ವಿದ್ಯಾಗಮ ನಿರಂತರ ಕಲಿಕಾ ಕಾರ್ಯಕ್ರಮ ಜಾರಿ

ದೇವಾಲಯ ಆವರಣ, ಅರಳಿಕಟ್ಟೆ, ಮನೆ ಜಗುಲಿಯೇ ತಾತ್ಕಾಲಿಕ ಶಾಲೆ! ಮಕ್ಕಳಿಂದ ಉತ್ತಮ ಸ್ಪಂದನೆ

Team Udayavani, Aug 8, 2020, 10:48 AM IST

ವಿದ್ಯಾಗಮ ನಿರಂತರ ಕಲಿಕಾ ಕಾರ್ಯ ಕ್ರಮ ಜಾರಿ

ಸಾಂದರ್ಭಿಕ ಚಿತ್ರ

ರಾಮನಗರ: ಕೋವಿಡ್‌-19 ಸೋಂಕು ಹಿನ್ನೆಲೆಯಲ್ಲಿ 2020-21ನೇ ಶೈಕ್ಷಣಿಕ ಸಾಲಿನ ತರಗತಿಗಳು ಆರಂಭವಾಗಿಲ್ಲ. ಮಕ್ಕಳಿಗೆ ನಿರಂತರ ಕಲಿಕೆಯೂ ಲಭ್ಯವಾಗುತ್ತಿಲ್ಲ. ಶಾಲೆಗಳು ಆರಂಭವಾಗುವವರೆಗೂ ಮಕ್ಕಳನ್ನು ನಿರಂತರ ಕಲಿಕೆಗೆ ಹಚ್ಚುವ ಸಲುವಾಗಿ ಶಿಕ್ಷಣ ಇಲಾಖೆ ಪರ್ಯಾಯ ಮಾರ್ಗವಾಗಿ ವಿದ್ಯಾಗಮ ಕಾರ್ಯಕ್ರಮ ಜಾರಿಗೆ ತಂದಿದೆ. ಜಿಲ್ಲೆಯಲ್ಲಿಯೂ ಈ ಕಾರ್ಯಕ್ರಮ ಜಾರಿಯಾಗಿದ್ದು, ಪೋಷಕರು ಮತ್ತು ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ.

ವಟಾರ ಶಾಲೆ: ಖಾಸಗಿ ಅನುದಾನ ರಹಿತ ಶಾಲೆಗಳು ಆನ್‌ ಲೈನ್‌ ತರಗತಿ, ವಾಟ್ಸಪ್‌ ಮೂಲಕ ತರಗತಿಗಳನ್ನು ನಡೆಸುತ್ತಿವೆ. ಆದರೆ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಈ ವ್ಯವಸ್ಥೆಯಿಂದ ವಂಚಿತರಾಗಿದ್ದಾರೆ. ಹೀಗಾಗಿ ಮಕ್ಕಳಿರುವ ಸ್ಥಳಕ್ಕೆ ಶಿಕ್ಷಕರು ತೆರಳಿ ಪಾಠ ಹೇಳಿಕೊಡುತ್ತಿದ್ದಾರೆ. ವಿಶೇಷವಾಗಿ ಸರ್ಕಾರಿ ಶಾಲೆಗಳು ಹಾಗೂ ಅನುದಾನಿತ ಖಾಸಗಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮದ ಮೂಲಕ ಪಾಠಗಳು ಆರಂಭವಾಗಿವೆ. ನಾಗರಿಕರು ಈ ವ್ಯವಸ್ಥೆಯನ್ನು ವಟಾರ ಶಾಲೆ ಎಂದು ಕರೆಯುತ್ತಿದ್ದಾರೆ. ತಂತ್ರಜ್ಞಾನ ಆಧಾರಿತ ಸಾಧನಗಳು ಇಲ್ಲದೇ ಮಕ್ಕಳ ತರಗತಿ ನಡೆಸುವುದು ಈ ಕಾರ್ಯಕ್ರಮದ ವಿಶೇಷ.

ಹೇಗೆ ನಡೆಯುತ್ತೆ ತರಗತಿಗಳು?: ನಗರ, ಪಟ್ಟಣ, ಗ್ರಾಮಗಳಲ್ಲಿ ಮಾರ್ಗದರ್ಶಿ ಶಿಕ್ಷಕರು ತಮಗೆ ನಿಯೋಜಿತ ಪ್ರದೇಶದ ವಿದ್ಯಾರ್ಥಿಗಳನ್ನು ಅವರ ಮನೆ ಸಮೀಪವೇ ಇರುವ ದೇವಾಲಯಗಳ ಆವರಣ, ಅರಳಿ ಕಟ್ಟೆ, ಮನೆಗಳ ಮುಂದೆ ಇರುವ ಜಗುಲಿ ಹೀಗೆ ಸ್ಥಳಗಳನ್ನು ಗುರುತಿಸಿದ್ದಾರೆ. ಮಕ್ಕಳಿಗೂ ಸುಲಭವಾಗಿ ಬಂದು ಹೋಗುವ ಸ್ಥಳಗಳಿವು. ಇಲ್ಲಿಗೆ ಬರುವ ಮಕ್ಕಳು ಸಾಮಾಜಿಕ ಅಂತರ ಕಾಪಾಡಿಕೊಂಡು ಕೂರಬೇಕಾಗಿದೆ. ಶಿಕ್ಷಕರು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಚಟುವಟಿಕೆಗಳನ್ನು ಕೊಡುತ್ತಾರೆ. ಅಭ್ಯಾಸ ಹಾಳೆಗಳನ್ನು, ರೂಪಣಾತ್ಮಕ ಪ್ರಶ್ನೆ ಪತ್ರಗಳನ್ನು ವಿತರಿಸುತ್ತಿದ್ದಾರೆ. ಮಕ್ಕಳು ಈ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ತಾವು ಬರೆದಿದ್ದನ್ನು ಶಿಕ್ಷಕರಿಗೆ ಒಪ್ಪಿಸುತ್ತಾರೆ. ಶಿಕ್ಷಕರು ಇವುಗಳ ಮೌಲ್ಯಮಾಪನ ಮಾಡುವರು. 1 ರಿಂದ 5ನೇ ತರಗತಿಯ ಮಕ್ಕಳಿಗೆ ಮಾರ್ಗದರ್ಶಿ ಶಿಕ್ಷಕರು ಎಲ್ಲಾ ವಿಷಯಗಳನ್ನು ನಿರ್ವಹಿಸುತ್ತಿದ್ದಾರೆ. 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯಾ ವಿಷಯ ಬೋಧಕರು ನಿರ್ವಹಿಸುತ್ತಿದ್ದಾರೆ.

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ದಿನ ನಿತ್ಯ ಪೂರೈಕೆ ಯಾಗುತ್ತಿದ್ದ ಕ್ಷೀರಭಾಗ್ಯ ಯೋಜನೆಯಡಿ ಹಾಲಿನ ಪುಡಿ, ಬಿಸಿ ಯೂಟ ಕಾರ್ಯಕ್ರಮದಡಿ ದಿನಸಿ ಪದಾರ್ಥಗಳು ಮಕ್ಕಳ ಪೋಷಕರಿಗೆ ತಲುಪುತ್ತಿದೆ.

ಮಕ್ಕಳ ನಿರಂತರ ಕಲಿಕೆಗಾಗಿ ಪೂರಕವಾಗಿ ವಿದ್ಯಾಗಮ ಕಾರ್ಯಕ್ರಮ ಜಾರಿಯಾಗಿದೆ. ಸರ್ಕಾರಿ ಶಾಲೆಗಳ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ. ಮಕ್ಕಳ ಆಸಕ್ತಿಗೆ, ಕಲಿಕೆ ಅಗತ್ಯವನ್ನು ಗಮನಿಸಿ ಶಿಕ್ಷಕರು ಚಟುವಟಿಕೆಗಳನ್ನು ಕೊಡುತ್ತಿದ್ದಾರೆ. ಶಿಕ್ಷಣ ಇಲಾಖೆಯಿಂದಲೇ ಅಗತ್ಯ ಮಾರ್ಗಸೂಚಿಗಳ ಪ್ರಕಾರ ಈ ಕಾರ್ಯಕ್ರಮ ನಡೆಯುತ್ತಿದೆ.  ಮರೀಗೌಡ, ಬಿಇಒ, ರಾಮಗನರ

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.