ಜಿಪಂ ಅಧ್ಯಕ್ಷೆಯಾಗಿ ವೀಣಾ ಕುಮಾರಿ ಅಧಿಕಾರ ಸ್ವೀಕಾರ

Team Udayavani, Sep 4, 2019, 12:07 PM IST

ರಾಮನಗರದಲ್ಲಿ ಜಿಪಂ ಪ್ರಭಾರ ಅಧ್ಯಕ್ಷರಾಗಿ ವೀಣಾ ಕುಮಾರಿ ಅಧಿಕಾರ ಸ್ವೀಕರಿಸಿದರು.

ರಾಮನಗರ: ಜಿಪಂ ಅಧ್ಯಕ್ಷ ಸ್ಥಾನಕ್ಕೆ ಎಂ.ಎನ್‌.ನಾಗರಾಜು ನೀಡಿದ್ದ ರಾಜೀನಾಮೆ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಆದೇಶದಂತೆ ಪ್ರಭಾರ ಅಧ್ಯಕ್ಷರಾಗಿ ವೀಣಾ ಕುಮಾರಿ ಮಂಗಳವಾರ ಅಧಿಕಾರ ವಹಿಸಿಕೊಂಡರು.

ಜಿಪಂ ಉಪ ಕಾರ್ಯದರ್ಶಿ ನೀಡಿದ ಕಡತಕ್ಕ ಸಹಿ ಹಾಕುವುದರ ಮೂಲಕ ಪ್ರಭಾರ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದರು.

ಈ ವೇಳೆ ಮಾತನಾಡಿ, ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅನುಪಸ್ಥಿತಿಯಲ್ಲಿ ಪ್ರಭಾರ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಬೇಕಾಗಿದೆ. ನಿಯಮಾನುಸಾರ ಪ್ರಭಾರ ಅಧ್ಯಕ್ಷೆಯಾಗಿ ಅನಿವಾರ್ಯವಾಗಿ ಅಧಿಕಾರ ಸ್ವೀಕರಿಸಬೇಕಾಗಿದೆ ಎಂದರು.

ಡಿಕೆಶಿ ಮಣಿಸಲು ಅಸಾಧ್ಯ: ಕಾಂಗ್ರೆಸ್‌ ನಾಯಕ ಹಾಗೂ ತಮ್ಮ ಸಹೋದರಂತಿರುವ ಶಿವಕುಮಾರ್‌ರನ್ನು ರಾಜಕೀಯವಾಗಿ ಮಣಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸಾಧ್ಯವಿಲ್ಲ. ಡಿಕೆಶಿ ಶಕ್ತಿ ಕುಂದಿಸಲು ಸಾಧ್ಯವಿಲ್ಲ ಎಂದರು.

ಐಟಿ ಮತ್ತು ಇಡಿ ಇಲಾಖೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ದುರ್ಬಳಕೆ ಮಾಡಿಕೊಂಡು ಉದ್ದೇಶ ಪೂರ್ವಕವಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿವೆ. ಆದರೆ ಡಿಕೆಶಿ ಅವರು, ಎಲ್ಲಾ ವಿಚಾರಣೆಗಳನ್ನು ದಿಟ್ಟತನದಿಂದ ಎದುರಿಸಿ, ನಿರ್ದೋಷಿಯಾಗಿ ಹೊರ ಬರುತ್ತಾರೆ ಎಂದರು. ಪ್ರಭಾರ ಅಧ್ಯಕ್ಷ ಸ್ಥಾನ ಒದಗಿ ಬಂದಿರುವ ಸುಸಂದರ್ಭ ಎಂದು ಬಣ್ಣಿಸಿದ ಅವರು, ಜಿಲ್ಲೆಯಲ್ಲಿ ಮೂಲ ಸೌಕರ್ಯ ಹೆಚ್ಚಿಸುವ ಜೊತಗೆ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುವುದು. ಹಾಗೂ ಹೆಚ್ಚಿನ ಅನುದಾನಕ್ಕೆ ಸರ್ಕಾರಕ್ಕೆ ಮನವಿ ಮಾಡುವುದಾಗಿಯೂ ತಿಳಿಸಿದರು. ಜಿಪಂ ಸದಸ್ಯರಾದ ನಾಗರತ್ನಮ್ಮ, ನಾಜಿಯಾ ಖಾನಂ, ಎಸ್‌ .ನಾಗರತ್ನ, ಸುಗುಣ, ಚಂದ್ರಮ್ಮ ಹಾಜರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ರಾಮನಗರ: ಅಂತರ್ಜಲ ವೃದ್ಧಿಗೆ ರಾಮನಗರ ತಾಲೂಕಿನ ಗ್ರಾಮ ಪಂಚಾಯ್ತಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕಲ್ಯಾಣಿಗಳು, ಗೋಕಟ್ಟೆಗಳನ್ನು ಗುರುತಿಸಿ ಅಭಿವೃದ್ಧಿ ಹಾಗೂ...

  • ರಾಮನಗರ: ಅಂತರ್ಜಲ ಕಾಪಾಡಲು 2016-17ನೇ ಸಾಲಿನಲ್ಲಿ ಸರ್ಕಾರ ನೀಲಗಿರಿ ಮರಗಳನ್ನು ಕಟಾವು ಮಾಡಲು ಆದೇಶ ನೀಡ ಲಾಗಿತ್ತಾದರೂ, ರಾಮನಗರ ಜಿಲ್ಲೆಯಲ್ಲಿ ಈಗಷ್ಟೇ ನೀಲಗಿರಿ...

  • ಚನ್ನಪಟ್ಟಣ: ಪರಿಸರ ನಾಶದಿಂದಾಗುವ ದುಷ್ಪರಿಣಾಮಗಳನ್ನು ಸಮಾಜಕ್ಕೆ ತಿಳಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡ ಬೇಕಾಗಿದೆ ಎಂದು ಮುಖ್ಯ ಶಿಕ್ಷಕ...

  • ಚನ್ನಪಟ್ಟಣ: ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ಲಿಯೋನ್‌ ವಿರುದ್ಧ ಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ ನಡೆಸಿ ಆಕೆಯ ಪ್ರತಿಕೃತಿ...

  • ಕನಕಪುರ: ಹೈಕೋರ್ಟ್‌ ಆದೇಶ ಪಾಲಿಸಿರುವ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡುವುದು ಅಸಂಬದ್ಧ ಎಂದು ಬಿಜೆಪಿ ನಗರ ಅಧ್ಯಕ್ಷ ನಾಗಾನಂದ್‌ ಕಾಂಗ್ರೆಸ್‌ ಕಾರ್ಯಕರ್ತರ...

ಹೊಸ ಸೇರ್ಪಡೆ