50ನೇ ದಿನಕ್ಕೆ ಕಾಲಿಟ್ಟ ಟೊಯೋಟಾ ಮುಷ್ಕರ


Team Udayavani, Dec 29, 2020, 2:35 PM IST

50ನೇ ದಿನಕ್ಕೆ ಕಾಲಿಟ್ಟ ಟೊಯೋಟಾ ಮುಷ್ಕರ

ರಾಮನಗರ: ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್‌ಕಂಪನಿಯ ಕಾರ್ಮಿಕರ ಮುಷ್ಕರ ಸೋಮವಾರ 50ನೇ ದಿನಕ್ಕೆ ಕಾಲಿಟ್ಟಿತು. ಇದರ ಅಂಗವಾಗಿಹಾಗೂ ಈ ಹಿಂದೆ ಅಪಘಾತದಲ್ಲಿ ಮೃತಪಟ್ಟ ತಮ್ಮ ಸಹೋದ್ಯೋಗಿಗಳ ಸ್ಮರಣಾರ್ಥ ಕಾರ್ಮಿಕರು ರಕ್ತದಾನ ಚಳವಳಿ ನಡೆಸಿದರು.

ಗೌರವಯುತ ಬದುಕಿಗಾಗಿ ಹೋರಾಟ ಎಂಬ ಘೋಷಣೆಯಡಿಯಲ್ಲಿ 50 ದಿನಗಳಿಂದ ಟಿಕೆಎಂ ಆಡಳಿತದ ವಿರುದ್ಧ ಮುಷ್ಕರ ಹೂಡಿರುವ ಕಾರ್ಮಿಕರು ರಾಜಭವನ ಚಲೋ, ಛತ್ರಿ ಚಳವಳಿ, ವಿಧಾನಸೌಧ ಚಲೋ, ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ, ಉಪವಾಸ ಸತ್ಯಾಗ್ರಹ, ಮಾನವ ಸರಪಳಿ ರಚನೆ ಹೀಗೆ ವಿವಿಧ ಹೋರಾಟಗಳನ್ನು ನಡೆಸಿದ್ದಾರೆ. 50ನೇ ದಿನದ ಹೋರಾಟದ ಅಂಗವಾಗಿ ರಕ್ತದಾನಚಳವಳಿ ಮೂಲಕ ರಾಷ್ಟ್ರದ ಗಮನ ಸೆಳೆಯುವ ಪ್ರಯತ್ನ ನಡೆಸಿದ್ದಾರೆ.

ಶೌಚಕ್ಕೆ ಹೋಗಲು ಸಹ ನಿರ್ಬಂಧ, ಮಿಲಿ ಸೆಕೆಂಡುಗಳ ಲೆಕ್ಕಾಚಾರ ಹೀಗೆ ಹೆಜ್ಜೆ, ಹೆಜ್ಜೆಗೂ ಕಿರುಕುಳ ಕಾರ್ಮಿಕರಿಗಾಗುತ್ತಿದೆ ಎಂದು ಕಾರ್ಮಿಕರು ಬೇಸರ ವ್ಯಕ್ತಪಡಿಸಿದರು. ಪದೇ ಪದೆ ಮನವಿಮಾಡಿದ್ದರೂ, ಆಡಳಿತ ಸುಧಾರಿಸಿಕೊಳ್ಳಲಿಲ್ಲ. ಪ್ರಶ್ನಿ ಸಿದವರನೆಲ್ಲ ಸೇವೆಯಿಂದ ತೆಗೆದುಹಾಕುತ್ತಿದ್ದಾರೆ ಎಂದು ದೂರಿದರು.

2016ರ ಜನವರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ತಮ್ಮ 7 ಮಂದಿ ಸಹೋದ್ಯೋಗಿಗಳು ಮೃತ ಪಟ್ಟಿದ್ದರು. ಅವರ ಸ್ಮರಣೆಯ ಅಂಗವಾಗಿ ಹಾಗೂ 50ನೇ ದಿನದ ಮುಷ್ಕರದ ಅಂಗವಾಗಿ ರಕ್ತದಾನಚಳವಳಿಯನ್ನು ಹಮ್ಮಿಕೊಂಡಿರುವುದಾಗಿ ಕಾರ್ಮಿಕರ ಸಂಘದ ಜಂಟಿ ಕಾರ್ಯದರ್ಶಿ ಬಸವರಾಜ್‌ ತಿಳಿಸಿದರು.

ಸುಮಾರು 400ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು. ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತ ನಿಧಿ ಮತ್ತು ರಾಮನಗರದ ಬೆಳ್ಳಿ ರಕ್ತ ನಿಧಿ ರಕ್ತದಾನ ಶಿಬಿರವನ್ನು ನಡೆಸಿಕೊಟ್ಟರು.

ರಕ್ತದಲ್ಲೇ ಘೋಷಣೆ ಸೃಷ್ಟಿ  :

ಪ್ರಧಾನಿಗಳೇ ಟಿಕೆಎಂನಲ್ಲಿ ನಡೆಯುತ್ತಿರುವ ಕಿರುಕುಳವನ್ನು ತಪ್ಪಿಸಿ, ಟಿಕೆಎಂ ನಿಂದ ಭಾರತವನ್ನು, ಕಾರ್ಮಿಕರನ್ನು ರಕ್ಷಿಸಿ, ಗೌರವಯುತ ಬದುಕಿಗಾಗಿ ಹೋರಾಟ, ರಕ್ತ ಕೊಟ್ಟೇವು ಸ್ವಾಭಿಮಾನ ಬಿಡೆವು ಎಂಬ ಘೋಷಣೆಗಳನ್ನುರಕ್ತದಲ್ಲೇ ಬರೆದು ಕಾರ್ಮಿಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಪ್ರಧಾನ ಮಂತ್ರಿ ಮತ್ತು ರಾಜ್ಯದ ಮುಖ್ಯಮಂತ್ರಿಗಳಿಗೆ ರಕ್ತದಲ್ಲೇ ಬರೆದ ಪತ್ರವನ್ನು ಸಹ ರವಾನಿಸಿದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.