ಕುದೂರಲ್ಲಿ ಪ್ಲಾಸ್ಟಿಕ್ ಸಂಪೂರ್ಣ ಮುಕ್ತವಾಗಿಲ್ಲ

Team Udayavani, Oct 13, 2019, 3:27 PM IST

rn-tdy-1

ಕುದೂರು: ಸರ್ಕಾರ 40 ಮೈಕ್ರಾನ್‌ಗಿಂತ ಕಡಿಮೆ ಇರುವ ತೆಳು ಪ್ಲಾಸ್ಟಿಕನ್ನು ಸಂಪೂರ್ಣ ನಿಷೇಧಿಸಿದ್ದರೂ ಪ್ಲಾಸ್ಟಿಕ್‌ ಬಳಕೆ ಮಾತ್ರ ಕುದೂರಿನಲ್ಲಿ ವ್ಯಾಪಕವಾಗಿ ನಡೆಯುತ್ತಿದೆ.

ಪಟ್ಟಣದಲ್ಲಿ ಬೀದಿಬೀದಿಗಳಲ್ಲಿ ಪ್ಲಾಸ್ಟಿಕ್‌ ಕಸ ಎಲ್ಲೆಂದರಲ್ಲಿ ಬಿದ್ದು, ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದ್ದರೂ, ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನ ಹರಿಸುತ್ತಿಲ್ಲ. ಪ್ಲಾಸ್ಟಿಕ್‌ ಬಳಕೆ ನಿಷೇಧದ ಬಗ್ಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ಪ್ರತಿಜ್ಞಾ ವಿಧಿಯನ್ನು ಕಾಟಾಚಾರಕ್ಕೆ ಬೋಧಿಸಿ ಮರೆತು ಸುಮ್ಮನಾಗಿದ್ದಾರೆ.

ಅಂಗಡಿ ಮಾಲೀಕರ ಸಭೆ ಮಾಡಿಲ್ಲ: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಪ್ಲಾಸ್ಟಿಕ್‌ ನಿಷೇಧ ಕುರಿತಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಕಟ್ಟು ನಿಟ್ಟಾಗಿ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ. ಆದರೂ ಇಲ್ಲಿಯವರೆಗೆ ತಾಲೂಕು ಅಧಿಕಾರಿಗಳು ಪ್ಲಾಸ್ಟಿಕ್‌ ಮಾರಾಟ

ಮಾಡುವ ಅಂಗಡಿಗಳ ಮೇಲೆ ದಾಳಿ ಮಾಡಿಲ್ಲ. ಇನ್ನು ಕುದೂರು ಗ್ರಾಮ ಪಂಚಾಯ್ತಿಯೂ ಕೇವಲ ಕಾಟಾಚಾರಕ್ಕೆ ಎಂಬಂತೆ ಒಂದು ಬಾರಿ ಕರಪತ್ರ ಮಾಡಿ ಹಂಚಿದ್ದನ್ನು ಬಿಟ್ಟರೆ, ಇದುವರಿಗೂ ಅಂಗಡಿ ಮಾಲೀಕರನ್ನು ಕರೆದು ಸಭೆ ಕೂಡ ಮಾಡಿಲ್ಲ. ಗ್ರಾಪಂ ಪಿಡಿಒ ಅಧಿಕಾರಿಗಳು ಅಂಗಡಿ, ಹೋಟೆಲ್‌ ಗಳಲ್ಲಿ ಬಳಕೆಯಾಗುತ್ತಿರುವ ಪ್ಲಾಸ್ಟಿಕ್‌ ವಸ್ತುಗಳನ್ನು ನಿಷೇಧ ಮಾಡಬೇಕು. ಅಂಗಡಿ ಮಾಲೀಕರಿಗೆ ಅರಿವು ಮೂಡಿಸಬೇಕು. ಗ್ರಾಮಗಳಲ್ಲಿ ಜಾಥಾ ಎಂಬ ಆದೇಶಗಳು ಚಾಲ್ತಿಯಿದ್ದರು, ಯಾವುದೇ ಕ್ರಮ ಕೈಗೊಂಡಿಲ್ಲ.

ದಂಡ ವಿಧಿಸಿದ ಪ್ರಕರಣವಿಲ್ಲ: ಪ್ಲಾಸ್ಟಿಕ್‌ ಬಳಕೆ ಮಾಡುವ ಹಾಗೂ ಮಾರಾಟ ಮಡುವವರ ವಿರುದ್ಧ ಪರಿಸರ ಸಂರಕ್ಷಣೆ ಕಾಯ್ದೆ 1986 ಸಕ್ಷನ್‌ 19ರ ಅಡಿ ದಂಡ ವಿಧಿಸುವ ಹಾಗೂ ನ್ಯಾಯಾಲಯದಲ್ಲಿ ದಾವೆ ಹೂಡುವ ಅವಕಾಶಗಳಿದ್ದರು ಕುದೂರು, ತಿಪ್ಪಸಂದ್ರ, ಸೋಲೂರು ಹೋಬಳಿಯ ಯಾವ ಭಾಗದಲ್ಲಿಯೂ ಒಂದು ಕ್ರಮ ಕೂಡ ಕೈಗೊಂಡಿಲ್ಲ.

ಪಟ್ಟಣದಲ್ಲಿ ಹೆಚ್ಚು ಪ್ಲಾಸ್ಟಿಕ್‌ ಬಳಕೆ: ಪಟ್ಟಣದ ದಿನಸಿ ಅಂಗಡಿಗಳು, ಬಟ್ಟೆ ಅಂಗಡಿ, ಹೋಟೆಲ್‌, ಬೇಕರಿಗಳು ಸೇರಿದಂತೆ ವಿವಿಧ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ಬಳಕೆಯಾಗುತ್ತಿದೆ. ಆದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಯಾವ ಕ್ರಮಕೈಗೊಳ್ಳದೇ ಇರುವುದು ಸಾರ್ವಜನಿಕರಲ್ಲಿ ಅನುಮಾನ ಮೂಡಿಸಿದೆ. ಪರಿಸರಕ್ಕೆ ಪ್ಲಾಸ್ಟಿಕ್‌ ಮಾರಕ: ಪ್ಲಾಸ್ಟಿಕ್‌ ಭೂಮಿಯಲ್ಲಿ ದೀರ್ಘ‌ಕಾಲದ ಅವಧಿಯವರೆವಿಗೂ ನಾಶಗೊಳ್ಳದೆ ಉಳಿದು ನೀರು ಇಂಗುವುದನ್ನು ತಡೆಯುತ್ತದೆ. ಇದರಿಂದ ಅಂತರ್ಜಲ ಮಟ್ಟ ಕುಸಿಯುತ್ತದೆ. ಮಣ್ಣಿನ ಫಲವತ್ತತೆಯನ್ನು ಪ್ಲಾಸ್ಟಿಕ್‌ ಕಡಿಮೆ ಮಾಡುತ್ತದೆ. ಪ್ರಾಣಿ, ಪಕ್ಷಿಗಳ ಗಂಟಲಿಗೆ ಗಾಳವಾಗಿ ಪರಿಣಮಿಸುತ್ತದೆ. ಅಲ್ಲದೆ, ಗಿಡಮರಗಳು ನಾಶವಾಗುವ ಮೂಲಕ ಪರಿಸರಕ್ಕೆ ಮಾರಕವಾಗುತ್ತದೆ. ಅದರಿಂದ ಸ್ವತ್ಛ ಹಾಗೂ ನಿರ್ಮಲ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ಸಹಕರಿಸಬೇಕು.

ಆರೋಗ್ಯದ ಮೇಲೆ ದುಷ್ಟಪರಿಣಾಮ: ಪ್ಲಾಸ್ಟಿಕ್‌ ಮಾನವನ ದೇಹಕ್ಕೆ ನಾನಾ ಆಯಾಮಗಳಲ್ಲಿ ಸೇರಿ ಮಾರಕ ರೋಗಗಳಿಗೆ ಕಾರಣವಾಗುತ್ತದೆ. ನರಸಂಬಂಧಿ ಸಮಸ್ಯೆ, ಅಸ್ತಮ, ಹೃದಯ ಕಾಯಿಲೆ, ಕೂದಲು ಉದುರುವುದು, ಚರ್ಮದ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯದ ಸಮಸ್ಯೆಗಳು ತಲೆ ದೂರುತ್ತದೆ. ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸುಡುವುದರಿಂದ ವಿಷ ಅನಿಲ ಬಿಡುಗಡೆಯಾಗುತ್ತದೆ. ಇದು ಅಪಾಯಕಾರಿ.

ಪ್ಲಾಸ್ಟಿಕ್‌ ಹಾವಳಿ ತಡೆಗೆ ನಿರ್ಲಕ್ಷ್ಯ: ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಟ್ಟಣದ ಬೀದಿಗಳಲ್ಲಿ ಪ್ಲಾಸ್ಟಿಕ್‌ ಹಾವಳಿ ಹೆಚ್ಚಾಗಿದೆ. ಪ್ಲಾಸ್ಟಿಕ್‌ ತ್ಯಜ್ಯ ಮತ್ತು ನಿರ್ವಹಣೆ ಬಗ್ಗೆ ವ್ಯಾಪಾರಸ್ಥರಲ್ಲಿ ಮತ್ತು ಸಾರ್ವಜನಕರಲ್ಲಿ ಅರಿವು ಮೂಡಿಸದೇ ಇರುವುದರಿಂದ ಅನಾಹುತಕ್ಕೆ ಕಾರಣವಾಗಲಿದೆ.

-ಕೆ.ಎಸ್‌.ಮಂಜುನಾಥ್‌ ಕುದೂರು

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುವೆ: ಸಿ.ಪಿ ಯೋಗೇಶ್ವರ್

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುತ್ತೇನೆ: ಸಿ.ಪಿ ಯೋಗೇಶ್ವರ್

10

Magadi: ಅಂತರ್ಜಲ ಕುಸಿತ; ಒಣಗುತ್ತಿವೆ ಬೆಳೆಗಳು

9

ಬೊಂಬೆನಗರಿಯಲ್ಲಿ ಕಾಮನಹಬ್ಬದ ರಂಗು!

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

ಈ ಬಾರಿಯ ಚುನಾವಣೆ ಧರ್ಮಯುದ್ಧ: ಬಿಜೆಪಿ ಅಭ್ಯರ್ಥಿ ಡಾ| ಸಿ.ಎನ್‌.ಮಂಜುನಾಥ್‌

ಈ ಬಾರಿಯ ಚುನಾವಣೆ ಧರ್ಮಯುದ್ಧ: ಬಿಜೆಪಿ ಅಭ್ಯರ್ಥಿ ಡಾ| ಸಿ.ಎನ್‌.ಮಂಜುನಾಥ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.