ಭ್ರಷ್ಟಾಚಾರದ ವಿರುದ್ಧ ಸಾರ್ವಜನಿಕರ ದೂರು

ಕುಂದು ಕೊರತೆ ಸಭೆಯಲ್ಲಿ ಸಮಸ್ಯೆಗಳ ದೂರು ದಾಖಲು

Team Udayavani, Jul 19, 2019, 1:27 PM IST

ಚನ್ನಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಮನಗರ ಜಿಲ್ಲಾ ಲೋಕಾಯುಕ್ತ ಎಸ್‌ಪಿ ಅಂಜಲಿ ಸಾರ್ವಜನಿಕರಿಂದ ದೂರು ಹಾಗೂ ಕುಂದು ಕೊರತೆ ಆಲಿಸಿದರು.

ಚನ್ನಪಟ್ಟಣ: ತಾಲೂಕು ಕಚೇರಿ ಸಭಾಂಗಣದಲ್ಲಿ ರಾಮನಗರ ಜಿಲ್ಲಾ ಲೋಕಾಯುಕ್ತ ಅಧೀಕ್ಷಕರು ಸಾರ್ವಜನಿಕರಿಂದ ದೂರು ಹಾಗೂ ಕುಂದು ಕೊರತೆ ಆಲಿಸಿದರು.

ಸಭೆಯಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿಕೊಡಲು ಅಧಿಕಾರಿಗಳ ವಿಳಂಬ, ಸಾರ್ವಜನಿಕ ಸ್ಥಳಗಳ ಒತ್ತುವರಿ, ಕೆರೆ ಒತ್ತುವರಿ, ಕಂದಾಯ ಇಲಾಖೆಯಲ್ಲಿ ಜಮೀನಿಗೆ ಸಂಬಂಧಪಟ್ಟ ದಾಖಲೆಗಳನ್ನು ಮಾಡಿಕೊಡಲು ನಿಧಾನಗತಿ, ಭ್ರಷ್ಟಾಚಾರ ಹೀಗೆ ಹಲವು ವಿಚಾರಗಳಿಗೆ ಸಂಬಂಧಪಟ್ಟ ದೂರು ದಾಖಲಿಸಿದರು.

ಪ್ರತ್ಯೇಕ ಸಮಾಲೋಚನೆ: ಪ್ರತಿಯೊಬ್ಬ ಅರ್ಜಿದಾರರೊಂದಿಗೆ ಪ್ರತ್ಯೇಕವಾಗಿ ಸಮಾಲೋಚಿಸಿದ ನಂತರ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಂದ ಸ್ಥಳದಲ್ಲೇ ವಿವರಣೆ ಪಡೆದ ಜಿಲ್ಲಾ ಲೋಕಾಯುಕ್ತ ಎಸ್‌ಪಿ ಅಂಜಲಿ ಅವರು, ತನಿಖೆ ನಡೆಸಲು ಅವಶ್ಯವಿರುವ ಅರ್ಜಿಗಳನ್ನು ಲೋಕಾಯುಕ್ತರ ಅನುಮತಿ ಪಡೆದು ತನಿಖೆ ನಡೆಸಲಾಗುವುದು. ಹಾಗೆಯೇ ಅಗತ್ಯವಿರುವ ಎಲ್ಲಾ ದಾಖಲಾತಿಗಳನ್ನು ಸಲ್ಲಿಸುವಂತೆ ಅರ್ಜಿದಾರರಿಗೆ ತಿಳಿಸಿದರು.

ಕೆರೆ ಒತ್ತುವರಿ ವಿರುದ್ಧ ದೂರು: ಪಟ್ಟಣದ ಶೆಟ್ಟಿಹಳ್ಳಿ ಕೆರೆ ಒತ್ತುವರಿಯಾಗುತ್ತಿರುವ ಬಗ್ಗೆ ವಕೀಲ ಸುರೇಶ್‌ ಲೋಕಾಯುಕ್ತರಿಗೆ ದೂರು ನೀಡಿದರು. ಕೆರೆಯನ್ನು ವ್ಯವಸ್ಥಿತವಾಗಿ ಮುಚ್ಚುವ ಕೆಲಸ ಆಗುತ್ತಿದ್ದು, ಇದನ್ನು ತಡೆಯಲು ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಿಲ್ಲ. ನಗರಸಭೆ, ಸಣ್ಣ ನೀರಾವರಿ ಇಲಾಖೆ, ಜಿಪಂಗೆ ಅರ್ಜಿ ಸಲ್ಲಿಸಿದರೂ ಯಾರೂ ಕ್ರಮವಹಿಸಿಲ್ಲ. ಹೀಗಾಗಿ ಕೆರೆ ಅವನತಿಯ ಹಂತಕ್ಕೆ ಹೋಗುತ್ತಿದೆ. ಇದನ್ನು ಉಳಿಸಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಅಧಿಕಾರಿಗಳಿಗೆ ಮಾಹಿತಿ ಇಲ್ಲ: ಸಭೆಯಲ್ಲಿ ನಗರಸಭೆ ಅಧಿಕಾರಿಗಳು ಪಟ್ಟಣ ವ್ಯಾಪ್ತಿಯಲ್ಲಿದ್ದೂ ಕೆರೆ ಸಣ್ಣ ನೀರಾವರಿ ಇಲಾಖೆಗೆ ಬರುತ್ತದೆ ಎಂದರೆ, ಸಣ್ಣ ನೀರಾವರಿ ಇಲಾಖೆಯವರು ಜಿಪಂ ವ್ಯಾಪ್ತಿಗೆ ಬರುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಅಧಿಕಾರಿಗಳಿಗೆ ಈ ಕೆರೆ ಯಾರಿಗೆ ಸೇರುತ್ತದೆಂಬ ಮಾಹಿತಿ ಇಲ್ಲ. ಕೆರೆ ಸುಮಾರು 60 ಎಕರೆ ಪ್ರದೇಶದಲ್ಲಿತ್ತು ಎಂದು ಹಿಂದೆ ದಾಖಲೆಗಳಲ್ಲಿದೆ. ಈಗ ಸುತ್ತಲೂ ಒತ್ತುವರಿ ಮಾಡಿಕೊಂಡು ಮುಚ್ಚಿರುವುದರಿಂದ ಮುಂದಿನ ದಿನಗಳಲ್ಲಿ ಕೆರೆ ಉಳಿಯುವುದಿಲ್ಲ ಎನ್ನುವ ಆತಂಕ ಎದುರಾಗಿದೆ. ಈ ಬಗ್ಗೆ ತನಿಖೆ ನಡೆಸಿ, ಒತ್ತುವರಿಯನ್ನು ತೆರವು ಮಾಡಿ ಕೆರೆಯನ್ನು ಉಳಿಸಬೇಕು ಎಂದು ಕೋರಿದರು.

ಪ್ರತಿಕ್ರಿಯಿಸಿದ ಲೋಕಾಯುಕ್ತ ಎಸ್‌ಪಿ ಅಂಜಲಿ ಅವರು, ಈ ವಿಷಯವನ್ನು ಲೋಕಾಯುಕ್ತರ ಗಮನಕ್ಕೆ ತಂದು, ತನಿಖೆ ನಡೆಸಿ ಕ್ರಮ ವಹಿಸಲಾಗುವುದು. ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಸುರೇಶ್‌ಗೆ ಸೂಚಿಸಿದರು.

ಕಲಾವಿದರಿಗೆ ವಂಚನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಕೆಲವೇ ಕಲಾವಿದರಿಗೆ ಸರ್ಕಾರದ ಅನುದಾನ ನೀಡುವ ಮೂಲಕ ವಂಚನೆ ಮಾಡಿದ್ದಾರೆ. ಒಬ್ಬ ಕಲಾವಿದನಿಗೆ 10ರಿಂದ 15 ಕಾರ್ಯಕ್ರಮಗಳಲ್ಲಿ ಅವಕಾಶ ನೀಡಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಇದರಿಂದ ತಾಲೂಕಿನ ನೂರಾರು ಕಲಾವಿದರಿಗೆ ಅನ್ಯಾಯವಾಗಿದೆ. ಸಮುದಾಯ ಭವನ ನಿರ್ಮಿಸಿಕೊಳ್ಳಲು ಸರ್ಕಾರ ನೀಡಿರುವ ಅನುದಾನ ಬಳಸಿಕೊಳ್ಳಲಾಗದಂತೆ ವ್ಯವಸ್ಥಿತವಾಗಿ ಇತರ ಕಲಾವಿದರನ್ನು ಎತ್ತಿಕಟ್ಟಿ ಅನುದಾನ ತಡೆಹಿಡಿದಿದ್ದಾರೆ. ಹೀಗಾಗಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ದೂರು ನೀಡಿದರು.

ಕ್ರಮ ಕೈಗೊಳ್ಳುವ ಭರವಸೆ: ದೂರು ಪಡೆದ ಲೋಕಾಯುಕ್ತ ಅಧಿಕಾರಿಗಳು, ಈ ಬಗ್ಗೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಸಭೆಯಲ್ಲಿ ಜಮೀನಿಗೆ ಸಂಬಂಧಪಟ್ಟ ಕೆಲಸಗಳನ್ನು ಮಾಡಿಕೊಡದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧವೂ ರೈತರು ದೂರು ಸಲ್ಲಿಸಿದರು. ಸಭೆಯಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಂದ ವಿವರಣೆ ಪಡೆದು, ಸಮಸ್ಯೆ ಸರಿಪಡಿಸುವಂತೆ ಸೂಚಿಸಲಾಯಿತು.

ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್‌ ಇಲಾಖೆ, ಗ್ರಾಮ ಪಂಚಾಯ್ತಿ ಹಾಗೂ ನಗರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

  • ಚನ್ನಪಟ್ಟಣ: ಐದು ವರ್ಷ ದೊಳಗಿನ ಮಕ್ಕಳಿಗೆ ಉಚಿತವಾಗಿ ಪಲ್ಸ್‌ ಪೋಲಿಯೊ ಹನಿ ಹಾಕಿಸುವ ಮೂಲಕ ಶಾಶ್ವತ ಅಂಗವಿಕಲತೆ ಯಿಂದ ಪಾರು ಮಾಡಬೇಕು ಎಂದು ನರ್ಸರಿ ಟೀಚರ್ ಟ್ರೆçನಿಂಗ್‌...

  • ರಾಮನಗರ: ಜನರ ಅನುಕೂಲಕ್ಕಾಗಿಯೇ ಕಾನೂನು ಇರುವುದು ಹೀಗಾಗಿ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಹೆಲ್ಮೆಟ್‌ ಧರಿಸುವುದು ಕಡ್ಡಾಯ ಎಂಬ ಕಾನೂನು ಜನತೆ ಪಾಲಿಸಬೇಕು...

  • ರಾಮನಗರ: ಬೆಂಗಳೂರು ದಿಂಡಿಗಲ್‌ ರಾಷ್ಟ್ರೀಯ ಹೆದ್ಧಾರಿ 209 ರಲ್ಲಿ ಅಭಿವೃದ್ಧಿ ಕಾಮಗಾರಿ ಕಳೆದ ಕೆಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದು, ರಸ್ತೆ ನಿರ್ಮಾಣ ಸಂಸ್ಥೆಯ...

  • ರಾಮನಗರ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅನಾಹುತ ಸಂಭವಿಸಿದರೆ, ಅದರ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಸಜ್ಜಾಗುತ್ತಿದೆ. ಜಿಲ್ಲೆಯಲ್ಲಿ...

  • ‌ಕುದೂರು: ಆಧ್ಯಾತ್ಮಿಕ ಚೇತನ ಸ್ವಾಮಿ ವಿವೇಕಾನಂದರಿಂದ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿ ವಿಶ್ವದಲ್ಲಿ ಭಾರತದ ಕೀರ್ತಿ ಪಸರಿಸಿತುಎಂದು...

ಹೊಸ ಸೇರ್ಪಡೆ