಯವನ್ನು ಪೂರೈಕೆ ಮಾಡುತ್ತಿದೆ. ಆರ್‌ಎಸ್‌ಕೆ ಕೃಷಿ ಅಧಿಕಾರಿಗಳು ಸಹರೈತರಿಗೆ ಸರ್ಕಾರದ ವಿವಿಧ ಯೋಜನೆ ಹಾಗೂ ಕೃಷಿ ಸಂಬಂಧಿಸಿದಂತೆ ಸಮಗ್ರ ಮಾಹಿತಿ ನೀಡುತ್ತಿದ್ದಾರೆ. ಈಗಾಗಲೇ ಕೃಷಿ ಪ್ರಶಸ್ತಿ ಪಡೆಯಲು ಬಹುತೇಕ ರೈತರು ಸ್ಪರ್ಧೆಗೆ ಇಳಿದಿದ್ದಾರೆ. ಪೈಪೋಟಿ ಇರುವೆಡೆ ರೈತರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುತ್ತದೆ.-ಶಿವಶಂಕರ್‌, ಸಹಾಯಕ ಕೃಷಿ ನಿರ್ದೇಶಕ

 

-ತಿರುಮಲೆ ಶ್ರೀನಿವಾಸ್‌

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ