ಅನಿತಾ ವಿರುದ್ಧ ಟ್ರೋಲ್‌: ದಳ ಗರಂ


Team Udayavani, May 16, 2019, 11:58 AM IST

ram-3

ರಾಮನಗರ: ಶಾಸಕಿ ಅನಿತಾ ಎಲ್ಲಿದ್ದೀರಾ? ಅನಿತಕ್ಕ ಎಲ್ಲಿದ್ಯಕ್ಕಾ ಟ್ರೋಲ್ಗೆ ಜೆಡಿಎಸ್‌ ಕಿಡಿಕಾರಿದೆ. ಟ್ರೋಲ್ಗೆ ಕಾರಣ ಬಿಜೆಪಿ ಮುಖಂಡರು, ಅವರಿಂದ ನಾವು ಬುದ್ಧಿ ಹೇಳಿಸಿಕೊಳ್ಳಬೇಕಿಲ್ಲ ಎಂದು ಮುಖಂಡರು ಹರಿಹಾಯ್ದಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಾಲೂಕು ಜೆಡಿಎಸ್‌ ಅಧ್ಯಕ್ಷ ರಾಜಶೇಖರ್‌, ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಕ್ಷೇತ್ರದ ಬಗ್ಗೆ ಕಾಳಜಿ ಇದೆ. ನೀರಿನ ಸಮಸ್ಯೆ ಬಗ್ಗೆಯೂ ಅರಿವಿದೆ. ಕ್ಷೇತ್ರಕ್ಕೆ ಬರದಿದ್ದರು ಅಧಿಕಾರಿಗಳ ಜೊತೆ ನಿರಂತರ ಮೌಖೀಕವಾಗಿ ಸಂಪರ್ಕದಲ್ಲಿದ್ದಾರೆ. ವಸ್ತುಸ್ಥಿತಿ ತಿಳಿದುಕೊಳ್ಳದೆ ಕೇವಲ ಪ್ರಚಾರದ ಗೀಳಿಗಾಗಿ ಶಾಸಕರ ವಿರುದ್ಧ ಅಪಪ್ರಚಾರ ಮಾಡಿದರೆ ತಮ್ಮ ಪಕ್ಷದ ಕಾರ್ಯಕರ್ತರು ಪಾಠ ಕಲಿಸುವುದಾಗಿ ಎಚ್ಚರಿಸಿದ್ದಾರೆ.

ಪರಿಣಾಮ: ಕ್ಷೇತ್ರ ಬೇಕು, ಬೇಡಿಕೆಗಳ ಬಗ್ಗೆ, ಅಭಿವೃದ್ಧಿ ಏನಾಗಬೇಕು, ಕ್ಷೇತ್ರಕ್ಕೆ ಯಾವಾಗ ಬರಬೇಕು ಎಂಬುದು ಶಾಸಕಿ ಅನಿತಾ ಅವರಿಗೆ ತಿಳಿದಿದೆ. ಅದನ್ನು ಬಿಜೆಪಿಯವರಿಂದ ಕೇಳಿ ತಿಳಿದುಕೊಳ್ಳಬೇಕಾಗಿಲ್ಲ. ಅನಿತಾರವರ ಬಗ್ಗೆ ಅಪಪ್ರಚಾರ ಮಾಡುವುದನ್ನು ನಿಲ್ಲಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

ರಾಮನಗರದಲ್ಲಿ ನೀರು ಸರಬರಾಜಿನಲ್ಲಿ ಮೇ ತಿಂಗಳಲ್ಲಿ ವ್ಯತ್ಯಯವಾಗಿದೆ. ವಿದ್ಯುತ್‌ ಕಂಬಗಳನ್ನು ಬದಲಾಯಿಸುತ್ತಿದ್ದರಿಂದ ಕೊಂಚ ಸಮಸ್ಯೆ ಉಂಟಾಗಿತ್ತು. ಆದರೆ, ಈಗ ಸರಿಹೋಗಿದೆ. ಸಮಸ್ಯೆಗಳ ಬಗ್ಗೆ ಶಾಸಕರು ಅಧಿಕಾರಿಗಳಿಗೆ ಅಗತ್ಯ ಸೂಚನೆ, ಸಲಹೆಗಳನ್ನು ಕೊಡುತ್ತಿದ್ದಾರೆ ಎಂದರು.

ಲೇಡಿ ಸಿಎಂ: ನೀರಿನ ಸಮಸ್ಯೆ ಇದ್ದರೆ ಜಲಮಂಡಳಿ ಅಧಿಕಾರಿಗಳನ್ನು ಪ್ರಶ್ನಿಸಲಿ, ಅದು ಬಿಟ್ಟು, ಶಾಸಕರನ್ನು ಗುರಿಯಾಗಿಸುವುದು ಸರಿಯಲ್ಲ. ಅನಿತಾ ಕುಮಾರಸ್ವಾಮಿ ಅವರನ್ನು ‘ಲೇಡಿ ಸಿಎಂ’ ಎಂದು ಅಧಿಕಾರಿಗಳೇ ಕರೆಯುತ್ತಿದ್ದಾರೆ. ರಾಮಗನರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಮಂಚನಬೆಲೆ ನೀರಿನ ಶುದ್ಧೀಕರಣಕ್ಕೆ 3.5 ಕೋಟಿ ರೂ. ಮಂಜೂರಾಗಿದ್ದು, ಕೆಲವೆ ದಿನಗಳಲ್ಲಿ ಟೆಂಡರ್‌ ಕರೆಯಲಾಗುತ್ತದೆ ಎಂದು ತಿಳಿಸಿದರು.

ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಶಾಸಕರ ಕಚೇರಿಗೆ ಅನಿತಾರವರು ಭೇಟಿ ನೀಡುತ್ತಿಲ್ಲ. ಕಚೇರಿಯಲ್ಲಿಯೇ ಕುಳಿತು ಅನಿತಾಕುಮಾರಸ್ವಾಮಿ ಅವರು ಜನರ ಕಷ್ಟಸುಖಗಳನ್ನು ಆಲಿಸಲಿದ್ದಾರೆ ಎಂದು ರಾಜಶೇಖರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್‌ ಮುಖಂಡರಾದ ಪಾಪಣ್ಣ, ರಕ್ಷಿತ್‌ ದೇವೇಗೌಡ ಇದ್ದರು.

‘ಅನಿತಾ ಮೇಡಂ, ಎಲ್ಲಿದ್ದೀರಾ ‘

ರಾಮನಗರ: ರಾಮನಗರ ಕ್ಷೇತ್ರದಿಂದ ಶಾಸಕರಾಗಿ ಗೆದ್ದ ನಂತರ ಒಂದಿಷ್ಟು ಖಾಸಗಿ ಕಾರ್ಯಕ್ರಮಗಳಿಗೆ ಆಗಮಿಸಿದ್ದ ಅವರು ನಂತರ ಬಂದಿದ್ದು ಲೋಕಸಭಾ ಚುನಾವಣಾ ಪ್ರಚಾರಕ್ಕೆ.

ಕ್ಷೇತ್ರದಲ್ಲಿ ಹಲವಾರು ಸಮಸ್ಯೆ ಕಾಡುತ್ತಿದ್ದು, ಅವರು ಈ ಕಡೆ ಮುಖ ಮಾಡುತ್ತಿಲ್ಲ ಎಂದು ರಾಮನಗರ ಕ್ಷೇತ್ರದ ಜನತೆ ಆರೋಪಿಸಿ ‘ಅನಿತಕ್ಕ ಎಲ್ಲಿದ್ಯಕ್ಕ’ ‘ಅನಿತಾ ಮೇಡಂ, ಎಲ್ಲಿದ್ದೀರಾ’ ಎಂಬ ಟ್ರೋಲ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇಷ್ಟು ದಿನ ನಿಖೀಲ್ ಎಲ್ಲಿದ್ದೀಯಪ್ಪಾ ಎಂಬ ಟ್ರೋಲ್ ಸಾಮಾನ್ಯವಾಗಿ ಹರಿದಾಡುತ್ತಿತ್ತು. ಇದೀಗ ರಾಮನಗರ ದಲ್ಲಿ ಅನಿತಾ ಮೇಡಂ ಎಲ್ಲಿದ್ದೀರಾ, ಅನಿತಕ್ಕಾ ಎಲ್ಲಿದ್ಯಾಕ್ಕ ಟ್ರೋಲ್ ಆರಂಭವಾಗಿದೆ.

ಟ್ರೋಲಲ್ಲೇನಿದೆ: ಅನಿತಕ್ಕೆ ಎಲ್ಲಿದ್ಯಕ್ಕ? ಟ್ರೋಲ್ನಲ್ಲಿ ರುದ್ರಣ್ಣ ಮತ್ತು ವಿನೋದ್‌ ಎಂಬ ಇಬ್ಬರು ವ್ಯಕ್ತಿಗಳು ರಾಮನಗರದ ನೀರಿನ ಪರಿಸ್ಥಿತಿಯ ಬಗ್ಗೆ ಮಾತನಾಡಿ ದ್ದಾರೆ. ಮೂರ್‍ನಾಲ್ಕು ದಿನಕ್ಕೆ ಬಿಡುತ್ತಿದ್ದ ಮೋರಿ ನೀರು ಈಗ 15 ದಿನ ಆದ್ರೂ ಬಿಡ್ತಿಲ್ಲ ಎಂದು ಲೇವಡಿಯಾಡಿ ದ್ದಾರೆ. ಅನಿತಕ್ಕ ಎಲ್ಲಿದ್ದೀರ? ಎಂದು ಪ್ರಶ್ನಿಸುವ ಈ ಸಂಭಾಷಣೆ ಇರುವ ವಿಡಿಯೋ ಈಗ ಸಾಮಾಜಿಕ ಜಾಲ ತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣ ದಲ್ಲಿ ಕಾಣಿಸಿಕೊಂಡಿದ್ದೇ ತಡ, ಅದನ್ನು ಜನ ಶೇರ್‌, ಕಾಮೆಂಟ್ ಮಾಡಲಾರಂಭಿ ಸಿದ್ದಾರೆ. 15ದಿನ ಬರದಿದ್ದರೂ ಕೇಳ್ಳೋ ಹಾಗಿಲ್ಲ ಅನಿತಕ್ಕಾ ಎಲ್ಲಿದ್ಯಕ್ಕಾ ? ಎಂಬ ಪ್ರಶ್ನೆ ವಿಡಿಯೋದಲ್ಲಿದೆ.

ಶಾಸಕರಾಗಿ ಗೆದ್ದ ನಂತರ ಖಾಸಗಿ ಕಾರ್ಯಕ್ರಮಗಳು, ಗುದ್ದಲಿ ಪೂಜೆ ಕಾರ್ಯಕ್ರಮಗಳಿಗೆ ಬರುತ್ತಿದ್ದು, ಲೋಕಸಭಾ ಚುನಾವಣೆ ಆರಂಭವಾದ ನಂತರ ಜನರ ಸಮಸ್ಯೆ ಕೇಳಲು ಬರಲೇ ಇಲ್ಲ ಎಂಬ ಮಾತುಗಳು ವ್ಯಕ್ತವಾಗುತ್ತಿವೆ. ಜಿಲ್ಲಾ ಕೇಂದ್ರ ರಾಮನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬೃಹದಾಕಾರ ತಾಳಿದರು ನಾಗರಿಕರು ಯಾರನ್ನು ಪ್ರಶ್ನಿಸುವಂತಿಲ್ಲ ಎಂದು ಹರಿಹಾಯ್ದಿದ್ದಾರೆ.

ಈ ಕ್ಷೇತ್ರದಿಂದ ಶಾಸಕರಾಗಿದ್ದ ಎಚ್.ಡಿ.ಕುಮಾರಸ್ವಾಮಿ ಕೂಡ ಬರುತ್ತಿರಲಿಲ್ಲ. ಅನಿತಾರವರೂ ಇದೇ ಜಾಡು ಹಿಡಿದಿದ್ದಾರೆ ಎಂದು ನಾಗರಿಕರು ದೋಷಿಸಿದ್ದಾರೆ.

ಅಪಪ್ರಚಾರದ ವಿರುದ್ಧ ಅಗತ್ಯ ಕ್ರಮ

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಶಾಸಕಿ ಅನಿತಾಕುಮಾರಸ್ವಾಮಿ ಅವರು ಬೆಂಗಳೂರಿನಿಂದ ಮೈಸೂರಿಗೆ ತೆರಳುವಾಗ ಇಲ್ಲಿನ ಸಮಸ್ಯೆಗಳ ಬಗ್ಗೆ ವಿಚಾರಿಸಿಯೇ ತೆರಳುತ್ತಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಇಂತಹ ವ್ಯಕ್ತಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿದರೆ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಜೆಡಿಎಸ್‌ ಅಧ್ಯಕ್ಷ ರಾಜಶೇಖರ್‌ ಎಚ್ಚರಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.